
ನಾಳೆ ವಿಜಯಪುರ- ಬಬಲೇಶ್ವರ ಎರಡು ಬಸ್ಸುಗಳ ಸೇವೆ ಆರಂಭ
ಸಪ್ತಸಾಗರ ವಾರ್ತೆ ವಿಜಯಪುರ, ಆ. 25: ನಾಳೆ ಮಂಗಳವಾರದಿಂದ ವಿಜಯಪುರ- ಬಬಲೇಶ್ವರ ಮತ್ತು ಬಬಲೇಶ್ವರ- ವಿಜಯಪುರ ಮಧ್ಯೆ ಸಾಮಾನ್ಯ ಸಾರಿಗೆ ಎರಡು ಬಸ್ಸುಗಳ ಸೇವೆ ಪ್ರಾರಂಭವಾಗಲಿದೆ.ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರ ಸೂಚನೆ ಮೇರೆಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಪ್ರತಿದಿನ ಸಾರಿಗೆ ಎರಡು ಬಸ್ಸುಗಳನ್ನು ಈ ಮಾರ್ಗದಲ್ಲಿ ಓಡಿಸಲಿದೆ. ಒಂದು ಬಸ್ಸು ವಿಜಯಪುರ- ಖತಿಜಾಪುರ- ಸಾರವಾಡ ಮಾರ್ಗವಾಗಿ ಬಬಲೇಶ್ವರಕ್ಕೆ ಸಂಚರಿಸಿದರೆ ಮತ್ತೊಂದು ಬಸ್ಸು ಬಬಲೇಶ್ವರ- ಸಾರವಾಡ-…