ಸಚಿವ ಎಂ.ಬಿ. ಪಾಟೀಲರಿಗೆ ಜಿಗಜಿಣಗಿ ಟಾಂಗ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಗೋಲಗುಂಬಜ್ ಎಕ್ಸಪ್ರೆಸ್ ರೈಲಿನ ಅವಧಿ ಕಡಿಮೆ ಮಾಡಲು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಮೂಲಕ ಸಂಚರಿಸುವಂತೆ ಮಾಡುವಲ್ಲಿ ಸಚಿವ ಎಂ. ಬಿ. ಪಾಟೀಲರ ಪಾತ್ರವಿಲ್ಲ. ನಾನು ಮಾಡಿದ್ದನ್ನು ತಾವೇ ಮಾಡಿದ ಕೆಲಸ ಎಂದು ಸಚಿವ ಪಾಟೀಲ ಬಿಂಬಿಸಿಕೊಳ್ಳುವುದು ಸರಿಯಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಹೇಳಿದ್ದಾರೆ.ಗೋಲಗುಂಬಜ್ ಎಕ್ಸಪ್ರೆಸ್ ರೈಲಿನ ಅವಧಿ ಕಡಿಮೆ ಮಾಡಲು ಹುಬ್ಬಳ್ಳಿ ಬೈಪಾಸ್ ಹಾಗೂ ಗದಗ ಬೈಪಾಸ್ ಮೂಲಕ ಸಂಚರಿಸುವಂತೆ ಮಾಡಲು ಕಳೆದ ಮೂರು ವರ್ಷಗಳ ನನ್ನ…

Read More

ಮೌಲಾನಾ ಅಬ್ದುಲ್ ಕಲಾಂ ಅಜಾದ್ ಜಯಂತಿ

ಸಪ್ತಸಾಗರ ವಾರ್ತೆ, ವಿಜಯಪುರ, ನ. 11: ಮೌಲಾನಾ ಅಬ್ದುಲ್ ಕಲಾಂ ಅಜಾದ್ ಅವರ ಜಯಂತಿಯ ಪ್ರಯುಕ್ತ ಹೊನ್ನುಟಗಿ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ವಿಶೇಷ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ರಾಷ್ಟ್ರದ ಪ್ರಥಮ ಶಿಕ್ಷಣ ಮಂತ್ರಿ ಹಾಗೂ ಮಹಾನ್ ಸ್ವಾತಂತ್ರ್ಯ ಹೋರಾಟಗಾರ ಮೌಲಾನಾ ಅಜಾದ್ ಅವರ ಶಿಕ್ಷಣ ಸೇವೆ ಹಾಗೂ ರಾಷ್ಟ್ರ ನಿರ್ಮಾಣದ ಕೊಡುಗೆಯನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಶಾಲೆಯ ಪ್ರಾಂಶುಪಾಲ ದಿವಾಕರ್ ಮಾತನಾಡಿ, ಮೌಲಾನಾ ಅಜಾದ್ ಅವರ ಜೀವನ, ಅವರ ಶಿಕ್ಷಣದ ದೃಷ್ಟಿಕೋನ ಹಾಗೂ ಯುವ ಪೀಳಿಗೆಯು…

Read More

ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು-ಪ್ರಭುಲಿಂಗ ಹಂಡಿ

ಸಪ್ತಸಾಗರ ವಾರ್ತೆ ವಿಜಯಪುರ, ಅ. 20: ಪ್ರತಿವರ್ಷದಂತೆ ಈ ವರ್ಷವು ಕೂಡ ದೀಪಾವಳಿ ಹಬ್ಬದ ನಿಮಿತ್ತ ಓಟದ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ಎಲ್ಲರೂ ಗ್ರಾಮೀಣ ಆಟಗಳಿಗೆ ಆದ್ಯತೆ ನೀಡಬೇಕು ಎಂದು ಜಾತ್ರಾ ಕಮೀಟಿಯ ಅಧ್ಯಕ್ಷಪ್ರಭುಲಿಂಗ ಹಂಡಿ ಹೇಳಿದರು.ಸೋಮವಾರ ತಾಲೂಕಿನ ನಾಗಠಾಣ ಗ್ರಾಮದಲ್ಲಿ ದೀಪಾವಳಿ ಅಂಗವಾಗಿ ಶ್ರೀ ಭೀರದೇವರ ಮತ್ತು ಶ್ರೀ ಪರಮಾನಂದ ದೇವರ ಜಾತ್ರಾ ಮಹೋತ್ಸವದಲ್ಲಿ ಹಮ್ಮಿಕೊಂಡ 8 ಕಿಮೀ ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಆಟಗಳು ನಮ್ಮ ನಿತ್ಯ ಜೀವನದ ಅವಿಭಾಜ್ಯ ಅಂಗವಾಗಿದ್ದು, ದೇಶೀಯ ಆಟಗಳಿಗೆ…

