ನರೇಗಲ್–ರಟ್ಟಿಹಳ್ಳಿ ಹಿಂದೂ ಕುಟುಂಬಗಳಿಗೆ ₹4.50 ಲಕ್ಷ ಆರ್ಥಿಕ ನೆರವು: ಶಾಸಕ ಬಸನಗೌಡ ಪಾಟೀಲ ಯತ್ನಾಳ್

ಸಪ್ತಸಾಗರ ವಾರ್ತೆ,ಹಾವೇರಿ, ಜು. 9: ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ಪಟ್ಟಣದಲ್ಲಿ ಹತ್ಯೆಯಾದ ಹಿಂದೂ ವ್ಯಾಪಾರಿ ಶಿವಾಜಿರಾವ್ ಬೈರೋಜಿರಾವ್ ಅವರ ಕುಟುಂಬಕ್ಕೆ ಹಾಗೂ ಹಾನಗಲ್ಲ ತಾಲ್ಲೂಕಿನ ನರೇಗಲ್ ಗ್ರಾಮದಲ್ಲಿ ಹಲ್ಲೆಗೊಳಗಾದ ಹಿಂದೂ ಕಾರ್ಯಕರ್ತರ ಮನೆಗಳಿಗೆ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಭೇಟಿ ನೀಡಿ ಒಟ್ಟು ₹4.50 ಲಕ್ಷ ಆರ್ಥಿಕ ನೆರವು ನೀಡಿದರು.ರಟ್ಟಿಹಳ್ಳಿಯಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಶಿವಾಜಿರಾವ್ ಬೈರೋಜಿರಾವ್ ಅವರ ನಿವಾಸಕ್ಕೆ ಭೇಟಿ ನೀಡಿದ ಯತ್ನಾಳ್, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿ ₹2.50 ಲಕ್ಷ ಪರಿಹಾರ…

Read More

ಭೂಮಾಪಕರ ನ್ಯಾಯಯುತ ಬೇಡಿಕೆ ಈಡೇರಿಕೆಗೆ ಶಾಸಕ ಯತ್ನಾಳ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 26:ಭೂ ಮಾಪಕರ ಧರಣಿಯಿಂದ ಜಮೀನು ಸರ್ವೆ ವಿವಾದಗಳು ನಿರ್ಧಾರವಾಗದೆ, ರೈತರು ಸರ್ವೇ ಆಗದ ದಾಖಲಾತಿ ಪಡೆಯದ ಕಾರಣ ಅವರಿಗೆ ಬೆಳೆ ಸಾಲ ಸಿಗುತ್ತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಈ ಹಿಂದೆ ಪ್ರತಿಪಕ್ಷ ನಾಯಕರಾಗಿದ್ದಾಗ ಭೂ ಮಾಪಕರ ಪರ ಧ್ವನಿ ಎತ್ತಿದ್ದರು. ಈಗ ‘ಜಾಣ ಕಿವುಡು’ ಪ್ರದರ್ಶಿಸುತ್ತಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಿಡಿಕಾರಿದ್ದಾರೆ.ಭೂಮಾಪಕರ ಧರಣಿಯಿಂದ ರೈತರಿಗೆ ಬೇಕಾದ ಅಗತ್ಯ ಸೇವೆ ಸಿಗದೇ ಪರದಾಡುತ್ತಿದ್ದು, ಇತ್ತ ಸರ್ಕಾರ ಅವರ ಸಮಸ್ಯೆಗಳನ್ನು ಆಲಿಸಲು ಯಾವುದೇ…

