
ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ ಶಾಸಕ ಯತ್ನಾಳ ವಿರುದ್ಧ ಪ್ರತಿಭಟನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 18:ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಕೊಪ್ಪಳದಲ್ಲಿ ದಲಿತ ಮಹಿಳೆಗೆ ಅವಹೇಳನಕಾರಿ ಹೇಳಿಕೆ ನೀಡಿದ್ದನ್ನು ಖಂಡಿಸಿ ವಿಜಯಪುರ ನಗರ ಬ್ಲಾಕ್ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕ ಹಾಗೂ ಜಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ವತಿಯಿಂದ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.ಇತ್ತೀಚೆಗೆ ಕೊಪ್ಪಳದಲ್ಲಿ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರು ಸಾಮಾನ್ಯ ದಲಿತ ಮಹಿಳೆ ಕೂಡ ಚಾಮುಂಡಿಯ ಮುಡಿಗೆ ಹೂವನ್ನು ಮುಡಿಸಲು ಯೋಗ್ಯರಲ್ಲ. ಸನಾತನ ಧರ್ಮದವರು ಮಾತ್ರ…