ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ದೇಶ ಪ್ರೇಮ ಇತರರಿಗೆ ಆದರ್ಶ: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ಆ.16: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ದೇಶಪ್ರೇಮ, ಹೋರಾಟದ ಕಿಚ್ಚು ಸದಾ ಆದರ್ಶವಾಗಿವೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಶುಕ್ರವಾರ ತಿಕೋಟಾ ತಾಲೂಕಿನ ರತ್ನಾಪುರ ಗ್ರಾಮದಲ್ಲಿ ಸಂಗೊಳ್ಳಿ ರಾಯಣ್ಣ ಮೂರ್ತಿ ಉದ್ಘಾಟನೆ ಮತ್ತು ಬಬಲೇಶ್ವರ ತಾಲೂಕಿನ ಕಾಖಂಡಕಿ ಬಳಿಯ ಅಗಸನಹಳ್ಳಿಯಲ್ಲಿ ಸಂಗೊಳ್ಳಿ ರಾಯಣ್ಣನವರ 229ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಸಂಗೊಳ್ಳಿ ರಾಯಣ್ಣ ನಾಡಿನ ಏಕತೆ ಮತ್ತು ಸ್ವಾಭಿಮಾನದ ಶಾಶ್ವತ ಸಂಕೇತ. ಕಿತ್ತೂರು ಸಂಸ್ಥಾನವನ್ನು…

Read More

ನಮ್ಮ ಸೈನಿಕರು ಧೈರ್ಯ-ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 26:ಕಾರ್ಗಿಲ್ ಪರಂಪರೆಯು ಪ್ರತಿ ವಿದ್ಯಾರ್ಥಿಗೆ ಭಾರತೀಯ ಸೈನಿಕರ ಧೈರ್ಯ, ತ್ಯಾಗ, ಬಲಿದಾನ, ಸಾಹಸದ ಮಹತ್ವವನ್ನು ತಿಳಿಸುತ್ತದೆ. ಭಾವೈಕ್ಯತೆಗಾಗಿ ಇಂದಿನ ಮಕ್ಕಳು ಏಕತೆ, ಗೌರವದ ಪ್ರಜ್ಞೆಯನ್ನು ಬೆಳೆಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರ ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡಿದ್ದ ‘ಕಾರ್ಗಿಲ್‌ ವಿಜಯೋತ್ಸವ-2025 ಹುತಾತ್ಮ ವೀರಯೋಧರಿಗೆ ನಮನ ಕಾರ್ಯಕ್ರಮ’ದಲ್ಲಿ ಅವರು ಮಾತನಾಡಿದರು.ಕಾರ್ಗಿಲ್ ಯುದ್ಧ ವೀರರ ಕಥೆಗಳು ರಾಷ್ಟ್ರಕ್ಕಾಗಿ ತ್ಯಾಗ, ಧೈರ್ಯ ಮತ್ತು ಸಮರ್ಪಣೆಯ ಅತ್ಯುನ್ನತ ಆದರ್ಶಗಳನ್ನು ಸಾರುತ್ತವೆ….

Read More