ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿ:ಕೋರಿ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಹಾಕಿ ಮಾಂತ್ರಿಕ ಮೇಜರ್ ಧ್ಯಾನಚಂದ ಅವರ ಕ್ರೀಡಾ ಸಾಧನೆ ಎಲ್ಲರಿಗೂ ಸ್ಪೂರ್ತಿಯಾಗಿದೆ ಎಂದು ಬಿ.ಎಲ್.ಡಿ.ಇ. ಸಂಸ್ಥೆಯ ಕ್ರೀಡಾ ವಿಭಾಗದ ನಿರ್ದೇಶಕ ಎಸ್.ಎಸ್. ಕೋರಿ ಹೇಳಿದ್ದಾರೆ.ಶುಕ್ರವಾರ ರಾಷ್ಟ್ರೀಯ ಕ್ರೀಡಾ ದಿನದ ಅಂಗವಾಗಿ ಬಿ.ಎಲ್.ಡಿ.ಇ. ಸಂಸ್ಥೆಯ ಶ್ರೀ. ಬಿ. ಎಂ. ಪಾಟೀಲ ಪಬ್ಲಿಕ್ ಸಿ.ಬಿ.ಎಸ್.ಇ ಶಾಲೆಯ ವತಿಯಿಂದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಮಧುಮೇಹ ಜಾಗೃತಿ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕ್ರೀಡೆ ಮತ್ತು ಆರೋಗ್ಯ ಒಂದಕ್ಕೊಂದು ಪೂರಕವಾಗಿವೆ….

Read More

ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಕ್ರೀಡೆಗಳು ಪೂರಕ:ಜಯರಾಜ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 29: ಕ್ರೀಡೆಗಳು ವಿದ್ಯಾರ್ಥಿಗಳ ಸಮಗ್ರ ಬೆಳವಣಿಗೆಗೆ ಮತ್ತು ಶೈಕ್ಷಣಿಕ ಜೀವನದ ಸಮೃದ್ಧಿಗೆ ಪೂರಕವಾಗಿವೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಹೇಳಿದ್ದಾರೆ. ಶುಕ್ರವಾರ ಡೀಮ್ಡ್ ವಿಶ್ವವಿದ್ಯಾಲಯದ ಒಳಾಂಗಣ ಕ್ರೀಡಾಂಗಣದಲ್ಲಿ ವಿಶ್ವಪ್ರಸಿದ್ಧ ಹಾಕಿ ಕ್ರೀಡಾಪಟು ಮೇಜರ್ ಧ್ಯಾನಚಂದ ಅವರ ಜನ್ಮದಿನದ ಅಂಗವಾಗಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯಲ್ಲಿ ಮಾತನಾಡಿದರು.ಇದೇ ವೇಳೆ ವಿದ್ಯಾರ್ಥಿಗಳಿಗಾಗಿ ಬ್ಯಾಸ್ಕೆಟ್‌ಬಾಲ್ ಮತ್ತು ಚೆಸ್ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಸುಭಗಾ ಅವರು ಫಿಟ್ ಇಂಡಿಯಾ…

Read More

ಶಿಕ್ಷಣ ಕ್ರಾಂತಿಯ ಹರಿಕಾರರು ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳು : ರಂಗನಾಥ

