
ಬೆಳಗಾವಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೆಟ್ಟರ್ ಆಹ್ವಾನ
ಸಪ್ತಸಾಗರ ವಾರ್ತೆ, ನವದೆಹಲಿ, ಆ. 4:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸದ ಜಗದೀಶ ಶೆಟ್ಟರ ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬೆಳಗಾವಿ ಬಾರ್ ಅಸೋಸಿಯೇಷನ್ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಮನವಿಯಂತೆ ಮುಖ್ಯ ಅತಿಥಿಗಳಾಗಿ ಆಗಮಿಸುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ…