ಸಾರವಾಡ ಗ್ರಾಮಕ್ಕೆ ಕಡ್ಡಾಯವಾಗಿ ಬಸ್ ನಿಲುಗಡೆಗೆ ಆದೇಶ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 24:ವಿಜಯಪುರ-ಬಬಲೇಶ್ವರ ಮಾರ್ಗದಲ್ಲಿ ಬರುವ ಸಾರವಾಡ ಗ್ರಾಮಕ್ಕೆ ಸಾಮಾನ್ಯ, ವೇಗದೂತ ಸಾರಿಗೆಗಳನ್ನು ಕಡ್ಡಾಯವಾಗಿ ನಿಲುಗಡೆ ನೀಡಿ ಕಾರ್ಯಾಚರಣೆ ಮಾಡುವ ಕುರಿತು ಮೇಲಾಧಿಕಾರಿಗಳು ಆದೇಶ ನೀಡಿದ್ದಾರೆ .ಸಾರವಾಡ ಗ್ರಾಮ ಪಂಚಾಯತಿ ಅಧ್ಯಕ್ಷರ ಮನವಿ ಪತ್ರದ ಮೂಲಕ ಸಾರವಾಡ ಗ್ರಾಮಕ್ಕೆ ಸಾಮಾನ್ಯ ಹಾಗೂ ವೇಗದೂತ ಬಸ್ ಗಳ ನಿಲುಗಡೆ ಮಾಡುವಂತೆ ಮೇಲಾಧಿಕಾರಿಗಳು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.ಈಗಾಗಲೇ ಈ ಬಗ್ಗೆ ಮೇಲಾಧಿಕಾರಿಗಳು ಆದೇಶ ನೀಡಿದ್ದರೂ ಚಾಲಕರು ಹಾಗೂ ನಿರ್ವಾಹಕರು ಸಾರವಾಡ ಗ್ರಾಮಕ್ಕೆ ಬಸ್ ನಿಲುಗಡೆ ಮಾಡದೆ…

Read More

ಭಾನು ಮುಸ್ತಾಕ್ ಸ್ಪಷ್ಟನೆ ನೀಡಿ ದಸರಾ ಉದ್ಘಾಟಿಸಲಿ: ಯತ್ನಾಳ್

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 24:ಲೇಖಕಿ ಬಾನು ಮುಸ್ತಾಕ್ ಅವರು ನಾಡದೇವತೆ ಚಾಮುಂಡೇಶ್ವರಿ ದೇವಿ ದಸರಾ ಉತ್ಸವ ಉದ್ಘಾಟಿಸುವುದು ಸರಿಯಲ್ಲ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ.ನಾನು ವೈಯಕ್ತಿಕವಾಗಿ ಶ್ರೀಮತಿ ಭಾನು ಮುಶ್ತಾಕ್ ಅವರನ್ನು ಲೇಖಕಿ ಹಾಗೂ ಹೋರಾಟಗಾರ್ತಿಯಾಗಿ ಗೌರವಿಸುತ್ತೇನೆ. ಆದರೆ, ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆ ಸಲ್ಲಿಸಿ ದೀಪ ಬೆಳಗುವುದರ ಮೂಲಕ ದಸರಾವನ್ನು ಉದ್ಘಾಟಿಸುವುದು, ಅವರ ಸ್ವಂತ ಧಾರ್ಮಿಕ ನಂಬಿಕೆಗಳಿಗೆ ವಿರುದ್ಧವಾಗಿದೆ ಎಂದಿದ್ದಾರೆ.ಇಸ್ಲಾಂ ಮೂರ್ತಿ…

