ಜನ-ಜಾನುವಾರುಗಳಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ-ಸಚಿವ ಡಾ.ಎಂ.ಬಿ. ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜುಲೈ 2ನೇ ವಾರದಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಆದಾಗ್ಯೂ ಮಳೆ ಅಭಾವದಿಂದ ಜಿಲ್ಲೆಯಾದ್ಯಂತ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜವಾಬ್ದಾರಿ ಅರಿತು ಕ್ರಿಯಾಶೀಲರಾಗಿ ಕಾರ್ಯ ನಿರ್ವಹಿಸಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ, ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ಅವರು ಮಾತನಾಡಿದರು.ಜಿಲ್ಲೆ ಸೇರಿದಂತೆ…

Read More

ಕೇಂದ್ರ ಸರ್ಕಾರಕ್ಕೆ ಜನರ ಬಗ್ಗೆ ಕಾಳಜಿ ಇಲ್ಲ: ಯತೀಂದ್ರ ವಾಗ್ದಾಳಿ

ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 7:ಗೃಹಬಳಕೆ ಗ್ಯಾಸ್ ಸಿಲಿಂಡರ್ ದರ ಏರಿಕೆ ಕುರಿತು ಕೇಂದ್ರ ಸರ್ಕಾರದ ವಿರುದ್ಧ ಯತೀಂದ್ರ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.ನಗರಾಭಿವೃದ್ಧಿ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ವಿಜಯಪುರ ಜಿಲ್ಲೆಗೆ ಆಗಮಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.ಬಿಜೆಪಿ ಯಾವಾಗಲೂ ಜನವಿರೋಧಿ ನೀತಿಯನ್ನು ಅನುಸರಿಸುತ್ತ ಬಂದಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಇಳಿಕೆಯಾಗಿದ್ದಾಗಲೂ ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಕಡಿಮೆ ಮಾಡಲಿಲ್ಲ. ಇದೀಗ ಕಚ್ಚಾ…

Read More

ಜನ-ಜಾನುವಾರು ಹಾನಿ ತಪ್ಪಿಸಲು ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಜಿಲ್ಲಾಧಿಕಾರಿ ಮನವಿ

ಸಪ್ತಸಾಗರ ವಾರ್ತೆ,ವಿಜಯಪುರ, ಮೇ 16:ಮಳೆ-ಗಾಳಿ ಹಾಗೂ ಸಿಡಿಲು-ಮಿಂಚಿನಿಂದ ತಪ್ಪಿಸಿಕೊಳ್ಳಲು ಜನ ಸಾಮಾನ್ಯರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ದ ವರುಣ ಮಿತ್ರ ಸಹಾಯವಾಣಿ ಸಂಖ್ಯೆ 9243345433 ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ತಿಳಿಸಿದ್ದಾರೆ.ಹವಾಮಾನ ಮಾಹಿತಿ ಹಾಗೂ ಗುಡುಗು-ಮಿಂಚು ಮುನ್ನೆಚ್ಚರಿಕೆಗಳನ್ನು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್ ಎನ್ ಡಿಎಂಸಿ) ಅಭಿವೃದ್ಧಿಪಡಿಸಿರುವ SIDILU ಆ್ಯಪ್ ನಲ್ಲಿ ಪಡೆಯಬಹುದು ಎಂದವರು ತಿಳಿಸಿದ್ದಾರೆ.ಜೊತೆಗೆ ರಾಷ್ಟ್ರೀಯ ವಿಪತ್ತು ಪ್ರಾಧಿಕಾರ (NDMA) ಅಭಿವೃದ್ಧಿಪಡಿಸಿರುವ…

Read More

ಜನರ ಆಶೋತ್ತರಗಳಿಗನುಗುಣವಾಗಿ ಯೋಜನೆ ರೂಪಿಸಿ ಜನರ ಜೀವನಮಟ್ಟ ಸುಧಾರಿಸಿ-ಉಪಾಧ್ಯಕ್ಷ ಡಿ.ಆರ್.ಪಾಟೀಲ