Read More

ಭೀಮಾ ಹಾಗೂ ಕೃಷ್ಣಾ ನದಿಗಳ ನೀರು ಬಳಕೆ ಗೊಂದಲ ನಿವಾರಣೆಗೆ ಮಹಾಕ್ಕೆ ಶಾಸಕರ ನಿಯೋಗ: ಶಾಸಕ ಯಶವಂತರಾಯಗೌಡ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ. 12 :ಭೀಮಾ ಹಾಗೂ ಕೃಷ್ಣಾ ನದಿಗಳ ನೀರು ಬಳಕೆಗೆ ಸಂಬಂಧಿಸಿದಂತೆ ಇರುವ ಗೊಂದಲವನ್ನು ಪರಿಹರಿಸಿಕೊಂಡು ಸೌಹಾರ್ದತೆಯ ಮೂಲಕ ಶಾಶ್ವತ ಪರಿಹಾರ ಕಂಡುಕೊಳ್ಳಲು ವಿಜಯಪುರ, ಬೆಳಗಾವಿ, ಕಲಬುರ್ಗಿ ಜಿಲ್ಲೆಯ ಶಾಸಕರು ಸೇರಿದಂತೆ ಉನ್ನತ ಮಟ್ಟದ ನಿಯೋಗವನ್ನು ಮಹಾರಾಷ್ಟ್ರ ಸರ್ಕಾರವನ್ನು ಭೇಟಿ ಮಾಡುವ ಮಹತ್ವದ ಕಾರ್ಯ ಕೈಗೊಳ್ಳಲಾಗುವುದು ಎಂದು ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವೀಯತೆ ಹಾಗೂ ಸಹೋದರತೆಯ ಭಾವದೊಂದಿಗೆ ಈ ಬಾರಿ ಮಹಾರಾಷ್ಟ್ರ ಸರ್ಕಾರ ಉಜನಿ ಜಲಾಶಯದಿಂದ 16…

Read More

ಪಂಚ ಗ್ಯಾರಂಟಿ ಯೋಜನೆಗಳು ನಾಡಿನ ಜನತೆಗೆ ಆಶಾಕಿರಣ: ನಾಗಠಾಣ ಶಾಸಕ ವಿಠ್ಠಲ ಕಟಕದೊಂಡ ಅಭಿಮತ

ಸಪ್ತಸಾಗರ ವಾರ್ತೆ ,ವಿಜಯಪುರ, ಮೇ.12:ನಮ್ಮ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ನೇರವಾಗಿ ಜನರನ್ನುತಲುಪುತ್ತಿವೆ. ಹಾಗಾಗಿ ಐದು ಗ್ಯಾರಂಟಿ ಯೋಜನೆಗಳು ನಾಡಿನಬಡವರು, ದೀನ-ದುರ್ಬಲರ ಬದುಕಿಗೆ ಆಶಾಕಿರಣವಾಗಿವೆ ಎಂದು ನಾಗಠಾಣಮತಕ್ಷೇತ್ರದ ಶಾಸಕ ವಿಠ್ಠಲ ಕಟಕದೊಂಡಹೇಳಿದರು.ಮಂಗಳವಾರ ನಗರದ ಡಾ.ಬಿ.ಆರ್. ಅಂಬೇಡ್ಕರ ಕ್ರೀಡಾಗಂಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಸಂಯುಕ್ತ ಆಶ್ರಯದಲ್ಲಿ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 32 ಫಲಾನುಭವಿಗಳಿಗೆ ಇಂಧನ ಚಾಲಿತ ತ್ರಿಚಕ್ರವಾಹನ ಕೀ ಹಸ್ತಾಂತರಿಸಿ ಅವರು ಮಾತನಾಡಿದರು.ನಮ್ಮ ಸರ್ಕಾರ ಜನರ ಹಿತದಿಂದ ಇಂತಹ…