Read More

ನಂದಿ ಕೂಗು ಅಭಿಯಾನ: ವಿಜಯಪುರದಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 23:ಬಸವ ತತ್ವದ ವೈಜ್ಞಾನಿಕ ಚಿಂತನೆಯ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ನಂದಿ ಕೂಗು ಅಭಿಯಾನ ಆ. 23 ರಂದು ವಿಜಯಪುರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ಪ್ರಾರಂಭಿಸಿದರು. ಪಾದಯಾತ್ರೆಯ ನೇತೃತ್ವ ವಹಿಸಿದ ಬಸವರಾಜ ಬಿರಾದಾರ ಅವರು ಮಾತನಾಡಿ, ಗ್ರಾಮದಲ್ಲಿ ನಂದಿ ಸಂಪತ್ತು ಹೆಚ್ಚಾದರೆ ಬಸವ ತತ್ವ ಹಾಗೂ ಬಸವ ಸಂಸ್ಕೃತಿ ಉಳಿಯುತ್ತದೆ ಎಂದು ಅರ್ಥ. ಇಲ್ಲವಾದರೆ‌ ನಾಶವಾಗುತ್ತಿದೆ ಎಂದು ಅರ್ಥ. ಏಕೆಂದರೆ ಬಸವ ತತ್ವ ನಂದಿ ಸಂಪತ್ತಿನ ಜೀವಂತಿಕೆ ಮೇಲೆ ನಿಂತಿದೆ ಎಂಬುದನ್ನು ಇಂದಿನ…

Read More

ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 23: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ವಿಜಯಪುರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಲಬುರ್ಗಿಯ ಖಾಯಂ ಜನತಾ ನ್ಯಾಯಾಲಯ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿಗಳ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತಿ ಇವರ ಸಂಯುಕ್ತಾಶ್ರಯದಲ್ಲಿ ಆ.28ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10 ಗಂಟೆಗೆ ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಅಭಿಯಾನವನ್ನು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನೂ ಸೇವೆಗಳ…

Read More

ಆ. 23‌ ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ- ಸಹಕಾರಕ್ಕೆ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್ ನಾಯ್ಕ ಮನವಿ

ಸಪ್ತಸಾಗರ ವಾರ್ತೆ, ಬೆಂಗಳೂರು, ಆ.22:ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಾಳೆ ಆಗಸ್ಟ್ 23 ರಿಂದ ಪ್ರಾರಂಭಿಸುತ್ತಿದೆ. ವಿದ್ಯುತ್ ಮೀಟರ್ ರೀಡರ್ ಗಳು ಎಲ್ಲ ಮನೆಗಳನ್ನು ಜಿಯೋ ಟ್ಯಾಗಿಂಗ್ ಮಾಡುವ ಕಾರ್ಯ ಪ್ರಾರಂಭಿಸಲಿದ್ದಾರೆ. ಯಾವುದೇ ಮನೆಗಳು ತಪ್ಪಿ ಹೋಗದಂತೆ ಯಶಸ್ವಿಯಾಗಿ ಸಮೀಕ್ಷೆ ಕೈಗೊಳ್ಳಲು ರಾಜ್ಯದ ಜನತೆ ಸಹಕರಿಸಬೇಕು ಎಂದು ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯ್ಕ ತಿಳಿಸಿದ್ದಾರೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ…

Read More

ಬಸವನಬಾಗೇವಾಡಿಯಲ್ಲಿಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ವಿಜಯಪುರ ತಾಲೂಕಾ ಕಾನೂನು ಸೇವೆಗಳ ಸಮಿತಿ, ನ್ಯಾಯವಾದಿಗಳ ಸಂಘ, ತಾಲೂಕಾ ಆಡಳಿತ ಬಸವನಬಾಗೇವಾಡಿ ಇವರ ಸಂಯುಕ್ತಾಶ್ರಯದಲ್ಲಿ ಆ.30ರಂದು ಖಾಯಂ ಜನತಾ ನ್ಯಾಯಾಲಯ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗಿದೆ.ಅಂದು ಮಧ್ಯಾಹ್ನ 12 ಗಂಟೆಗೆ ಬಸವನಬಾಗೇವಾಡಿ ಪುರಸಭೆ ಕಾರ್ಯಾಲಯದ ಸಭಾ ಭವನದಲ್ಲಿ ಅಭಿಯಾನವನ್ನು ಜಿಲ್ಲಾ ನ್ಯಾಯಾಧೀಶರು ಹಾಗೂ ಕಲಬ್ಬುರ್ಗಿ ಖಾಯಂ ಜನತಾ ನ್ಯಾಯಾಲಯ ಅಧ್ಯಕ್ಷರಾದ ನ್ಯಾಯಾಧೀಶ ಎಸ್.ಎಲ್.ಚವ್ಹಾಣ ಉದ್ಘಾಟಿಸಲಿದ್ದಾರೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು…

