ಬಿಹಾರ್ ನಲ್ಲಿ ಎನ್ ಡಿ ಎ ಜಯಭೇರಿ: ಬಿಜೆಪಿ ವಿಜಯೋತ್ಸವ
ಸಪ್ತಸಾಗರ ವಾರ್ತೆ ವಿಜಯಪುರ, ನ. 15: ಬಿಹಾರಿನಲ್ಲಿ ಎನ್‌ಡಿಎ ಮೈತ್ರಿಕೂಟ ಭರ್ಜರಿ ಜಯಭೇರಿ ಸಾಧಿಸಿದ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ವಿಜಯೋತ್ಸವ ಆಚರಿಸಿದರು.ನಗರದ ಗಾಂಧಿ ವೃತ್ತದಲ್ಲಿ ಜಮಾಯಿಸಿದ ನೂರಾರು ಕಾರ್ಯಕರ್ತರು ಬಿಜೆಪಿ ಬಾವುಟ ಹಿಡಿದು ಸಂಭ್ರಮೋತ್ಸವದಲ್ಲಿ ಭಾಗಿಯಾದರು. ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನಿಸಿ ವಿಜಯೋತ್ಸವ ಸಂಭ್ರಮದಲ್ಲಿ ಮಿಂದೆದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಸಂಸದ ರಮೇಶ ಜಿಗಜಿಣಗಿ, ಬಿಜೆಪಿಯ ಜನಪರ ನಿಲುವಿಗೆ ಬಿಹಾರ ಜನತೆ ಗೆಲುವಿನ ಉಡುಗೊರೆ ನೀಡಿದ್ದಾರೆ. ಬಿಹಾರ ಸರ್ವತೋಮುಖ ವಿಕಾಸವನ್ನು ಕೇಂದ್ರವಾಗಿರಿಸಿಕೊಂಡು ಚುನಾವಣೆ ಎದುರಿಸಿದ್ದ…