Read More

ವಚನಾನಂದ ಶ್ರೀ ಸತ್ಯ ಹರಿಶ್ಚಂದ್ರ ಅಲ್ಲ: ಯತ್ನಾಳ

ಸಪ್ತಸಾಗರ ವಾರ್ತೆ,ವಿಜಯಪುರ, ಏ. 14:ವಚನಾನಂದ ಸ್ವಾಮಿಜಿ ಸತ್ಯ ಹರಿಶ್ಚಂದ್ರ ಅಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ಮಂಗಳವಾರ ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿ, ಹರಿಹರದ ಪಂಚಮಸಾಲಿ ಪೀಠದ ಶ್ರೀ ವಚನಾನಂದ ಸ್ವಾಮೀಜಿ ಉಚ್ಛಾಟನೆ ವಿಚಾರ ಕುರಿತು ಮೇಲಿನಂತೆ ಪ್ರತಿಕ್ರಿಯೆ ನೀಡಿದರು.ನಮ್ಮದೇ ಸರ್ಕಾರ ಇದ್ದರೂ ವಚನಾನಂದ ಸ್ವಾಮಿಗಳ ವಿರುದ್ದ ವಿಧಾನಸಭೆಯಲ್ಲಿ ಮಾತನಾಡಲು ಅವಕಾಶ ನೀಡಲಿಲ್ಲ. ಸ್ಪೀಕರ್ ಗೆ ಹೇಳಿ ಮಾತನಾಡಲು ಅವಕಾಶ ನೀಡಲಿಲ್ಲ ಎಂದರು.ಹರಿಹರ ಹಾಗೂ ಕೂಡಲಸಂಗಲ ಪೀಠಗಳ ಟ್ರಸ್ಟ್ ಗಳು ಜನರ ನಂಬಿಕೆ…

Read More

ಕಲ್ಲು, ಚಪ್ಪಲಿ ಎಸೆದವರನ್ನು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ಜೈಲಿಗಟ್ಟಿ; ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 20:ಬಾಗಲಕೋಟೆಯಲ್ಲಿ ಶಿವಾಜಿ ಭಾವಚಿತ್ರ ಮೆರವಣಿಗೆ ವೇಳೆ ಮುಸಲ್ಮಾನರು ಕಲ್ಲು, ಚಪ್ಪಲಿ ತೂರಿ ಅಶಾಂತಿ ಸೃಷ್ಟಿಸಿರುವುದು ಖಂಡನೀಯ ಎಂದು ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಕಿಡಿಕಾರಿದ್ದಾರೆ.ಮೊಘಲರ ಹುಟ್ಟಡಗಿಸಿದ ವೀರ ಪರಾಕ್ರಮಿ, ಅಪ್ರತಿಮ ವೀರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನೇ ಗುರಿಯಾಗಿಸಿಕೊಂಡು ಮಸೀದಿಗಳಿಂದ ಕಲ್ಲು, ಚಪ್ಪಲಿಗಳನ್ನು ಎಸೆದವರ ಮೇಲೆ ಪೊಲೀಸರು ಗೂಂಡಾ ಕಾಯ್ದೆಯಲ್ಲಿ ಬಂಧಿಸಿ ಜೈಲಿಗಟ್ಟಬೇಕು.ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಸೇರಿದಂತೆ ಈ ಪ್ರಚೋದಿತ ಗಲಭೆಯಲ್ಲಿ ಗಾಯಗೊಂಡವರಿಗೆ ಮಸೀದಿಯ ಆಡಳಿತ ಮಂಡಳಿಯೇ ಜವಾಬ್ದಾರಿ…

Read More

ಶಾಸಕ ಬಸನಗೌಡರಿಗೆ ಶ್ರೀಕೃಷ್ಣಮಠದಿಂದಗೌರವ

ಸಪ್ತಸಾಗರ ವಾರ್ತೆ, ವಿಜಯಪುರ, ಫೆ. 13:ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಅಖಿಲ ಭಾರತ ಮಾಧ್ವ ಮಹಾಮಂಡಳ ವಿದ್ಯಾರ್ಥಿ ನಿಲಯಕ್ಕೆ ತಮ್ಮ ಶಾಸಕ ನಿಧಿಯಿಂದ ರೂ.25 ಲಕ್ಷ ಮಂಜೂರಿ ಮಾಡಿದ್ದನ್ನು ಪರಿಗಣಿಸಿ ನಗರದ ಶ್ರೀಕೃಷ್ಣ-ವಾದಿರಾಜ ಮಠದಿಂದ ಶೇಷವಸ್ತ್ರ ಫಲ ನೀಡಿ ಗೌರವಿಸಲಾಯಿತು.ಶ್ರೀ ಮಠದ ಗೌರವಾಧ್ಯಕ್ಷ ಗೋಪಾಲ ನಾಯಕ ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ಬಸನಗೌಡರು ವಿದ್ಯಾರ್ಥಿ ನಿಲಯ ಮತ್ತು ಶ್ರೀಕೃಷ್ಣ ಮಠಕ್ಕೆ ಅನುದಾನ ನೀಡುತ್ತ ಬಂದಿದ್ದಾರೆ. ಮಠದ ಕಟ್ಟಡಕ್ಕೂ ಅವರು ರೂ.10 ಲಕ್ಷ ದೇಣಿಗೆ ಕೊಟ್ಟಿದ್ದರು….

