ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಲು ಸಚಿವ ಶಿವಾನಂದ ಪಾಟೀಲರಿಗೆ ಮನವಿ ಸಲ್ಲಿಕೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 30:ವಿಜಯಪುರ ನಗರದಲ್ಲಿ ಪಿಪಿಪಿ ಮಾದರಿ ವೈದ್ಯಕೀಯ ಕಾಲೇಜು ಬೇಡ. ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪಿಸಬೇಕು ಎಂದು ಹೋರಾಟ ಸಮಿತಿ ಪದಾಧಿಕಾರಿಗಳು ಶನಿವಾರ ಜವಳಿ, ಕಬ್ಬು, ಅಭಿವೃದ್ದಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರಿಗೆ ಮನವಿ ಸಲ್ಲಿಸಿದರು.ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈ ಬಿಡಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೇಜು ಆರಂಭಿಸಲು ಮುಖ್ಯಂತ್ರಿ ಮೇಲೆ…

Read More

ಖಾಸಗಿ ಸಹಭಾಗಿತ್ವದ ವೈದ್ಯಕೀಯ ಕಾಲೇಜು ವಿರೋಧಿಸಿ ಹೋರಾಟ ಸಮಿತಿ ಅಸ್ತಿತ್ವಕ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 28:ಜಿಲ್ಲೆಗೆ ಖಾಸಗಿ ಸಹಭಾಗಿತ್ವದಲ್ಲಿ ಆರಂಭಗೊಳ್ಳಲಿರುವ ವೈದ್ಯಕೀಯ ಮಹಾ ವಿದ್ಯಾಲಯಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಗುರುವಾರ ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲೆಯ ಸಾಹಿತಿಗಳು, ಚಿಂತಕರು, ದಲಿತ ಮತ್ತು ಕನ್ನಡಪರ ಹೋರಾಟಗಾರರು, ಕಾರ್ಮಿಕ, ವಿದ್ಯಾರ್ಥಿ ಯುವಜನ ಮಹಿಳಾ ಸಂಘಟನೆಯ ಮುಖಂಡರುಗಳು ಸಭೆ ಸೇರಿ ಖಾಸಗಿ ಸಹಭಾಗಿತ್ವವನ್ನು ವಿರೋಧಿಸಬೇಕು ಇದರ ವಿರುದ್ದ ಹೋರಾಟ ಮಾಡಬೇಕು ಎಂದು ಒಮ್ಮತದಿಂದ ನಿರ್ಧರಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲೆಯ ವಿವಿಧ ಸಂಘಟನೆಗಳನ್ನೊಳಗೊಂಡ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ, ವಿಜಯಪುರ’ ಸಮಿತಿಯನ್ನು ರಚಿಸಲಾಯಿತು….

Read More

ವಿಜಯಪುರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಎಐಡಿಎಸ್ಒ ವಿರೋಧ

ಸಪ್ತಸಾಗರ ವಾರ್ತೆ ವಿಜಯಪುರ,ಆ. 26:ನಗರದಲ್ಲಿ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಪಾಪನಿಗೆ ಸರ್ಕಾರ ನಿರ್ಧರಿಸಿರುವುದನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ.ಕಳೆದ 15 ವರ್ಷಗಳಿಂದ AIDSO ವಿದ್ಯಾರ್ಥಿ ಸಂಘಟನೆ ವತಿಯಿಂದ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯಾಗಬೇಕೆಂದು ಹೋರಾಟ ನಡೆಸಿಕೊಂಡು ಬಂದಿದೆ., ಜನರ ಹೋರಾಟದ ಫಲವಾಗಿ ಇಂದು ಜಿಲ್ಲೆಯ ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದ್ದು ಸ್ವಾಗತಾರ್ಹ. ಆದರೆ ಇದರಲ್ಲಿ ಖಾಸಗಿ ಸಹಭಾಗಿತ್ವ AIDSO ಸಂಘಟನೆಯು ಒಪ್ಪುವುದಿಲ್ಲ. ಈಗಾಗಲೇ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜುಗಳಿದ್ದು,…

Read More

ಕೋರ್ಟ್ ಮೆಟ್ಟಿಲೇರಿ ಬಿ.ಎಂ. ಪಾಟೀಲರು ಜಿಲ್ಲೆಗೆ ಮೆಡಿಕಲ್ ಕಾಲೇಜ್ ತಂದಿದ್ದಾರೆ- ಖರ್ಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 27:ಬಿ.ಎಂ. ಪಾಟೀಲ್ ಅವರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಶೈಕ್ಷಣಿಕ ಪ್ರಗತಿಗೆ ಶ್ರಮಿಸಿದ್ದಾರೆ. ಸಚಿವ ಎಂ.ಬಿ. ಪಾಟೀಲ್ ಅವರು ಬಿ ಎಲ್ ಡಿ ಇ ಅಧ್ಯಕ್ಷರಾದ ಬಳಿಕ ಹೊಸ ರೂಪ ನೀಡಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಹೇಳಿದರು.ಬಿಎಲ್ಡಿಇ ಸಂಸ್ಥೆ ಕಟ್ಟಿ ಬೆಳೆಸಿದ ಮಹನೀಯರಾದಬಂಥನಾಳ ಸಂಗನಬಸವ ಶ್ರೀಗಳು, ಡಾ ಫ ಗು ಹಳಕಟ್ಟಿ, ಬಂಗಾರಮ್ಮ ಸಜ್ಜನ ಹಾಗೂ ಬಿ ಎಂ ಪಾಟೀಲ್ ಅವರ ಸ್ಮರಣೆಕಾರ್ಯಕ್ರಮದಲ್ಲಿ ಅವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು.ಧಾರವಾಡದ…

Read More