ಮಾನವ ಜನ್ಮ ಸಾರ್ಥಕತೆಗೆ ಶರಣರ ತತ್ವ ಅಗತ್ಯ- ಚನ್ನಮಲ್ಲಿಕಾರ್ಜುನ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 29:ಮನುಷ್ಯ ಆಧ್ಯಾತ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಸೋಮವಾರ ಸಂಜೆ ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಹಾಮಠದಲ್ಲಿ ಶ್ರಾವಣ ಮಾಸದ ಪ್ರಯುಕ್ತ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಪುರಾಣ ಪ್ರಾರಂಭೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾನವ ಜನ್ಮ ಸಾರ್ಥಕತೆಗೆ ಬಸವಾದಿ ಶರಣರ ತತ್ವ, ಸದ್ವಿಚಾರ, ಧ್ಯಾನ, ತಪಸ್ಸು, ಉಪಾಸನೆ, ಭಜನೆ, ಸಂಕೀರ್ತನೆ ಮಾಡುವುದರಿಂದ ಪ್ರಾಪಂಚಿಕ ಜಂಜಡ ದೂರವಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ ಎಂದರು.ಪುರಾಣಿಕರಾದ ಉಮರಾಣಿಯ…

Read More

ಮನೆಯಲ್ಲಿ ಹಾಲೆರೆದ ನಾಗಠಾಣದ ಮಹಿಳೆಯರು

ಸಪ್ತಸಾಗರ ವಾರ್ತೆ, ವಿಜಯಪುರ, ಜು. 28:ಶ್ರಾವಣದಲ್ಲಿ ಬರುವ ಹಬ್ಬಗಳಿಗೆ ಮುನ್ನುಡಿ ಬರೆವಂತ ವಿಶೇಷ ಹಬ್ಬ ನಾಗರ ಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿ ದಿನ ನಾಗರ ಪಂಚಮಿ ಹಬ್ಬವನ್ನು ಆಚರಿಸಲಾಗುತ್ತದೆ. ನಾಗರಪಂಚಮಿ ಎಂದರೆ ಒಡಹುಟ್ಟಿದವರ ಹಬ್ಬ. ಹೆಣ್ಣು ಮಕ್ಕಳ ಹಬ್ಬ. ನಾಗರ ಪಂಚಮಿಯಂದು ಶ್ರದ್ಧಾ ಭಕ್ತಿಯಿಂದ ನಾಗರಕಲ್ಲಿಗೆ ಅಥವಾ ಹುತ್ತಗಳಿಗೆ ಹಾಲೆರೆದು ಪೂಜೆ ಸಲ್ಲಿಸಲಾಗುತ್ತದೆ. ನಾಗ ದೇವನಿಗೆ ಹಲವು ವಿಧದ ಉಂಡೆಗಳು, ತಂಬಿಟ್ಟಿನ ನೈವೇದ್ಯವನ್ನು ಮಾಡಲಾಗುತ್ತದೆ. ಈ ನಿಮಿತ್ತ ತಾಲೂಕಿನ ನಾಗಠಾಣ ಗ್ರಾಮದ ಬಂಡೆ ಕುಟುಂಬದ…

Read More