ಸಪ್ತಸಾಗರ ವಾರ್ತೆ ವಿಜಯಪುರ ನ.12: ಜನರ ಪಾಲ್ಗೊಳ್ಳುವಿಕೆಯಿಂದ ಮಾತ್ರ ಅಭಿವೃದ್ದಿ ಯೋಜನೆಗಳು ಯಶಸ್ವಿಯಾಗುತ್ತವೆ. ಈ ನಿಟ್ಟಿನಲ್ಲಿ ಅಧಿಕಾರಿಗಳು ಜನರ ಬೇಡಿಕೆಗಳಿಗುಣವಾಗಿ ಜನರ ಶ್ರೇಯೋಭಿವೃದ್ದಿಯ ಕ್ರೀಯಾಯೋಜನೆಗಳನ್ನು ರೂಪಿಸುವ ಮೂಲಕ ಜನರ ಜೀವನಮಟ್ಟ ಸುಧಾರಣೆಗೆ ಕ್ರಮ ವಹಿಸುವಂತೆ ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ದಿ ಸಮಿತಿ ಉಪಾಧ್ಯಕ್ಷ ಡಿ.ಆರ್.ಪಾಟೀಲ ಅವರು ಹೇಳಿದರು.ಮಂಗಳವಾರ ಸಂಜೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ 2025-27ನೇ ಸಾಲಿನ ಜಿಲ್ಲಾ ವಾರ್ಷಿಕ ಕರಡು ಅಭಿವೃದ್ದಿ ಯೋಜನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಅಭಿವೃದ್ದಿ ಯೋಜನೆಗಳನ್ನು…

Read More

ಸಮಾಜಕ್ಕೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ -ಸಚಿವ ಡಾ.ಎಂ.ಬಿ.ಪಾಟೀಲ

ಸಪ್ತಸಾಗರ ವಾರ್ತೆ, ವಿಜಯಪುರ, ನ.8: ಮೋಹನ ತರಂಗಿಣಿ, ನಳಚರಿತೆ, ರಾಮಧಾನ್ಯ ಚರಿತೆ, ಹರಿಭಕ್ತಿ ಸಾರ, ಸೇರಿದಂತೆ 316 ಕೀರ್ತನೆಗಳು ನೀಡುವ ಮೂಲಕ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ ಸಂತ ಕನಕದಾಸರ ಕೀರ್ತನೆಗಳು ಜನಮಾನಸದಲ್ಲಿ ಜನಜನಿತವಾಗಿವೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಖಾತೆ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಹೇಳಿದರು.ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರದ ಕಂದಗ¯ತ್ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡ ಸಂತ ಕನಕದಾಸ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಕನಕದಾಸರ…

Read More

ಕೇಂದ್ರದ ಜಿಎಸ್‌ಟಿ ನೀತಿ ಮೂಲಕ ಜನರ ಲೂಟಿ: ಮಂಜುನಾಥ ಗೌಡ ಟೀಕೆ

ಸಪ್ತಸಾಗರ ವಾರ್ತೆ, ಮುದ್ದೇಬಿಹಾಳ, ಅ.5 :ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಗಿನ್ನಿಸ್ ದಾಖಲೆ ನಿರ್ಮಿಸಿದೆ. ಆದರೆ, ಕೇಂದ್ರದ ಬಿಜೆಪಿ ಸರ್ಕಾರ ಜಿಎಸ್‌ಟಿ, ಡಿಜಿಟಲ್ ಇಂಡಿಯಾ ಹೆಸರಿನಲ್ಲಿ ಜನರನ್ನು ಲೂಟಿ ಮಾಡುತ್ತಿದೆ ಎಂದು ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಅಧ್ಯಕ್ಷ ಎಚ್.ಎಸ್. ಮಂಜುನಾಥ ಗೌಡ ಗಂಭೀರ ಆರೋಪ ಮಾಡಿದರು.ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಯುವ ಕಾಂಗ್ರೆಸ್ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಸಾಧನೆಗಳನ್ನು ಮತ್ತು ಕೇಂದ್ರ…