Read More

ನಾಳೆ ವಿಜಯಪುರ ಬಂದ್ ಗೆ ಕರೆ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 15: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ಶೂ ಎಸೆದಿರುವ ಆರೋಪಿ ಬಂಧನಕ್ಕೆ ಆಗ್ರಹಿಸಿ ನಾಳೆ (ಅ. 16ರಂದು) ವಿವಿಧ ಪ್ರಗತಿಪರ ಸಂಘಟನೆಗಳು ವಿಜಯಪುರ ಬಂದ್ ಗೆ ಕರೆ ನೀಡಿವೆ.ಅವಶ್ಯಕ ವಸ್ತುಗಳು, ಔಷಧ ಹಾಗೂ ಆರೋಗ್ಯ ಸೇರಿದಂತೆ ತುರ್ತು ಸೇವೆಗಳು ಹೊರತುಪಡಿಸಿ ಉಳಿದೆಲ್ಲ ಸೇವೆಗಳು ಬಹುತೇಕ ಸ್ತಬ್ಧವಾಗಲಿವೆ.ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಬಿ.ಆರ್. ಗವಾಯಿ ಅವರ ಮೇಲೆ ನ್ಯಾಯವಾದಿಯೊಬ್ಬರು ಶೂ ಎಸೆದಿರುವುದು ಅತ್ಯಂತ ಖಂಡನಾರ್ಹ. ಇದು ಪ್ರಜಾಪ್ರಭುತ್ವ ಮೇಲೆ ಹಾಗೂ…

Read More

ವಿಜಯಪುರ ಜಿಲ್ಲೆಯಲ್ಲಿ ಜೋಡಿ ಕೊಲೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 13:ವಿಜಯಪುರ ತಾಲೂಕಿನ ಕನ್ನೂರು ಗ್ರಾಮದಲ್ಲಿ ಹಳೆಯ ವೈಷಮ್ಯ ಹಿನ್ನೆಲೆ ಬರ್ಬರವಾಗಿ ಕೊಲೆ ನಡೆದಿದೆ.ಸಾಗರ ಬೆಳುಂಡಗಿ (25), ಇಸಾಕ್ ಖರೇಷಿ (24) ಕೊಲೆಗಿಡಾದ ವ್ಯಕ್ತಿಗಳು.ಕಳೆದ ಎರಡು ವರ್ಷಗಳ ಹಿಂದೆ ಕೊಲೆಗೀಡಾದ ವ್ಯಕ್ತಿಗಳು ಅದೇ ಊರಿನ ಈರನಗೌಡ ಎಂಬಾತನ ಮೇಲೆ ಹಲ್ಲೆ ನಡೆಸಿದ್ದರು. ಈರನಗೌಡ ಆಸ್ಪತ್ರೆಯಲ್ಲಿ ಕೆಲದಿನ ದಾಖಲಾಗಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದ. ಈ ದ್ವೇಷದ ಕಾರಣ ಈ ಇಬ್ಬರ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.ಘಟನಾ ಸ್ಥಳಕ್ಕೆ ಹಿರಿಯ ಪೋಲಿಸ್ ಅಧಿಕಾರಿಗಳು ಭೇಟಿ…

Read More

ನಿವೃತ್ತ ಸರಕಾರಿ ನೌಕರರ ಸೇವೆಗಾಗಿ ಸದಾಸಿದ್ದ – ಅಬ್ದುಲ್ ರಹಿಮ್ ಖಾಜಿ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 12:ನಿವೃತ್ತ ಸರ್ಕಾರಿ ನೌಕರರ ಸೇವೆಗೆ ನಾನು ಸದಾ ಬದ್ಧನಾಗಿರುವೆ ಎಂದು ರಾಜ್ಯ ಸರಕಾರಿ ನಿವೃತ್ತ ಮುಸ್ಲಿಂ ಕ್ಷೇಮಾಭಿವೃದ್ದಿ ಸಂಘದ ರಾಜ್ಯಾಧ್ಯಕ್ಷ ಅಬ್ದುಲರಹಿಮ್ ಖಾಜಿ ಹೇಳಿದರು.ನಗರದ ಯಾಸೀನ್ ಮಸೀದ್ ಹಿಂದುಗಡೆ ಇರುವ ನ್ಯೂ ಲೈಫ್ ಪ್ರೀ ಪ್ರೈಮರಿ ಶಾಲೆಯಲ್ಲಿ ಆಯೋಜಿಸಲಾಗಿದ್ದ ನಿವೃತ್ತ ಸರ್ಕಾರಿ ನೌಕರರ ಸಭೆಯಲ್ಲಿ ಅವರು ಮಾತನಾಡಿದರು.ನಿವೃತ್ತ ಸರಕಾರಿ ನೌಕರರ ಸಮಸ್ಯೆಗಳ ಕುರಿತು ವಿಶೇಷವಾಗಿ ಚರ್ಚಿಸಿ ವಿಜಯಪುರ ಜಿಲ್ಲೆಯ ನಿವೃತ್ತ ನೌಕರರ ಸೇವೆಗಾಗಿ ನಾನು ಸದಾ ಸಿದ್ದ. ಆನ್‌ಲೈನ್ ಯುಗದಲ್ಲಿ ಪ್ರತಿ…

