ಅವಧಿಗೆ ಮುನ್ನವೇ ಶೇ.100 ಸಾಧನೆ: ಬಬಲೇಶ್ವರದ ಮತಗಟ್ಟೆ ಅಧಿಕಾರಿಗಳಿಗೆ ಸನ್ಮಾನ
ಸಪ್ತಸಾಗರ ವಾರ್ತೆ,ವಿಜಯಪುರ, ಜು.16:2026ರ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯದಲ್ಲಿ ನಿಗದಿತ ಅವಧಿಗೂ ಮುನ್ನವೇ ಶೇ.100ರಷ್ಟು ಪ್ರಗತಿ ಸಾಧಿಸಿದ ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತಗಟ್ಟೆ ಮೇಲ್ವಿಚಾರಕರನ್ನು ಗುರುವಾರ ನಗರದ ಉಪ ವಿಭಾಗಾಧಿಕಾರಿಗಳ ಕಚೇರಿಯಲ್ಲಿ ಸನ್ಮಾನಿಸಿ ಅಭಿನಂದಿಸಲಾಯಿತು.ಮತದಾರರ ಪಟ್ಟಿ ಪರಿಷ್ಕರಣೆಯ ಅಂಗವಾಗಿ ಗಣತಿ ನಮೂನೆಗಳ ವಿತರಣೆ ಹಾಗೂ ಡಿಜಿಟೈಜೇಶನ್ ಕಾರ್ಯವನ್ನು ಸಮಯಕ್ಕಿಂತ ಮುಂಚಿತವಾಗಿ ಯಶಸ್ವಿಯಾಗಿ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಈ ಗೌರವ ಸಲ್ಲಿಸಲಾಯಿತು.29-ಬಬಲೇಶ್ವರ ವಿಧಾನಸಭಾ ಮತಕ್ಷೇತ್ರದ ಭಾಗ ಸಂಖ್ಯೆ 84ರ ಮತಗಟ್ಟೆ…


