ಜ್ಞಾನೇಶಕುಮಾರ್ ರಾಜೀನಾಮೆಗೆ ಆಗ್ರಹ: ಲಾಠಿಚಾರ್ಜ್ ಖಂಡಿಸಿ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಅ. 11:ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಹೋರಾಟಗಾರರ ಮೇಲಿನ ಲಾಠಿಚಾರ್ಜ್ ಖಂಡಿಸಿ ವಿವಿಧ ಪ್ರಗತಿಪರ ಸಂಘಟನೆಗಳ ವೇದಿಕೆಯ ನೇತೃತ್ವದಲ್ಲಿ ಭಾನುವಾರ ಅಂಬೇಡ್ಕರ್ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು.ಎಸ್‌ಯುಸಿಐ(ಸಿ) ಜಿಲ್ಲಾ ಕಾರ್ಯದರ್ಶಿ ಭಗವಾನ್ ರೆಡ್ಡಿ ಮಾತನಾಡಿ, ಕೇಂದ್ರ ಗೃಹ ಇಲಾಖೆ ಪ್ರಜಾಸತ್ತಾತ್ಮಕ ಹೋರಾಟಗಳನ್ನು ಹತ್ತಿಕ್ಕಲು ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು. ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಲಾಠಿಚಾರ್ಜ್ ಮಾಡಿ, ರಸ್ತೆಗೆ ಬೀಳಿಸಿ ಎಳೆದಾಡಿರುವ ದೃಶ್ಯಗಳು ಪ್ರಜಾಪ್ರಭುತ್ವದ ಕಗ್ಗೊಲೆಗೆ…

Read More