Read More

ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ: ವಿಜಯಪುರ ಜಿಲ್ಲೆಯಲ್ಲಿ ಪ್ರವಾಹ ಭೀತಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಮಹಾರಾಷ್ಟ್ರದಲ್ಲಿ ಮಳೆ ಅಬ್ಬರ ಜೋರಾಗಿದ್ದು, ಮಹಾರಾಷ್ಟ್ರದ ಉಜನಿ ಜಲಾಶಯದಿಂದ‌ 1.80 ಕ್ಯೂಸೆಕ್ ನೀರು ಭೀಮಾ ನದಿಗೆ ಬಿಡುಗಡೆ ಮಾಡಲಾಗಿದೆ.ಇದರಿಂದಾಗಿ ಕರ್ನಾಟಕದ ವಿಜಯಪುರ ಜಿಲ್ಲೆಯ ಚಡಚಣ ಹಾಗೂ ಇಂಡಿ ತಾಲೂಕಿನಲ್ಲಿ ಪ್ರವಾಹ ಭೀತಿ ಎದುರಾಗಿದೆ.ಭೀಮಾ ನದಿಗೆ ಅಡ್ಡಲಾಗಿ ಕಟ್ಟಿರುವ ಬಾಂದಾರ್ ಕಂ ಬ್ರಿಡ್ಜ್ ಗಳು ಸಂಪೂರ್ಣವಾಗಿ ಮುಳುಗಡೆಯಾಗಿವೆ. ಹೀಗಾಗಿ ಮಹಾರಾಷ್ಟ್ರಕರ್ನಾಟಕ ಸಂಪರ್ಕ ಕಡಿತವಾಗಿದೆ.ಚಡಚಣ ತಾಲೂಕಿನಲ್ಲಿ ಬರುವಉಮರಜ – ಭಂಡಾರಕವಟೆ,ಶಿರನಾಳ – ಔಜ್, ಉಮರಾಣಿ – ಸಹದೇವಪುರ ಬಾಂದಾರ್ ಕಂ ಬ್ರಿಡ್ಜ್ ಮುಳುಗಡೆಯಾಗಿವೆ.ಇಂಡಿ ತಾಲೂಕಿನ…

Read More

ವಿಶೇಷ ಚೇತನರು ಬುದ್ದನ ಮಕ್ಕಳು: ಕೆ.ವಿ.ಪ್ರಭಾಕರ್

ಸಪ್ತಸಾಗರ ವಾರ್ತೆ,ಬೆಂಗಳೂರು ಆ.22:ಭಿನ್ನ, ವಿಭಿನ್ನ ಸಾಧ್ಯತೆಗಳ ವಿಶೇಷ ಚೇತನರು ಹುಟ್ಟುತ್ತಲೇ ಮನುಷ್ಯ ಜಗತ್ತಿನ‌ ಸಣ್ಣತನಗಳಿಂದ ಮುಕ್ತರಾದವರು. ಹೀಗಾಗಿ ಇವರೆಲ್ಲರೂಬುದ್ದನ ಮಕ್ಕಳು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಬಣ್ಣಿಸಿದರು.ಬಾಲಭವನದಲ್ಲಿ ನಡೆದ “ವಿಶೇಷ ಚೇತನ ಮಕ್ಕಳ ಸ್ವಾತಂತ್ರ್ಯ ದಿನಾಚರಣೆ ಮತ್ತು ಸಾಂಸ್ಕೃತಿಕ ಕಲರವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.ಭಿನ್ನ ಚೇತನರನ್ನು ಸಮಾಜದ ಅಸಹಜ ರೂಢಿಗತ ಕಣ್ಣುಗಳಿಂದ ನೋಡುವುದಕ್ಕಿಂತ ಮನುಷ್ಯ ಸಹಜ ಒಳಗಣ್ಣುಗಳಿಂದ ಗಮನಿಸಬೇಕಿದೆ.ಈ ಮಕ್ಕಳು ಜೀವನ ಪರ್ಯಂತ ಮಕ್ಕಳಾಗೇ ಇರುತ್ತಾರೆ. ಅಂದರೆ ಮಗುವಿನ ಸಹಜ ನಿಷ್ಕಲ್ಮಷ ಸ್ವಭಾವ ಜೀವನವಿಡೀ ಇರುತ್ತದೆ.*ಈ…

