ಓಎಂಆರ್ ಶೀಟ್–ಪ್ರಶ್ನೆ ಪತ್ರಿಕೆ ವ್ಯತ್ಯಾಸ, ಪರೀಕ್ಷೆ ವಿಳಂಬದಿಂದ ಅಭ್ಯರ್ಥಿಗಳ ಭವಿಷ್ಯಕ್ಕೆ ಧಕ್ಕೆ; ಕೇಶವ್ ಪ್ರಸಾದ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಯಲ್ಲಿ ಓಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಯಲ್ಲಿನ ವ್ಯತ್ಯಾಸ, ಓಎಂಆರ್ ಶೀಟ್ ವಿತರಣೆಯಲ್ಲಿನ ಅವ್ಯವಸ್ಥೆ ಹಾಗೂ ಪರೀಕ್ಷೆ ವಿಳಂಬವಾಗಿ ಆರಂಭವಾದ ಘಟನೆಗಳು ಅಭ್ಯರ್ಥಿಗಳಲ್ಲಿ ತೀವ್ರ ಆತಂಕ ಮತ್ತು ಅನುಮಾನಕ್ಕೆ ಕಾರಣವಾಗಿವೆ ಎಂದು ವಿಧಾನ ಪರಿಷತ್ ಸದಸ್ಯ ಕೇಶವ ಪ್ರಸಾದ್ ಆರೋಪಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ. ಪಾಟೀಲ ಪ್ರತಿನಿಧಿಸುವ ಕ್ಷೇತ್ರದಲ್ಲಿಯೇ ಇಂತಹ ಗಂಭೀರ ಗೊಂದಲ ಉಂಟಾಗಿರುವುದರಿಂದ ಅವರು ನೈತಿಕ…

Read More

ತಿಕೋಟ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷೆ ಗೊಂದಲ:ಪರೀಕ್ಷಾ ಮಂಡಳಿಗೆ ವರದಿ ಸಲ್ಲಿಕೆ-ಡಿಸಿ ಆನಂದ ಕೆ.

ಸಪ್ತಸಾಗರ ವಾರ್ತೆ,ವಿಜಯಪುರ, ಆ.2:ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಶಾರದಾಂಬಾ ಶಿಕ್ಷಣ ಸಂಸ್ಥೆಯಲ್ಲಿದ್ದ ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಲಿಖಿತ ಪರೀಕ್ಷಾ ಕೇಂದ್ರದಲ್ಲಿ ಭಾನುವಾರ ಕೆಲಕಾಲ ಗೊಂದಲ ಉಂಟಾಯಿತು. ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ನ ಕ್ರಮಸಂಖ್ಯೆ ಹೊಂದಿಕೆಯಾಗಿಲ್ಲ ಎಂದು ಆರೋಪಿಸಿ ಕೆಲ ಪರೀಕ್ಷಾರ್ಥಿಗಳು ಪರೀಕ್ಷೆಯನ್ನು ಬಹಿಷ್ಕರಿಸಿ ಒಎಂಆರ್ ಶೀಟ್ ಮತ್ತು ಪ್ರಶ್ನೆ ಪತ್ರಿಕೆಗಳೊಂದಿಗೆ ಕೇಂದ್ರದ ಹೊರಗೆ ಬಂದು ಪ್ರತಿಭಟನೆ ನಡೆಸಿದರು.ಘಟನೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸ್ಪಷ್ಟನೆ ನೀಡಿ, ಪ್ರಶ್ನೆ ಪತ್ರಿಕೆ ಹಾಗೂ ಒಎಂಆರ್ ಶೀಟ್‌ಗಳನ್ನು ನಿಗದಿತ…

Read More

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆಯಲ್ಲಿ ಅವ್ಯವಸ್ಥೆ: ತಿಕೋಟದಲ್ಲಿ ಪರೀಕ್ಷಾರ್ಥಿಗಳ ಆಕ್ರೋಶ, ಮರು ಪರೀಕ್ಷೆಗೆ ಒತ್ತಾಯ

ಸಪ್ತಸಾಗರ ವಾರ್ತೆ,ವಿಜಯಪುರ, ಆ.2: ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪ್ರವೇಶ ಪರೀಕ್ಷೆ ವೇಳೆ ವಿಜಯಪುರ ಜಿಲ್ಲೆಯ ತಿಕೋಟ ಪಟ್ಟಣದ ಪರೀಕ್ಷಾ ಕೇಂದ್ರದಲ್ಲಿ ಭಾರೀ ಗೊಂದಲ ಉಂಟಾಗಿ, ನೂರಾರು ಪರೀಕ್ಷಾರ್ಥಿಗಳು ಪರೀಕ್ಷೆಗೆ ಬಹಿಷ್ಕಾರ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಭಾನುವಾರ ನಡೆದಿದೆ.ತಿಕೋಟದ ಕೋಟ್ಯಾಳ ರಸ್ತೆಯಲ್ಲಿರುವ ಶಾರದಾಂಬಾ ಶಿಕ್ಷಣ ಸಂಸ್ಥೆಯ ಪರೀಕ್ಷಾ ಕೇಂದ್ರದಲ್ಲಿ ಬೆಳಿಗ್ಗೆ 10.30ಕ್ಕೆ ಆರಂಭವಾಗಬೇಕಿದ್ದ ಪರೀಕ್ಷೆಗೆ ಪ್ರಶ್ನೆಪತ್ರಿಕೆ ಅರ್ಧ ಗಂಟೆ ತಡವಾಗಿ, ಸುಮಾರು 11 ಗಂಟೆಗೆ ವಿತರಿಸಲಾಗಿದೆ ಎಂದು ಪರೀಕ್ಷಾರ್ಥಿಗಳು ಆರೋಪಿಸಿದರು.ಇದರ ಜೊತೆಗೆ ಪ್ರಶ್ನೆಪತ್ರಿಕೆ ಮತ್ತು ಓಎಂಆರ್ ಶೀಟ್‌ಗಳ…

Read More

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ಸಪ್ತಸಾಗರ ವಾರ್ತೆ,ವಿಜಯಪುರ, ಆ.1:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವೃಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ (ಆ. 2) ಭಾನುವಾರ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 24434 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ವಿಜಯಪುರ ನಗರ-55, ತಿಕೋಟಾ ನಗರ-03 ಸೇರಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ವಿಜಯಪುರ ಗ್ರಾಮೀಣ ಭಾಗದ ಕವಲಗಿಯಲ್ಲಿ 2 ಹಾಗೂ ತಿಡಗುಂದಿಯಲ್ಲಿ 1 ಸೇರಿದಂತೆ ಒಟ್ಟು…

Read More