ಸಪ್ತಸಾಗರ ವಾರ್ತೆ ವಿಜಯಪುರ, ಆ. 29: ಸಮಾಜದಲ್ಲಿ ಸಾಕ್ಷರತೆಯ ಪ್ರಮಾಣ ಹೆಚ್ಚಾದರೆ ದೇಶ ಪ್ರಗತಿಯ ಹಾದಿಯಲ್ಲಿ ಮುನ್ನಡೆಯುತ್ತದೆ ಎಂಬ ಮಾತಿನಂತೆಸುತ್ತೂರು ಕ್ಷೇತ್ರದ ಲಿಂ.ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳು ಶಿಕ್ಷಣವೇ ಧರ್ಮ, ಶಿಕ್ಷಣವೇ ಆಚಾರ, ಶಿಕ್ಷಣವೇ ಸಮಾಜ ಸುಧಾರಣೆಯ ಬಹುಮುಖ್ಯ ಮಾರ್ಗ ಎಂಬುದನ್ನು ಅಕ್ಷರಶಃ ಅರಿತು ಆಚರಿಸಿದವರು ಎಂದು ಬರಹಗಾರ ರಂಗನಾಥ ಥೋರ್ಪೆ ಹೇಳಿದರು.ವಿಜಯಪುರ ನಗರದ ಬಿ ಎಲ್ ಡಿ ಈ ಸಂಸ್ಥೆಯ ಎಸ್. ಎಸ್.ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಯುವ ವೇದಿಕೆ ಸಂಯುಕ್ತ ಆಶ್ರಯದಲ್ಲಿ…

Read More

ಮಹಾರಾಷ್ಟ್ರ ಡಿಸಿಎಂ ಜೊತೆಗೆ ದ್ರಾಕ್ಷಿ ಬೆಳೆ ಸಮಸ್ಯೆ ಕುರಿತು ಕೊಕರೆ ಚರ್ಚೆ

ಸಪ್ತಸಾಗರ ವಾರ್ತೆ, ಪುಣೆ, ಆ. 29:ಮಹಾರಾಷ್ಟ್ರ ರಾಜ್ಯದ ಪುಣೆಯಲ್ಲಿ ಇತ್ತೀಚೆಗೆ ದ್ರಾಕ್ಷಿ ಬೆಳೆಗಾರರ ಸಮಾವೇಶ ಜರುಗಿತು.ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಕೃಷಿ ಮಂತ್ರಿಗಳ ಜೊತೆಗೆ ಭಾರತೀಯ ಕಿಸಾನ್ ಸಂಘದ ಭೀಮಸೇನ ಕೊಕರೆ ಅವರು ದ್ರಾಕ್ಷಿ ಬೆಳೆಯ ವಿವಿಧ ಸಮಸ್ಯೆಗಳ ಕುರಿತು ಚರ್ಚೆ ನಡೆಸಿದರು. ದ್ರಾಕ್ಷಿ ಬೆಳೆಗಾರರ ಮುಂದಿನ ಬೆಳವಣಿಗೆಗಳ ಬಗ್ಗೆ ಅದರಲ್ಲೂ ವಿಶೇಷವಾಗಿ ತಳಿಗಳ ಬಗ್ಗೆ ಹಾಗೂ ರಫ್ತಿನ ಕುರಿತು ಮತ್ತು ಭಾರತ ದೇಶಕ್ಕೆ ಹೊರದೇಶದಿಂದ ಕಳಪೆ ಮಟ್ಟದ ಒಣ ದ್ರಾಕ್ಷಿಯ ಕಳ್ಳ ಸಾಗಣೆಯ ಮೂಲಕ ಬರುತ್ತಿರುವುದರ ಬಗ್ಗೆ…

Read More

ಚಿತ್ರದುರ್ಗದಲ್ಲಿ “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಕುರಿತು ವಿಚಾರಸಂಕಿರಣ

ಸಪ್ತಸಾಗರ ವಾರ್ತೆ ಬೆಂಗಳೂರು, ಆ. 28:ಕರ್ನಾಟಕ ಮಾಧ್ಯಮ ಅಕಾಡೆಮಿಯು ಚಿತ್ರದುರ್ಗ ಪತ್ರಕರ್ತರ ಭವನದ ಡಾ. ಬಿ.ಆರ್.‌ ಅಂಬೇಡ್ಕರ್‌ ಸಭಾಂಗಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಎಸ್‌.ಸಿ. ಎಸ್‌.ಟಿ. ಪತ್ರಿಕಾ ಸಂಪಾದಕರ ಸಂಘ ಹಾಗೂ ಚಿತ್ರದುರ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಆಗಸ್ಟ್‌ 30 ರಂದು “ಸುದ್ದಿ ಮಾಧ್ಯಮದಲ್ಲಿ ಅಂಬೇಡ್ಕರ್‌ ದೃಷ್ಟಿಕೋನ” ಎಂಬ ವಿಷಯದ ಕುರಿತು ಒಂದು ದಿನದ ವಿಚಾರ ಸಂಕಿರಣವನ್ನು ಆಯೋಜಿಸಲಾಗಿದೆ.ಯೋಜನೆ, ಕಾರ್ಯಕ್ರಮ ಸಂಯೋಜನೆ ಹಾಗೂ ಸಾಂಖ್ಯಿಕ ಖಾತೆ ಹಾಗೂ ಚಿತ್ರದುರ್ಗ ಜಿಲ್ಲಾ…

