ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ.ಆನಂದ ಕೆ. ಅವರಿಂದ ರಾಷ್ಟ್ರಧ್ವಜಾರೋಹಣ
ಸಪ್ತಸಾಗರ ವಾರ್ತೆ,ವಿಜಯಪುರ, ಆ.15:ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವಿಜಯಪುರ ನಗರದ ಜಿಲ್ಲಾ ಪಂಚಾಯಿತಿ ರಸ್ತೆಯಲ್ಲಿರುವ ಗಾಂಧಿ ಭವನದಲ್ಲಿ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.ನಂತರ ಮಾತನಾಡಿದ ಅವರು, ದೇಶ ಇಂದು ಅನುಭವಿಸುತ್ತಿರುವ ಸ್ವಾತಂತ್ರ್ಯವು ಸುಲಭವಾಗಿ ದೊರೆತದ್ದಲ್ಲ. ಅಸಂಖ್ಯಾತ ವೀರ ಧೀರರ ತ್ಯಾಗ, ಬಲಿದಾನ ಹಾಗೂ ಹೋರಾಟದ ಫಲವಾಗಿ ಸ್ವಾತಂತ್ರ್ಯ ಲಭಿಸಿದೆ. ಇಂತಹ ಮಹನೀಯರ ತ್ಯಾಗವನ್ನು ಸ್ಮರಿಸಿ, ಅವರಿಗೆ ಗೌರವ ಸಲ್ಲಿಸುವುದು ಪ್ರತಿಯೊಬ್ಬ ಭಾರತೀಯನ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.ವಿಜಯಪುರ ಜಿಲ್ಲೆಯ ಗಾಂಧಿ ಭವನವು ಮಾದರಿಯ ತಾಣವಾಗಿದ್ದು,…