Read More

ಮನೆಗೆ ನುಗ್ಗಿದ ಉಡಾ: ನಿವಾಸಿಗಳಿಗೆ ಆತಂಕ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಭಾರಿ ಗಾತ್ರದ ಉಡಾವೊಂದು ಮನೆಗೆ ನುಗ್ಗಿದ್ದರಿಂದ ಮನೆಯವರು ಆತಂಕಕ್ಕೀಡಾದ ಘಟನೆ ನಗರದ ಕೀರ್ತಿ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ.ಕೀರ್ತಿ ನಗರದ ನಿವಾಸಿ ಆರ್.ಎಂ. ಬಿರಾದಾರ ಎಂಬುವರ‌ ಮನೆಯ ಶೌಚಾಲಯಕ್ಕೆ ಭಾರಿ ಗಾತ್ರದ ಉಡಾ ನುಳಿಸಿದ್ದರಿಂದ ಮನೆಯವರು ಗಾಬರಿಯಿಃದ ಆತಂಕಗೊಂಡರು.ಮೊಸಳೆ ಆಕಾರದ ಸರಿಸೃಪವನ್ನು ಉಡಾ ಎಂದು ಕರೆಯುತ್ತಾರೆ.ನಗರದಲ್ಲಿ ಇತ್ತೀಚೆಗೆ ಸುರಿದಿದ್ದ ಸತತ ಮಳೆಯಿಂದ ಉಡಾ ಬಿಲದಿಂದ ಹೊರ ಬರುತ್ತಿವೆ.ಸರಿಸೃಪ ಪ್ರಾಣಿಗಳು ಬಿಸಿ ಪ್ರದೇಶಗಳಿಗೆ ವಲಸೆಗೊಂಡು ಮನೆಗಳಿಗೆ ನುಗ್ಗುತ್ತಿರುವುದರಿಂದ ಜನರು ಗಾಬರಿಗೊಂಡಿದ್ದು, ಸಂಬಂಧಿಸಿದ ಇಲಾಖೆಯವರು ಸಾರ್ವಜನಿಕರ…

Read More

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 22:ಪ್ರಸಕ್ತ ಸಾಲಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಆಗ್ರಹಿಸಿ ಅಖಿಲ ಭಾರತಿಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಬೃಹತ್ ಪ್ರತಿಭಟನೆ ಮಾಡಲಾಯಿತು.ಈ ಸಂದರ್ಭದಲ್ಲಿ ರಾಜ್ಯ ಸಹ ಕಾರ್ಯದರ್ಶಿ ಸುಜ್ಞಾತಾ ಕುಲಕರ್ಣಿ ಮಾತನಾಡಿ, ಕರ್ನಾಟಕ ರಾಜ್ಯದಲ್ಲಿ ಪದವಿ ತರಗತಿಗಳು ಪ್ರಾರಂಭವಾಗಿ ತಿಂಗಳು ಕಳೆದರೂ ಸಹಿತ ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರ ನೇಮಕಾತಿ ಆಗದೆ ಇರುವ ಕಾರಣ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯ ತರಗತಿಗಳು ನಡೆಯುತ್ತಿಲ್ಲ. ರಾಜ್ಯದ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರಿಂದ…

Read More