ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ವಿಶ್ವಪರಿಸರ ದಿನಾಚರಣೆ: ಸಸಿ ನೆಟ್ಟುಪರಿಸರ ಸಂರಕ್ಷಣೆಗೆ ವಿದ್ಯಾರ್ಥಿನಿಯರ ಸಂಕಲ್ಪ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 5:ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಕೋಶದವತಿಯಿಂದ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಕಾರ್ಯಕ್ರಮದ ಅಂಗವಾಗಿ ವಿಶ್ವವಿದ್ಯಾನಿಲಯ ಆವರಣದಲ್ಲಿ ಸಸಿ ನೆಡುವ ಅಭಿಯಾನ ಹಮ್ಮಿಕೊಳ್ಳಲಾಯಿತು. ವಿದ್ಯಾರ್ಥಿನಿಯರು ಸ್ವಯಂಪ್ರೇರಿತರಾಗಿಸಸಿಗಳನ್ನು ನೆಡುವ ಮೂಲಕ ಹಸಿರು ಪರಿಸರ ನಿರ್ಮಾಣಕ್ಕೆ ತಮ್ಮಬದ್ಧತೆಯನ್ನು ವ್ಯಕ್ತಪಡಿಸಿದರು.ಇದೇ ವೇಳೆ ಪರಿಸರ ಸಂರಕ್ಷಣೆಯಮಹತ್ವದ ಕುರಿತು ಜಾಗೃತಿ ಮೂಡಿಸಲಾಯಿತು.ಮುಖ್ಯ ಅತಿಥಿಯಾಗಿ ಮಾತನಾಡಿದ ಉದ್ಯಮಿ ಹಾಗೂ ಸಾಮಾಜಿಕ ಚಿಂತಕಬಸಂತಕುಮಾರ ಪಾಟೀಲ, “ಪ್ರತಿಯೊಬ್ಬ ಪ್ರಜೆಯೂ ಒಂದೊಂದುಮರವನ್ನು ನೆಟ್ಟರೆ ನಮ್ಮ ದೇಶ ನಂದನವನದಂತೆ ಕಂಗೋಳಿಸುತ್ತದೆ.ಪರಿಸರ…

Read More