Read More

ರಾಜ್ಯಪಾಲರಿಗೆ ಅಗೌರವ: ಶಾಸಕರ ಅನರ್ಹಕ್ಕೆ ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 22:ಸಾಂವಿಧಾನಿಕ ಹುದ್ದೆಯಾಗಿರುವ ರಾಜ್ಯಪಾಲರನ್ನು ಅತ್ಯಂತ ಅಗೌರವದಿಂದ ನಡೆದುಕೊಳ್ಳುವ ಮೂಲಕ ಕಾಂಗ್ರೆಸ್ ನಾಯಕರು ಭಾರತೀಯ ಸಂವಿಧಾನ, ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆ ತಂದು ಅತ್ಯಂತ ಬೇಜವಾಬ್ದಾರಿತನದಿಂದ ನಡೆದುಕೊಂಡಿದ್ದಾರೆ. ಕೂಡಲೇ ಈ ಎಲ್ಲ ಸದಸ್ಯರನ್ನು ಅನರ್ಹಗೊಳಿಸಿ ಮುಂದೆ ಅವರು ಚುನಾವಣೆಗೆ ಸ್ಪರ್ಧೆ ಮಾಡದಂತೆ ನಿಷೇಧ ಹೇರಬೇಕು ಎಂದು ಸಂಸದ ರಮೇಶ ಜಿಗಜಿಣಗಿ ಒತ್ತಾಯಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ರಾಜ್ಯಪಾಲ ಥಾವರಚಂದ ಗೆಹ್ಲೋಟ ಅವರು ಸಾಂವಿಧಾನಿಕ ಹುದ್ದೆಯಲ್ಲಿರುವವರು, ಸರ್ಕಾರ ಸಿದ್ಧಪಡಿಸಿದ ಭಾಷಣವನ್ನೇ ಓದಬೇಕು ಎಂಬ…

Read More

ನಾನು ಶಾಸಕನಾದ ಬಳಿಕ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ-ಸಚಿವ ಶಿವಾನಂದ ಪಾಟೀಲ

ಸಪ್ತಸಾಗರ ವಾರ್ತೆ, ನಿಡಗುಂದಿ/ಆಲಮಟ್ಟಿ :ಅಖಂಡ ವಿಜಯಪುರ ಜಿಲ್ಲೆಯ ಜನರು ಭೂಮಿ, ಮನೆ, ಬದುಕು ಕಳೆಕೊಂಡರೂ ಕುಡಿಯಲು ನೀರಿಗೂ ಪರದಾಟ ನಡೆಸಿದ್ದೆವು. ಆದರೆ 2004 ರಲ್ಲಿ ನಾನು ಬಸವನಬಾಗೇವಾಡಿ ಕ್ಷೇತ್ರದಿಂದ ಶಾಸಕನಾದ ಬಳಿಕವೇ ಮುಳವಾಡ ಏತ ನೀರಾವರಿ ಯೋಜನೆಗೆ ಚಾಲನೆ ದೊರಕಿದ್ದು ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ಶನಿವಾರ ನಿಡಗುಂದಿ ತಾಲೂಕಿನ ವಂದಾಲ ಗ್ರಾಮದಲ್ಲಿ ರೈಲ್ವೇ ಸ್ಟೇಷನ್ ವರೆಗಿನ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು,…

Read More