ಜನರ ಆಶೋತ್ತರಗಳಿಗನುಗುಣವಾಗಿ ಯೋಜನೆ ರೂಪಿಸಿ ಜನರ ಜೀವನಮಟ್ಟ ಸುಧಾರಿಸಿ-ಉಪಾಧ್ಯಕ್ಷ ಡಿ.ಆರ್.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ ನ.12: ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ದಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ದಿಯ ಕ್ರೀಯಾಯೋಜನೆಗಳನ್ನು ರೂಪಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅವರು ಹೇಳಿದರು.ಮಂಗಳವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ದಿ ಯೋಜನೆಗಳನ್ನು…

Read More

ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More

ಕೇಂದ್ರದ ಜಿಎಸ್‌ಟಿ ನೀತಿ ಮೂಲಕ ಜನರ ಲೂಟಿ: ಮಂಜುನಾಥ ಗೌಡ ಟೀಕೆ

ಸಪ್ತಸಾಗರ ವಾರ್ತೆ, ಮುದ್ದೇಬಿಹಾಳ, ಅ.5 :ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಜಿಎಸ್‌ಟಿ, ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಕೇಂದ್ರ…

Read More

ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ

ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

Read More

ಭೀಮಾ ನದಿಗೆ ಅಪಾರ ಪ್ರಮಾಣದ ನೀರು: ಪ್ರಭಾವದ ಭೀತಿಯಲ್ಲಿ ಜನರು

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 24:ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ನದಿ ದಂಡೆ ಗ್ರಾಮಗಳ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಚಡಚಣ, ಇಂಡಿ, ಆಲಮೇಲ ತಾಲೂಕಿನ ನದಿ ದಂಡೆ ಗ್ರಾಮದ ಜನತೆಯಲ್ಲಿ ಪ್ರವಾಹದ ಭೀತಿ ಉಂಟಾಗಿದೆ.ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತವಾಗಿವೆ.ಕರ್ನಾಟಕ, ಮಹಾರಾಷ್ಟ ಸರ್ಕಾರಗಳುಭೀಮಾ ನದಿಗೆ ಅಡ್ಡಲಾಗಿ ಸಮಾನಾಂತರವಾಗಿ ನಿರ್ಮಾಣ…

Read More

ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕು: ಸಚಿವ ಎಂ. ಬಿ. ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ, ಆ. 31: ಗ್ರಾಮ ಪಂಚಾಯಿತಿಗಳು ದೇವಾಲಯಗಳಿದ್ದಂತೆ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಇಲ್ಲಿಗೆ ಬರುವ ಜನರ ಸ್ಥಳೀಯ ಸಮಸ್ಯೆಗಳನ್ನು ಆಲಿಸಿ ಸೂಕ್ತವಾಗಿ ಸ್ಪಂದಿಸಬೇಕು ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಕರೆ ನೀಡಿದ್ದಾರೆ.ರವಿವಾರ ತಿಕೋಟಾ ತಾಲೂಕಿನ ಸಿದ್ದಾಪುರ ಕೆ. ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ನಿರ್ಮಿಸಿದ! ಅಮೃತ ಗ್ರಾಮ ಪಂಚಾಯತ ನೂತನ ಕಚೇರಿಯ ಕಟ್ಟಡ ಹಾಗೂ ಗೋದಾಮು ಉದ್ಘಾಟನೆ ನೆರವೇರಿಸಿ…

Read More

ಗ್ರಾಮೀಣರ ಬದುಕು ಸುಧಾರಣೆಗೆ ಆದ್ಯತೆ ನೀಡಿ-ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 11: ಜಿಲ್ಲೆಯ ಗ್ರಾಮೀಣ ಜನರ ಜೀವನ ಸುಧಾರಿಸುವ ನಿಟ್ಟಿನಲ್ಲಿ ಹಾಗೂ ಸಾರ್ವಜನಿಕ ಸಮಸ್ಯೆಗಳಿಗೆ ತತ್‌ಕ್ಷಣ ಸ್ಪಂದಿಸಿ, ಪರಿಹಾರ ಒದಗಿಸಲು ಹಾಗೂ ಮೂಲಸೌಲಭ್ಯಗಳನ್ನು ಆದ್ಯತೆ ಮೇಲೆ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ಅಧಿಕಾರಿಗಳು ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಿಸಬೇಕು ಎಂದು ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಗ್ರಾಮೀಣ ಭಾಗದ ಜನರು ಯಾವುದೇ ಮೂಲಭೂತ ಸೌಲಭ್ಯಗಳಿಂದ…

Read More

ಮಂಡ್ಯದವರು ಒಳ್ಳೆಯ ಮನಸ್ಸಿನ ಉಪಕಾರ ಸ್ಮರಣೆಯ ಜನ: ಸಿ.ಎಂ ಮೆಚ್ಚುಗೆ

ಸಪ್ತಸಾಗರ ವಾರ್ತೆ, ಮದ್ದೂರು, ಜು. 28: ಒಂದೇ ದಿನ 1146 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿದ್ದೇವೆ. ಅಭಿವೃದ್ಧಿಗೆ ಹಣ ಇಲ್ಲ ಎಂದು ಸುಳ್ಳು ಎರಚುವ ಬಿಜೆಪಿಗೆ ಇದು ನಮ್ಮ ಸರ್ಕಾರದ ಸವಾಲು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.ಮದ್ದೂರು ವಿಧಾನಸಭಾ ಕ್ಷೇತ್ರದಲ್ಲಿ 1146 ಕೋಟಿ ರೂಪಾಯಿ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಿ, ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದರು.ಕಾವೇರಿ ಅಭಿವೃದ್ಧಿ ನಿಗಮ ಒಂದರಲ್ಲೇ ಎರಡು ವರ್ಷದಲ್ಲಿ 560 ಕೋಟಿ ಅಭಿವೃದ್ಧಿ ಕಾರ್ಯಗಳನ್ನು…

Read More