ಅ. 18ರಂದು ಉಪ್ಪಾರ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 17:ವಿಜಯಪುರ ಜಿಲ್ಲಾ ಉಪ್ಪಾರ ನೌಕರರ ಸಂಘದ ವತಿಯಿಂದ 2025-26ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ನಿವೃತ್ತ ನೌಕರರು, ನೂತನವಾಗಿ ನೇಮಕಗೊಂಡ ನೌಕರರು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ ಸಮಾರಂಭವನ್ನು ಅ. 18ರಂದು ಬೆಳಿಗ್ಗೆ 10.30ಕ್ಕೆ ನಗರದ ಸೆಟಲೈಟ್ ಬಸ್ ನಿಲ್ದಾಣದ ಸಮೀಪದ ರಾಜರಾಜೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಆಯೋಜಿಸಲಾಗಿದೆ.ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ವಿದ್ಯಾನಗರದ ಚನ್ಮೂಲಾದ್ರಿ ಶಿಲಾಪುರಿ ಮಹಾಸಂಸ್ಥಾನದ ಭಗೀರಥ ಪೀಠದ ಡಾ. ಪುರುಷೋತ್ತಮಾನಂದ ಪುರಿ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ….

Read More

ಅ.22ರಂದು ಕುವೆಂಪು ಭಾಷಾ ಭಾರತಿ ಗೌರವ ಪ್ರಶಸ್ತಿ ಪ್ರದಾನ

ಪುಸ್ತಕ ಬಹುಮಾನ ವಿತರಣೆ; ಬಸವೇಶ್ವರ ವೃತ್ತದಿಂದ ಮೆರವಣಿಗೆ ಸಪ್ತಸಾಗರ ವಾರ್ತೆ,ವಿಜಯಪುರ, ಅ.15 :ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ವತಿಯಿಂದ 2026ನೇ ಸಾಲಿನ ಗೌರವ ಪ್ರಶಸ್ತಿ ಪ್ರದಾನ ಹಾಗೂ 2025ನೇ ಸಾಲಿನ ಪುಸ್ತಕ ಬಹುಮಾನ ವಿತರಣಾ ಸಮಾರಂಭ ಅ.22ರಂದು ಬೆಳಗ್ಗೆ 10 ಗಂಟೆಗೆ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಲಿದೆ ಎಂದು ಪ್ರಾಧಿಕಾರದ ಸದಸ್ಯ ಸಂಚಾಲಕ ಎಸ್. ಗಂಗಾಧರಯ್ಯ ತಿಳಿಸಿದರು.ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದ್ದು, ಅನುವಾದ…

Read More

ಅ.15ರಂದು ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ

ಸಪ್ತಸಾಗರ ವಾರ್ತೆ,ವಿಜಯಪುರ, ಅ.14 :ನಗರದ ಕುಡಿಯುವ ನೀರು ಸರಬರಾಜಿನ ಪ್ರಮುಖ ಏರು ಕೊಳವೆ ಮಾರ್ಗದಲ್ಲಿ ಸೋರಿಕೆ ಉಂಟಾಗಿರುವ ಹಿನ್ನೆಲೆಯಲ್ಲಿ, ಅ.15ರಂದು ನಗರದ ಹಲವು ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.ಕೊಲ್ಹಾರ ಮೂಲ ಸ್ಥಾವರದಿಂದ ಜಲನಗರ ಪಂಪ್‌ಹೌಸ್‌ಗೆ ನೀರು ಪೂರೈಸುವ 965/900 ಮಿ.ಮೀ. ವ್ಯಾಸದ ಮುಖ್ಯ ಏರು ಕೊಳವೆ ಮಾರ್ಗವು ದೇವಗಿರಿ ತೋಟದ ಬಳಿ ಅ.14ರಂದು ಹಾನಿಗೊಳಗಾಗಿದೆ. ಇದರಿಂದ ನೀರು ಸೋರಿಕೆಯಾಗಿದ್ದು, ಜಲಮಂಡಳಿ ವತಿಯಿಂದ ದುರಸ್ತಿ ಕಾಮಗಾರಿಯನ್ನು ತಕ್ಷಣ ಕೈಗೆತ್ತಿಕೊಳ್ಳಲಾಗಿದೆ.ಈ ಹಿನ್ನೆಲೆಯಲ್ಲಿ ಕೊಲ್ಹಾರ ಶುದ್ಧ ಕುಡಿಯುವ ನೀರಿನ…