Read More

ಭೀಮಾ ನದಿಗೆ ಪ್ರವಾಹ: 8 ಜನರ ರಕ್ಷಣೆ

ರುದ್ರಪ್ಪ ಆಸಂಗಿ ಸಪ್ತಸಾಗರ ವಾರ್ತೆ ವಿಜಯಪುರ, ಸೆ. 27:ಕಳೆದ ಮೂರು ದಿನಗಳಿಂದ ವಿಜಯಪುರ ಜಿಲ್ಲೆಯಲ್ಲಿ ಸತತವಾಗಿ ಧಾರಾಕಾರ ಮಳೆ ಸುರಿಯುತ್ತಿದ್ದು, ಭೀಮಾ ನದಿಗೆ ಪ್ರವಾಹ ಬಂದು ಜನಜೀವನ ಅಸ್ತವ್ಯಸ್ತವಾಗಿದೆ. ತೋಟದ ಜಮೀನಿನಲ್ಲಿ ನೀರು ಸುತ್ತುವರಿದ ಪರಿಣಾಮ ಮಧ್ಯೆದಲ್ಲಿ ಸಿಲುಕಿಕೊಂಡಿದ್ದ ಎಂಟು ಜನರನ್ನು ರಕ್ಷಿಸಲಾಗಿದೆ.ಜಿಲ್ಲೆಯ ಆಲಮೇಲ ತಾಲೂಕಿನ ತಾವರಖೇಡ ಗ್ರಾಮದಲ್ಲಿ ಪ್ರವಾಹ ಉಂಟಾಗಿ ನದಿ ದಂಡೆ ಜಮೀನುಗಳಿಗೆ ನೀರು ನುಗ್ಗಿದೆ. ನೋಡು ನೋಡುತ್ತಿದ್ದಂತೆಯೇತೋಟದ ಮನೆ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನುಗ್ಗಿ ಸಿಲುಕಿದ್ದ 8 ಜನರನ್ನು ಬೋಟ್ ಬಳಸಿ ರಕ್ಷಣೆ…

Read More

ಭೀಮಾ ನದಿಗೆ ಅಪಾರ ಪ್ರಮಾಣದ ನೀರು: ಪ್ರಭಾವದ ಭೀತಿಯಲ್ಲಿ ಜನರು

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 24:ನೆರೆಯ ಮಹಾರಾಷ್ಟ್ರದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಮಹಾರಾಷ್ಟ್ರದ ಉಜನಿ, ವೀರ್ ಜಲಾಶಯಗಳಿಂದ 2 ಲಕ್ಷ ಕ್ಯೂಸೆಕ್ ನೀರು ಬಿಡುಗಡೆ ಮಾಡಿದ್ದು,ಭೀಮಾನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಇದರಿಂದ ನದಿ ದಂಡೆ ಗ್ರಾಮಗಳ ನಿವಾಸಿಗಳಿಗೆ ಪ್ರವಾಹ ಭೀತಿ ಎದುರಾಗಿದೆ.ಚಡಚಣ, ಇಂಡಿ, ಆಲಮೇಲ ತಾಲೂಕಿನ ನದಿ ದಂಡೆ ಗ್ರಾಮದ ಜನತೆಯಲ್ಲಿ ಪ್ರವಾಹದ ಭೀತಿ ಉಂಟಾಗಿದೆ.ಭೀಮಾನದಿಗೆ ಅಡ್ಡಲಾಗಿ ನಿರ್ಮಿಸಿದ ಬ್ರಿಡ್ಜ್ ಕಂ ಬ್ಯಾರೇಜ್ ಗಳು ಜಲಾವೃತವಾಗಿವೆ.ಕರ್ನಾಟಕ, ಮಹಾರಾಷ್ಟ ಸರ್ಕಾರಗಳುಭೀಮಾ ನದಿಗೆ ಅಡ್ಡಲಾಗಿ ಸಮಾನಾಂತರವಾಗಿ ನಿರ್ಮಾಣ…

Read More