ಜಮೀನು ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಆರು ಜನರ ಭೀಕರ ಹತ್ಯೆ
ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 30:ಜಮೀನು ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಶುಕ್ರವಾರ ಸಂಜೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಜಿಲ್ಲೆಯ ಚಡಚಣ ತಾಲ್ಲೂಕಿನ ಗೋವಿಂದಪುರ ಗ್ರಾಮದಲ್ಲಿ ಶುಕ್ರವಾರ ಸಂಜೆ ನಡೆದಿದೆ.ಚಂದು ನಿರಾಳೆ(56), ದುಂಡಪ್ಪ ನಿರಾಳೆ(65), ಶಿವಪುತ್ರ ನಿರಾಳೆ(60), ರಾಹುಲ್ ನಿರಾಳೆ(35), ಸಮರ್ಥ ನಿರಾಳೆ(24), ಶಬ್ಬೀರ್ ನದಾಫ್(50) ಕೊಲೆಯಾದವರು.ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಲಕ್ಷ್ಮಣ ನಿಂಬರಗಿ ಸೇರಿದಂತೆ ಇತರ ಪೊಲೀಸ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ….


