ಕನ್ನಡಾಂಬೆಯ ಋಣವನ್ನು ತೀರಿಸೋಣ – ನಾಡೋಜ ಡಾ. ಮಹೇಶ ಜೋಶಿ ಅಭಿಮತ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ.28:ನಾವೆಲ್ಲರೂ ಪವಿತ್ರವಾದ ಈ ಕನ್ನಡ ಮಣ್ಣಿನ ನೆಲದಲ್ಲಿ ಜನಿಸಿದ್ದು, ಕನ್ನಡ ನಾಡು ನುಡಿಯ ಬಗ್ಗೆ ಅಭಿಮಾನವನ್ನು ಹೊಂದಿದವರಾಗಿರಬೇಕು.ನಾಡು ಕಟ್ಟುವ ಕಾಯಕದಲ್ಲಿ ನಿರಂತರ ನಮ್ಮನ್ನು ನಾವು ತೊಡಗಿಸಿಕೊಂಡು ಕನ್ನಡಾಂಬೆಯ ಋಣವನ್ನು ತೀರಿಸಬೇಕೆಂದು ಬೆಂಗಳೂರು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅಭಿಪ್ರಾಯಪಟ್ಟರು.ರವಿವಾರ ನಗರದ ಗಾಂಧಿ ಭವನದಲ್ಲಿ ಹಮ್ಮಿಕೊಂಡ ವಿಜಯಪುರ ಜಿಲ್ಲಾ, ತಾಲೂಕು ಹಾಗೂ ಹೋಬಳಿ ಮಟ್ಟದ ಸಾಹಿತ್ಯ ಪರಿಷತ್ತಿನ ಸರ್ವ ಪದಾಧಿಕಾರಿಗಳ ಸಮಾಲೋಚನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು,…


