ಸಾಹಿತಿ ಭೈರಪ್ಪ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ಪದ್ಮಭೂಷಣ, ಪದ್ಮಶ್ರೀ ಸೇರಿದಂತೆ ಹಲವು ಗೌರವ, ಪುರಸ್ಕಾರಗಳಿಗೆ ಭಾಜನರಾಗಿದ್ದ ಖ್ಯಾತ ಕಾದಂಬರಿಕಾರ, ನಾಡೋಜ ಎಸ್.ಎಲ್. ಭೈರಪ್ಪ ಅವರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಕಂಬನಿ ಮಿಡಿದಿದ್ದಾರೆ.ಕನ್ನಡ ಸಾಹಿತ್ಯ ಕ್ಷೇತ್ರವನ್ನು ಶ್ರೀಮಂತಗೊಳಿಸಿದ ಮಹನೀಯರಲ್ಲಿ ಒಬ್ಬರಾದ ಎಸ್. ಎಲ್. ಭೈರಪ್ಪ ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ತುಂಬಲಾರದ ಹಾನಿ ಉಂಟಾಗಿದೆ. ಕನ್ನಡ ಸಾರಸ್ವತ ಲೋಕಕ್ಕೆ ಮೊದಲ ಸರಸ್ವತಿ ಸಮ್ಮಾನ್ ಗೌರವ ತಂದು ಕೊಟ್ಟ ಹೆಗ್ಗಳಿಕೆ ಅವರದ್ದು ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.ಭೈರಪ್ಪನವರ…