
ನಂಜನಗೂಡು ರಾಯರ ಮಠದಲ್ಲಿಭಕ್ತಿ ಭಾವದಿಂದ ಪೂರ್ವಾರಾಧನೆ ಆಚರಣೆ
ಸಪ್ತಸಾಗರ ವಾರ್ತೆ, ವಿಜಯಪುರ,ಆ. 10:ಕಲಿಯುಗದ ಕಾಮಧೇನು-ಕಲ್ಪವೃಕ್ಷ ಎಂದೇ ಖ್ಯಾತನಾಮರಾದ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ೩೫೪ನೇ ಆರಾಧನಾ ಮಹೋತ್ಸವ ಪೀಠಾಧಿಪತಿ ಶ್ರೀ ಸುಬುಧೇಂದ್ರತೀರ್ಥರ ಆಜ್ಞಾನುಸಾರವಾಗಿ ಭಾನುವಾರ ಇಲ್ಲಿಯ ನಂಜನಗೂಡು ಶ್ರೀ ರಾಘವೇಂದ್ರಸ್ವಾಮಿ ಮಠದಲ್ಲಿ ಅತ್ಯಂತ ಭಕ್ತಿಪುರಸ್ಸರವಾಗಿ ಆರಂಭಗೊಂಡಿತು.ಇದರ ಅಂಗವಾಗಿ ಸುಪ್ರಭಾತ,ನಿರ್ಮಾಲ್ಯ ವಿಸರ್ಜನೆ, ವೇದ ಪಾರಾಯಣ ಜರುಗಿದವು. ಬಳಿಕ ಬೆಳಿಗ್ಗೆ ಅಷ್ಟೋತ್ತರ ಸಹಿತ ಫಲಪಂಚಾಮೃತಾಭಿಷೇಕ ನಡೆಯಿತು.ಶ್ರೀ ಗುರುಸಾರ್ವಭೌಮರ ಮಹಿಮೆ ಕುರಿತು ಪಂಡಿತ ಮಧ್ವೇಶಾಚಾರ್ಯ ಜೋಶಿ(ಮುತ್ತಗಿ) ಪ್ರವಚನ ನೀಡಿ, ಗುರುಸಾರ್ವಭೌ ಮರು ಕರುಣಾಮಯಿ ಭಕ್ತರು ಭಕ್ತಿಯಿಂದ ಕೇಳಿದ ಎಲ್ಲವನ್ನು ಕರುಣಿಸಬಲ್ಲವರು…