ಸ್ಥಳಾಂತರಗೊಂಡ ಮತದಾರರ ಪತ್ತೆಗೆ ಪಾಲಿಕೆಯ ವಿಶೇಷ ಕಾರ್ಯಾಚರಣೆ
ಸಪ್ತಸಾಗರ ವಾರ್ತೆ,ವಿಜಯಪುರ, ಜು.11: ವಿಜಯಪುರ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಯಾವುದೇ ನೈಜ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಹಾಗೂ ಅನರ್ಹರು ಪಟ್ಟಿಗೆ ಸೇರ್ಪಡೆಯಾಗದಂತೆ ತಡೆಯಲು ಮಹಾನಗರ ಪಾಲಿಕೆ ವಿಶೇಷ ಕಾರ್ಯಾಚರಣೆ ಆರಂಭಿಸಿದೆ.ಮಹಾನಗರ ಪಾಲಿಕೆ ಆಯುಕ್ತರು ಹಾಗೂ ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಗಳು ಈ ಕುರಿತು ಮಾಹಿತಿ ನೀಡಿ, ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಅಂಗವಾಗಿ ಜೂನ್ 30ರಿಂದ ಮನೆ-ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ನಡೆಯುತ್ತಿದ್ದು, ಇದುವರೆಗೆ 2,18,163 ಮತದಾರರಿಗೆ ಯಶಸ್ವಿಯಾಗಿ…