Read More

ಅ.18ರಿಂದ ವಿಪಿಎಲ್ ಸೀಸನ್-2 : ಎಂಟು ತಂಡಗಳ ನಡುವೆ ಸೆಣಸಾಟ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ಶ್ರೀ ಬಿ.ಎಂ. ಪಾಟೀಲ ಮೆಮೊರಿಯಲ್ ಟ್ರೋಫಿ ವಿಜಯಪುರ ಪ್ರೀಮಿಯರ್ ಲೀಗ್ (ವಿಪಿಎಲ್) ಸೀಸನ್-2 ಕ್ರಿಕೆಟ್ ಪಂದ್ಯಾವಳಿ ಅ.18ರಿಂದ 25ರವರೆಗೆ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಲಿದೆ.ಪಂದ್ಯಾವಳಿಯಲ್ಲಿ ಕರ್ನಾಟಕ ಕ್ರಿಕೆಟ್ ಕ್ಲಬ್, ಎಸ್‌ಎಚ್‌ಪಿ ವಾರಿಯರ್ಸ್, ಶಾರದಾ ಸ್ಟ್ರೈಕರ್ಸ್, ವಿಜಯಪುರ ಡಿಸ್ಟ್ರಿಕ್ಟ್ ಪೊಲೀಸ್, ಬಿಜಾಪುರ ಟೈಗರ್ಸ್, ಸುಗ್ರೀವ ವಾರಿಯರ್ಸ್, ಟೀಮ್ ಪ್ರಜ್ವಲ ಹಾಗೂ ಕವರ್‌ಡ್ರೈವ್ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.ಅ.18ರಂದು ಬೆಳಿಗ್ಗೆ 9ಕ್ಕೆ ಪಂದ್ಯಾವಳಿಗೆ ವಿಧಾನ ಪರಿಷತ್ ಸದಸ್ಯ…

Read More

ಎಸ್‌ಐಆರ್‌ ಪ್ರಕ್ರಿಯೆ ಸ್ಥಗಿತಕ್ಕೆ ಆಗ್ರಹಿಸಿ ಅ.16ರಂದು ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 14:ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ಸ್ಥಗಿತಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಡಾ. ಡಿ.ಜಿ. ಸಾಗರ ಬಣ) ನೇತೃತ್ವದಲ್ಲಿ ಅ.16ರಂದು ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ ಹಾಗೂ ಧರಣಿ ಹಮ್ಮಿಕೊಳ್ಳಲಾಗಿದೆ ಎಂದು ಸಮಿತಿ ಜಿಲ್ಲಾ ಸಂಚಾಲಕ ಸಿದ್ದು ರಾಯಣ್ಣನವರ ತಿಳಿಸಿದ್ದಾರೆ.ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‌ ಕುಮಾರ್ ಅವರನ್ನು ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಬೇಕು ಹಾಗೂ ಎಸ್‌ಐಆರ್‌ ಪ್ರಕ್ರಿಯೆಯನ್ನು ತಕ್ಷಣ…

Read More

ಅ. 21ರಂದು ಅಂಚೆ ಅದಾಲತ್: ಅಹವಾಲು ಸಲ್ಲಿಸಲು ಅವಕಾಶ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 13:ಭಾರತೀಯ ಅಂಚೆ ಇಲಾಖೆಯ ವಿಜಯಪುರ ವಿಭಾಗದ ವತಿಯಿಂದ 2026-27ನೇ ಸಾಲಿನ ವಿಭಾಗೀಯ ಅಂಚೆ ಅದಾಲತ್‌ ಅ. 21ರಂದು ಮಧ್ಯಾಹ್ನ 3 ಗಂಟೆಗೆ ವಿಜಯಪುರದ ಅಂಚೆ ಅಧೀಕ್ಷಕರ ಕಚೇರಿಯಲ್ಲಿ ನಡೆಯಲಿದೆ.ವಿಜಯಪುರ ಅಂಚೆ ವಿಭಾಗದ ವ್ಯಾಪ್ತಿಯ ಬಬಲೇಶ್ವರ, ಬಸವನಬಾಗೇವಾಡಿ, ಚಡಚಣ, ದೇವರಹಿಪ್ಪರಗಿ, ಇಂಡಿ, ಕೊಲ್ಹಾರ, ಮುದ್ದೇಬಿಹಾಳ, ನಿಡಗುಂದಿ, ಸಿಂದಗಿ, ತಾಳಿಕೋಟೆ, ತಿಕೋಟಾ, ಆಲಮೇಲ ಹಾಗೂ ವಿಜಯಪುರ ತಾಲೂಕುಗಳ ಅಂಚೆ ಸೇವೆಗಳಿಗೆ ಸಂಬಂಧಿಸಿದ ದೂರು, ಸಲಹೆ ಮತ್ತು ಸೂಚನೆಗಳನ್ನು ಸಾರ್ವಜನಿಕರು ಸಲ್ಲಿಸಬಹುದು.ಅಹವಾಲುಗಳನ್ನು ಲಿಖಿತ ರೂಪದಲ್ಲಿ ಸಿದ್ಧಪಡಿಸಿ, ಲಕೋಟೆಯ…