Read More

ಕಳುವಾದ ಅಡಿವಿಟ್ಟ ಚಿನ್ನಕ್ಕೆ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರಿಂದ ಬ್ಯಾಂಕ್ ಎದುರು ಪ್ರತಿಭಟನೆ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಬ್ಯಾಂಕಿನಲ್ಲಿ ಕಳುವಾದ ಚಿನ್ನಕ್ಕೆ ಪರಿಹಾರ ರೂಪದಲ್ಲಿ ಪ್ರಸ್ತುತ ಮಾರುಕಟ್ಟೆ ಬೆಲೆ ನೀಡಬೇಕೆಂದು ಆಗ್ರಹಿಸಿ ಗ್ರಾಹಕರು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಕೆನೆರಾ ಬ್ಯಾಂಕ್ ಎದುರು ಗುರುವಾರ ಪ್ರತಿಭಟನೆ ನಡೆಸಿದ್ದಾರೆ.ಕಳೆದ ಮೇ 25ರಂದು ಮನಗೂಳಿ ಕೆನರಾ ಬ್ಯಾಂಕ್ ನಲ್ಲಿ ಕಳ್ಳತನ ಪ್ರಕರಣ ನಡೆದಿತ್ತು. ಕಳ್ಳರು ಈ ಬ್ಯಾಂಕಿನಿಂದ 58 ಕೆಜಿಗೂ ಅಧಿಕ ಚಿನ್ನ, 5 ಲಕ್ಷ ನಗದು ಹಣ ಕದ್ದು ಪರಾರಿಯಾಗಿದ್ದ‌ರು.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ಮ್ಯಾನೇಜರ್ ಸೇರಿ 15…

Read More

ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜ್ ಸ್ಥಾಪನೆ ವಿರೋಧಿಸಿ ನಾಳೆ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ಪಿಪಿಪಿ ಮಾದರಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆ ಬೇಡ ಎಂದು ಒತ್ತಾಯಿಸಿ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಗುರುವಾರ ನಗರದಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿದೆ.ಮಧ್ಯಾಹ್ನ 12 ಗಂಟೆ ಸುಮಾರಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟ ಸಮಿತಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಪ್ರತಿಭಟನೆ ನಡೆಸಿ ಸರ್ಕಾರಿ ವೈದ್ಯಕೀಯ ಕಾಲೇಜು ಪಿಪಿಪಿ ಆಧಾರ ಸ್ಥಾಪನೆ ಮಾಡುವುದು ಬೇಡ. ಸಂಪೂರ್ಣವಾಗಿ ಸರ್ಕಾರಿ ವೇದಿಕೆಯ ಕಾಲೇಜ್ ಸ್ಥಾಪನೆ ಆಗಬೇಕು ಎಂದು ಘೋಷಣೆ ಕೂಗಿ ಪ್ರತಿಭಟನೆ…

