
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆಗೆ ಆಹ್ವಾನ
ಸಪ್ತಸಾಗರ ವಾರ್ತೆ,ವಿಜಯಪುರ, ಆ. 21:ಜಿಲ್ಲೆಯ ಇಂಡಿ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿನ ಅಂಗನವಾಡಿ ಕಾರ್ಯಕರ್ತೆ ಮತ್ತು ಅಂಗನವಾಡಿ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಇಂಡಿ ಶಿಶು ಅಭಿವೃದ್ಧಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಈ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ಆ.19 ರಿಂದ ಸೆ.1 ರೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.