Read More

ಅ. 4ರಂದು ಹಜರತ್ ಅರ್ಕಾಟ್ ದರ್ಗಾದ ಉರುಸು

ಸಪ್ತ ಸಾಗರ ವಾರ್ತೆ, ವಿಜಯಪುರ, ಅ. 2 ವಿಜಯಪುರದ ಭಾವೈಕ್ಯತೆಯ ಪ್ರತೀಕವಾಗಿರುವ ಹಜರತ್ ಅರ್ಕಾಟ್ ದರ್ಗಾದ ಉರುಸು ಶ್ರದ್ಧಾ ಭಕ್ತಿಯಿಂದ ಜರುಗಲಿದ್ದು, ಇದರ ಅಂಗವಾಗಿ ಅ.4 ರಂದು ಝೂಲೂಸ್ ಏ. ಗೌಸಿಯಾ ಎಂಬ ಬೃಹತ್ ಶಾಂತಿಯಾತ್ರೆ ನಡೆಯಲಿದೆ ಎಂದು ಧರ್ಮಗುರು ಮೌಲಾನಾ ಯೂಸೂಫ್ ಖಾದ್ರಿ ಹೇಳಿದರು.ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಉರುಸು ಅಂಗವಾಗಿ ಅನೇಕ ಸಿದ್ದತೆಗಳನ್ನು ಭರದಿಂದ ಕೈಗೊಳ್ಳಲಾಗುತ್ತಿದೆ. ಮಾನವೀಯತೆ, ಶಾಂತಿ, ಸಹೋದರತೆ ತತ್ವ ಸಾರಿದ ಅರ್ಕಾಟ್ ದರ್ಗಾದ ಹಜರತ್ ಸೈಯ್ಯದ್ ನಾ ಅಬ್ದುಲ್ ಷಾ…

Read More

ಆರೋಗ್ಯಯುತ ಜೀವನಕ್ಕೆ ದೈಹಿಕ-ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯವಶ್ಯಕ-ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.25:ಒತ್ತಡದ ಜೀವನದ ಮಧ್ಯೆ ಆರೋಗ್ಯಯುತ ಬದುಕಿಗೆ ದೈಹಿಕ ಹಾಗೂ ಮಾನಸಿಕ ಸ್ಥಿರತೆ ಕಾಪಾಡಿಕೊಳ್ಳುವುದು ಅತ್ಯಂತ ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಕ್ರೀಡಾ ಚಟುವಟಿಕೆಗಳನ್ನು ನಮ್ಮ ದೈನಂದಿನದ ಜೀವನದಲ್ಲಿ ಅಳವಡಿಸಿಕೊಂಡು ಮಾನಸಿಕ ಹಾಗೂ ದೈಹಿಕ ಸದೃಢತೆ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಕರೆ ನೀಡಿದರು.ನಗರದ ಡಾ. ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಿಂದ ಗುರುವಾರ ಹಮ್ಮಿಕೊಂಡಿದ್ದ ವಿಭಾಗ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಮಾನಸಿಕ…

Read More

ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಸ್ಥಳಾಂತರ ಮಾಡದಿರಲು ಮನವಿ

ಸಪ್ತಸಾಗರ ವಾರ್ತೆ ವಿಜಯಪುರ, ಸೆ. 12 : ಹೆಸ್ಕಾಂ ಗ್ರಾಮೀಣ ಉಪ ವಿಭಾಗವನ್ನು ಶಿವಗಿರಿಗೆ ಸ್ಥಳಾಂತರ ಮಾಡುವುದನ್ನು ತಡೆಹಿಡಿಯುವಂತೆ ಒತ್ತಾಯಿಸಿ ರೈತ ಭಾರತ ಪಕ್ಷದಿಂದ ಹೆಸ್ಕಾಂ ಅಧೀಕ್ಷಕ ಅಭಿಯಂತರ ಅವರ ಮೂಲಕ ಶುಕ್ರವಾರ ಹುಬ್ಬಳ್ಳಿ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು.ಇದೇ ಸಂದರ್ಭದಲ್ಲಿ ನಾಗಠಾಣ ಮತಕ್ಷೇತ್ರದ ಶಾಸಕ ವಿಠ್ಠಲ್ ಕಟಕದೊಂಡ ಅವರಿಗೂ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹೊಸ ಕಟ್ಟಡವನ್ನು ಕಟ್ಟಿಸಿರುತ್ತೀರಿ ಅಂತ ಅಲ್ಲಿಗೆ ಗ್ರಾಮೀಣ ಉಪವಿಭಾಗವನ್ನು ಸ್ಥಳಾಂತರ…

Read More