Read More

ಅಕ್ರಮ ಸಿಲಿಂಡರ್ ಅಡ್ಡೆ ಮೇಲೆ ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 27:ನಗರದ ಅತಾವುಲ್ಲಾ ಚೌಕ್ ಹತ್ತಿರ ಗೃಹ ಬಳಕೆಯ ಅಡುಗೆ ಅನಿಲ ಸಿಲಿಂಡರ್ ಗಳಿಂದ ಆಟೋಗಳಿಗೆ ರೀಪಿಲ್ ಮಾಡುತ್ತಿರುವ ಸ್ಥಳದ ಮೇಲೆ ಆಹಾರ ಇಲಾಖೆಯ ಅಧಿಕಾರಿಗಳು ಹಾಗೂ ಪೊಲೀಸ್ ಅಧಿಕಾರಿಗಳು ಬುಧವಾರ ದಾಳಿ ಮಾಡಿ ಅಕ್ರಮ ಸಿಲಿಂಡರ್ ಗಳನ್ನು ವಶಪಡಿಸಿಕೊಂಡರು.1 ತುಂಬಿದ ಅಡುಗೆ ಅನಿಲ ಸಿಲಿಂಡರ್ ಹಾಗೂ 3 ಖಾಲಿ ಸಿಲಿಂಡರ್ ಗಳನ್ನು, ಮತ್ತು ರಿಪಿಲ್ ಮಾಡಲು ಬಳಸುತ್ತಿದ್ದ ಮೋಟಾರು ಮತ್ತು ತೂಕದ ಯಂತ್ರವನ್ನು ವಶಪಡಿಸಿಕೊಂಡು ಗೋಲ್ ಗುಂಬಜ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ನಶಾ ಮುಕ್ತ ಭಾರತ ಅಭಿಯಾನ: ಬಂಡೀಪುರದಿಂದ ಬೀದರ್ ವರೆಗೆ 3 ದಿನಗಳ ಬೈಕ್ ಜಾಥಾ

ಸಪ್ತ ಸಾಗರ ವಾರ್ತೆ, ಬೆಂಗಳೂರು, ಆ. 26:ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಆಚರಿಸುತ್ತಿರುವ ನಶಾ ಮುಕ್ತ ಭಾರತ ಅಭಿಯಾನದ ಅಂಗವಾಗಿ, 2025ರ ಆಗಸ್ಟ್ 29 ರಿಂದ 31ರವರೆಗೆ ಬಂಡೀಪುರದಿಂದ ಬೀದರ ವರೆಗೆ 3 ದಿನಗಳ ಬೈಕ್ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮದ್ಯಪಾನ ಮತ್ತು ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಪ್ರೇರಣೆ ನೀಡುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ರಾಜ್ಯ ಸರ್ಕಾರದ ಯುವಸಬಲೀಕರಣ…

Read More

ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ-ಉಪಮನ್ಯು ಶಿವಾಚಾರ್ಯ ಶ್ರೀಗಳು

ಸಪ್ತಸಾಗರ ವಾರ್ತೆ, ವಿಜಯಪುರ, ಆ. 26:ಅನಾದಿ ಕಾಲದಿಂದಲೂ ಗುರುವನ್ನು ಗೌರವಿಸುವ ಶ್ರೇಷ್ಠ ಸಂಸ್ಕೃತಿ, ಪರಂಪರೆ ಭಾರತದಲ್ಲಿದೆ.ಗುರುವೆಂದರೆ ಜ್ಞಾನದ ಆತ್ಮನಿದ್ದಂತೆ ಎಂದು ಬೀದರ ಜಿಲ್ಲೆಯ ಐನಾಪುರ ಹಿರೇಮಠದ ಷ ಬ್ರ ಉಪಮನ್ಯು ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು.ಸೋಮವಾರದಂದು ತಾಲೂಕಿನ ನಾಗಠಾಣ ಗ್ರಾಮದ ಉದಯಲಿಂಗೇಶ್ವರ ಮಠದಲ್ಲಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮಳ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.ಗುರು ಪರಂಪರೆಗೆ ನಮ್ಮ ನಾಡಿನಲ್ಲಿ ದೊಡ್ಡ ಇತಿಹಾಸವೇ ಇದೆ. ಗುರು ಎಂದರೆ ಜನರನ್ನು ಕತ್ತಲೆಯಿಂದ ಬೆಳಕಿನೆಡೆಗೆ ಕರೆದೊಯ್ಯುವ ರಾಜಮಾರ್ಗ ಎಂದು ಹೇಳಿದರು.ಅಗರಖೇಡ…

Read More