ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ: ಸಿಎಂ ಡಿ.ಕೆ. ಶಿವಕುಮಾರ
ಸಪ್ತಸಾಗರ ವಾರ್ತೆ,ಬೆಂಗಳೂರು, ಜೂನ್ 27: “ಕೆಂಪೇಗೌಡರು ಹುಟ್ಟಿದ್ದು ಒಕ್ಕಲಿಗನಾಗಿ ಬೆಳೆದಿದ್ದು ವಿಶ್ವಮಾನವನಾಗಿ. ಇದನ್ನು ಯಾರೂ ಸಹ ಮರೆಯಬಾರದು. ಈ ಹಾದಿಯಲ್ಲಿಯೇ ನಾವೆಲ್ಲರೂ ನಡೆಯಬೇಕು” ಎಂದು ಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು.ಯಲಹಂಕದಲ್ಲಿ ಬೆಂಗಳೂರು ಉತ್ತರ ತಾಲ್ಲೂಕು ಒಕ್ಕಲಿಗರ ಸಮಿತಿ ಶನಿವಾರ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಶಿವಕುಮಾರ್ ಅವರು ಮಾತನಾಡಿದರು.“ಇಡೀ ವಿಶ್ವ ಬೆಂಗಳೂರನ್ನು ನೋಡುತ್ತಿದೆ. ಇದಕ್ಕೆ ಕಾರಣ ನಾಡಪ್ರಭು ಕೆಂಪೇಗೌಡರು. 500 ವರ್ಷಗಳ ಹಿಂದೆ ಈ ಭೂಮಿಗೆ ಪೂಜೆ ಮಾಡಿ…


