ಮೋದಿ, ನಿರ್ಮಲಾ ಸೀತಾರಾಮನ್ ಹೆಸರಿನಲ್ಲಿ ಹಣ ದ್ವಿಗುಣದ ಆಮಿಷ!

ಸಾಮಾಜಿಕ ಜಾಲತಾಣಗಳಲ್ಲಿ AI ಆಧಾರಿತ ನಕಲಿ ಜಾಹೀರಾತುಗಳ ಅಬ್ಬರ – ಮೌನ ಯಾಕೆ ಸರ್ಕಾರ? ಜನರಲ್ಲಿ ಹೆಚ್ಚುತ್ತಿರುವ ಆತಂಕ ರುದ್ರಪ್ಪ ಆಸಂಗಿಸಪ್ತಸಾಗರ ವಾರ್ತೆ,ವಿಜಯಪುರ, ಜು. 3: “ಕೇವಲ ₹22 ಸಾವಿರ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸಿ…”, “ಪ್ರಧಾನಮಂತ್ರಿ ನರೇಂದ್ರ ಮೋದಿ ಘೋಷಿಸಿದ ಹೊಸ ಯೋಜನೆ…”, “ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅನುಮೋದಿಸಿದ ವಿಶೇಷ ಹೂಡಿಕೆ ಅವಕಾಶ…” – ಇಂತಹ ಶೀರ್ಷಿಕೆಗಳೊಂದಿಗೆ ಕಳೆದ ಒಂದು ತಿಂಗಳಿನಿಂದ ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ನಿರಂತರವಾಗಿ ಪ್ರಸಾರವಾಗುತ್ತಿರುವ…

Read More

ದೇಶದ ಹೆಸರಿನಲ್ಲಿ ಮೋದಿ ಜನರ ಚಿನ್ನಾಭರಣ ಕಿತ್ತುಕೊಂಡಿಲ್ಲ: ಜಿಗಜಿಣಗಿ

ಸಪ್ತಸಾಗರ ವಾರ್ತೆ, ವಿಜಯಪುರ, ಮೇ. 16:ದೇಶದ ಹೆಸರು ಹೇಳಿ ಕಾಂಗ್ರೆಸ್‌ನವರಂತೆ ಚಿನ್ನದ ತುಲಾಭಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿಸಿಕೊಂಡಿಲ್ಲ. ಬದಲಾಗಿ ಚಿನ್ನದ ಖರೀದಿಯನ್ನು ಮಿತ ಪ್ರಮಾಣಕ್ಕೆ ಸೀಮಿತಗೊಳಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಕಾಂಗ್ರೆಸ್‌ನಂತೆ ತುರ್ತು ಪರಿಸ್ಥಿತಿ ಹೇರಿ ಪ್ರಜಾಪ್ರಭುತ್ವ ದಮನಿಸುವ ಕೆಲಸವನ್ನು ಬಿಜೆಪಿ ಮಾಡಿಲ್ಲ. ಕೋವಿಡ್‌ನಂತಹ ಸಂಕಷ್ಟದ ಸಮಯದಲ್ಲಿ ಕಾಂಗ್ರೆಸ್ ಏನಾದರೂ ಅಧಿಕಾರದಲ್ಲಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಾಗಿರದಷ್ಟು ಕೆಟ್ಟಿರುತ್ತಿತ್ತು ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಅಂತಾರಾಷ್ಟ್ರೀಯ ಮಟ್ಟದ…

Read More

ಬೆಳಗಾವಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೆಟ್ಟರ್ ಆಹ್ವಾನ

ಸಪ್ತಸಾಗರ ವಾರ್ತೆ, ನವದೆಹಲಿ, ಆ. 4:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸದ ಜಗದೀಶ ಶೆಟ್ಟರ ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬೆಳಗಾವಿ ಬಾರ್ ಅಸೋಸಿಯೇಷನ್ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಮನವಿಯಂತೆ ಮುಖ್ಯ ಅತಿಥಿಗಳಾಗಿ ಆಗಮಿಸುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ…

Read More

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More