Read More

ಅ.13ರಂದು ನಾಡದೇವಿ ದಸರಾ ಮಹೋತ್ಸವದ ಮೆರವಣಿಗೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 12:ನಗರದ ರಾಮಮಂದಿರ ರಸ್ತೆಯ ಶ್ರೀ ಸಿದ್ದೇಶ್ವರ ಆದಿಶಕ್ತಿ ತರುಣ ಮಂಡಳಿಯ ವತಿಯಿಂದ 2026ನೇ ಸಾಲಿನ ನಾಡದೇವಿ ದಸರಾ ಮಹೋತ್ಸವವನ್ನು ಅ.13ರಂದು ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.ಮಂಗಳವಾರ ನಗರದ ಪ್ರಮುಖ ಬೀದಿಗಳಲ್ಲಿ ವಾದ್ಯಮೇಳದೊಂದಿಗೆ ನಾಡದೇವಿಯ ಮೆರವಣಿಗೆ ನಡೆಯಲಿದ್ದು, ಬಳಿಕ ರಾಮಮಂದಿರದಲ್ಲಿ ಪ್ರತಿಷ್ಠಾಪಿಸಲಾಗಿರುವ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಾಲಯದ ಗಾಳಿ ಗೋಪುರ ಮಾದರಿಯ ದೇವಾಲಯದಲ್ಲಿ ದೇವಿಯ ಪ್ರತಿಷ್ಠಾಪನೆ ನೆರವೇರಲಿದೆ.ಮಂಡಳಿಯ ಸಂಸ್ಥಾಪಕ ದಿ. ಶ್ರೀಶೈಲ ಗಚ್ಚಿನಮಠ ಅವರು 1979ರಲ್ಲಿ ಮಂಡಳಿಯನ್ನು ಸ್ಥಾಪಿಸಿದ್ದು, ಇದೀಗ ಅವರ ಪುತ್ರ ಗುರುಪಾದಯ್ಯ (ಗುರು) ಗಚ್ಚಿನಮಠ…

Read More

ಅ.2ರಂದು ಭೂ ಮಾಪಕರ, ಅ.4ರಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ

53 ಕೇಂದ್ರಗಳಲ್ಲಿ 20,808 ಅಭ್ಯರ್ಥಿಗಳು; ಪರೀಕ್ಷಾ ಅಕ್ರಮ ತಡೆಗೆ ಕಟ್ಟುನಿಟ್ಟಿನ ಕ್ರಮ: ಡಿಸಿ ಡಾ. ಆನಂದ ಕೆ. ಸಪ್ತಸಾಗರ ವಾರ್ತೆ,ವಿಜಯಪುರ, ಸೆ.28: ಭೂ ಮಾಪಕರು ಹಾಗೂ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಗಳನ್ನು ಯಾವುದೇ ಗೊಂದಲ, ಲೋಪ ಹಾಗೂ ಅಕ್ರಮಗಳಿಗೆ ಅವಕಾಶವಿಲ್ಲದಂತೆ ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಅಗತ್ಯವಿರುವ ಎಲ್ಲ ಪೂರ್ವಸಿದ್ಧತೆಗಳನ್ನು ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅಧಿಕಾರಿಗಳಿಗೆ ಸೂಚಿಸಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ನಡೆದ ಪರೀಕ್ಷಾ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ…

Read More

ದಸರಾ ಪುಸ್ತಕ ಮೇಳದಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ನೋಂದಣಿ : ಅ.5 ಅರ್ಜಿ ಸಲ್ಲಿಕೆಗೆ ಕೊನೆಯ ದಿನ

ಸಪ್ತಸಾಗರ ವಾರ್ತೆ,ವಿಜಯಪುರ, ಸೆ.25 :ಮೈಸೂರು ದಸರಾ ಉತ್ಸವ-2026ರ ಅಂಗವಾಗಿ ಅಕ್ಟೋಬರ್ 11ರಿಂದ 20ರವರೆಗೆ ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಎದುರಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮೈದಾನದಲ್ಲಿ ಆಯೋಜಿಸಲಾಗಿರುವ ಮೈಸೂರು ದಸರಾ ಕನ್ನಡ ಪುಸ್ತಕಗಳ ರಿಯಾಯಿತಿ ಮಾರಾಟ ಮೇಳ-2026ರಲ್ಲಿ ಹೊಸ ಪುಸ್ತಕಗಳ ಬಿಡುಗಡೆಗೆ ಅವಕಾಶ ಕಲ್ಪಿಸಲಾಗಿದ್ದು, ಆಸಕ್ತ ಲೇಖಕರು ಹಾಗೂ ಪ್ರಕಾಶಕರು ನೋಂದಾಯಿಸಿಕೊಳ್ಳುವಂತೆ ಕನ್ನಡ ಪುಸ್ತಕ ಪ್ರಾಧಿಕಾರ ತಿಳಿಸಿದೆ.ಪುಸ್ತಕ ಮೇಳದ ಸಂದರ್ಭದಲ್ಲಿ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ವಿಚಾರ ಸಂಕಿರಣ ಸೇರಿದಂತೆ ವಿವಿಧ ಸಾಹಿತ್ಯಕ ಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದ್ದು, 2026ರಲ್ಲಿ…

Read More