
ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಸಚಿವ ಎಂ. ಬಿ. ಪಾಟೀಲ
ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…