October
ಅ. 14ರಂದು ಧಮ್ಮ ಚಕ್ರ ಪರಿವರ್ತನ ದಿನ
ಸಪ್ತಸಾಗರ ವಾರ್ತೆ, ವಿಜಯಪುರ, ಅ. 12 : ಶಾಂತಿ, ಸದ್ಭಾವನೆಯನ್ನು ಅರಳಿಸುವುದೇ ಬೌದ್ಧ ಧರ್ಮದ ದಿವ್ಯ ಸಂದೇಶ ಹಾಗೂ ಉದ್ದೇಶವಾಗಿದೆ. ಈ ಕಾರ್ಯವನ್ನಿರಿಸಿಕೊಂಡು ಅ.೧೪ ರಂದು ಸಾರಿಪುತ್ರ-ಬೋಧಿಧಮ್ಮ ಬುದ್ಧವಿಹಾರದಲ್ಲಿ ಧಮ್ಮಚಕ್ರ ಪರಿವರ್ತನ ದಿನ ಹಾಗೂ ವರ್ಷಾವಾಸ ಸಮಾರೋಪ ಕಾರ್ಯಕ್ರಮ, ಧಮ್ಮ ರಥಯಾತ್ರೆ ನಡೆಯಲಿದೆ ಎಂದು ಬೌದ್ಧ ವಿಹಾರ ನಿರ್ಮಾಣ ಸಮಿತಿ ಗೌರವಾಧ್ಯಕ್ಷ, ಝೆನ್ ಮಾಸ್ಟರ್ ಡಾ. ಶಾಕು ಬೋಧಿಧಮ್ಮ ಹೇಳಿದರು.ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಭಗವಾನ ಬುದ್ಧರು ಸಾರಾನಾಥದಲ್ಲಿ ಧರ್ಮೋಪದೇಶ ಮಾಡುವ ಮೂಲಕ ಧಮ್ಮಚಕ್ರವನ್ನು ಸ್ಥಾಪಿಸಿದರು, ಸಾಮ್ರಾಟ…
ಅ.6ರಂದು ಫೋನ್ ಇನ್ ಕಾರ್ಯಕ್ರಮ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 30: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಪ್ರಯಾಣಿಕರ ಅಹವಾಲು- ಕುಂದುಕೊರತೆಗಳನ್ನು ಆಲಿಸಲು ಅಕ್ಟೋಬರ್ 6ರ ಮಧ್ಯಾಹ್ನ 3-30ರಿಂದ 4-30ರವರೆಗೆ ಫೋನ್-ಇನ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಮೊ : 6366423887ಗೆ ಸಾರ್ವಜನಿಕರು ಕರೆ ಮಾಡಿ ತಮ್ಮ ಕುಂದುಕೊರತೆಗಳನ್ನು ಪರಿಹರಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಫೋನ್-ಇನ್ ಕಾರ್ಯಕ್ರಮದಲ್ಲಿ ಭಾಗವಹಿಸುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳುವಂತೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅ. 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿ ಅರ್ಥಪೂರ್ಣ ಆಚರಣೆಗೆ ಜಿಲ್ಲಾಧಿಕಾರಿ ಡಾ.ಆನಂದ ಸೂಚನೆ
ಸಪ್ತಸಾಗರ ವಾರ್ತೆ ವಿಜಯಪುರ,ಸೆ.24:ಜಿಲ್ಲಾಡಳಿತದ ವತಿಯಿಂದ ಅಕ್ಟೋಬರ್ 2ರಂದು ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಅವರ ಜಯಂತಿ ಕಾರ್ಯಕ್ರಮವನ್ನು ಅತ್ಯಂತ ಅರ್ಥಪೂರ್ಣವಾಗಿ ಹಾಗೂ ಅಚ್ಚುಕಟ್ಟಾಗಿ ಆಯೋಜನೆ ಮಾಡುವಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ ಶಾಸ್ತ್ರಿ ಜಯಂತಿಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಈ ಸೂಚನೆ ನೀಡಿದರು.ಸಾರ್ವಜನಿಕರಿಗೆ ಮಹಾತ್ಮ ಗಾಂಧೀಜಿಯವರ ಬದುಕು, ಆದರ್ಶ ಹಾಗೂ ಅವರ ಜೀವನ…


