ಸಿದ್ಧಸಿರಿ ನೂತನ ಪದಾಧಿಕಾರಿಗಳ ಪದಗ್ರಹಣ: ರಾಮನಗೌಡ ಪಾಟೀಲ ಯತ್ನಾಳ ಅಧ್ಯಕ್ಷ, ಪ್ರಭುಗೌಡ ದೇಸಾಯಿ ಉಪಾಧ್ಯಕ್ಷ

ಸಪ್ತಸಾಗರ ವಾರ್ತೆ, ವಿಜಯಪುರ, ಏ. 20:ಸಿದ್ಧಸಿರಿ ಮಲ್ಟಿ-ಸ್ಟೇಟ್ ಮಲ್ಟಿ-ಪರ್ಪಸ್ ಕೋ ಆಪರೇಟಿವ್ ಸೊಸೈಟಿ.ಲಿ ವಿಜಯಪುರ ದ ನೂತನ ಅಧ್ಯಕ್ಷರಾಗಿ ರಾಮನಗೌಡ ಬ.ಪಾಟೀಲ ಯತ್ನಾಳ ಹಾಗೂ ಉಪಾಧ್ಯಕ್ಷರಾಗಿ ಪ್ರಭುಗೌಡ ದೇಸಾಯಿ ಹಾಗೂ ಆಡಳಿತ ಮಂಡಳಿಯ ನಿರ್ದೇಶಕರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.5 ವರ್ಷಗಳ ಅವಧಿಗಾಗಿ ಈಚೆಗೆ ನಡೆದ ಆಡಳಿತ ಮಂಡಳಿಯ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದರು. ನಗರ ಶಾಸಕರು ಹಾಗೂ ನಿರ್ದೇಶಕ ಬಸನಗೌಡ ಪಾಟೀಲ ಯತ್ನಾಳ, ನಿರ್ದೇಶಕರಾದ ಸಂಗನಬಸಪ್ಪ ಸಜ್ಜನ, ಶಿವಾನಂದ ಅಣೆಪ್ಪನವರ, ಬಸಯ್ಯ ಹಿರೇಮಠ, ಸಾಯಿಬಾಬಾ ಸಿಂದಗೇರಿ, ಜಗದೀಶ…

Read More

ಆಮ್ ಆದ್ಮಿ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪೂರ ಸೇರಿ ಎಲ್ಲ ಹೋರಾಟಗಾರರ ಮೇಲಿನ ಪ್ರಕರಣ ಹಿಂಪಡೆದು ಬಿಡುಗಡೆಗೊಳಿಸಿ : ಎಎಪಿ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ

ಸಪ್ತಸಾಗರ ವಾರ್ತೆ, ವಿಜಯಪುರ, ಜ. 5 : ಸರ್ಕಾರಿ ವೈದ್ಯಕೀಯ ಮಹಾವಿದ್ಯಾಲಯ ಸ್ಥಾಪನಾ ಹೋರಾಟ ಸಮಿತಿ ಸದಸ್ಯ, ಆಮ್ ಆದ್ಮಿ ಪಕ್ಷದ ಜಿಲ್ಲಾಧ್ಯಕ್ಷ ಭೋಗೇಶ ಸೋಲಾಪುರ ಸೇರಿದಂತೆ ಆರು ಜನ ಹೋರಾಟಗಾರರನ್ನು ಕೂಡಲೇ ಬಿಡುಗಡೆಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ಅವರು ಆಗ್ರಹಿಸಿದರು.ನಗರದ ಪ್ರವಾಸಿ ಮಂದಿರದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ವಿಜಯಪುರ ನಗರದ ಡಾ. ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ 106 ದಿನಗಳ ಕಾಲ ಶಾಂತಿಯುತ ಅನಿರ್ದಿಷ್ಟ ಧರಣಿ ಸತ್ಯಾಗ್ರಹ ನಡೆಸಿ…

Read More

ಜಿಲ್ಲಾ ಕಾನಿಪ ನೂತನ ಅಧ್ಯಕ್ಷ, ಉಪಾಧ್ಯಕ್ಷರಿಗೆ ಗೌರವ ಸನ್ಮಾನ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ತಾಲೂಕಿನ ನಾಗಠಾಣ ಗ್ರಾಮದಲ್ಲಿ ಜರುಗಿದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ದಶಮಾನೋತ್ಸವ ಹಾಗೂ ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ನೂತನವಾಗಿ ಅಧ್ಯಕ್ಷರಾಗಿ ಆಯ್ಕೆಯಾದ ಅಶೋಕ ಯಡಳ್ಳಿ, ಉಪಾಧ್ಯಕ್ಷರಾಗಿ ಆಯ್ಕೆಯಾದ ಶಶಿಕಾಂತ ಮೆಂಡೆಗಾರ ಅವರನ್ನು ಹಾಗೂ ಕರುನಾಡು ಪ್ರಭ ಪತ್ರಿಕೆಯ ಸಂಸ್ಥಾಪಕ ಶರಣು ಮಸಳಿ ಅವರನ್ನು ಶಾಲೆಯ ವತಿಯಿಂದ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ಕಲ್ಲಯಾರೂಢ ಮಠದ ಪ್ರಜ್ಞಾನಂದ ಸ್ವಾಮೀಜಿ, ಗೂಳಪ್ಪ ಪೂಜಾರಿ, ಶರಣಬಸು ಪೂಜಾರಿ, ನಾಗಠಾಣ ಮತಕ್ಷೇತ್ರದ…

Read More

ಜಿಒಸಿಸಿ ಬ್ಯಾಂಕ್ ನೂತನ ಅಧ್ಯಕ್ಷರಾಗಿ ಅರ್ಜುನ, ಉಪಾಧ್ಯಕ್ಷೆಯಾಗಿ ಪುಷ್ಪಾ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 30:ಸರಕಾರಿ ನೌಕರರ ಸಹಕಾರಿ ಬ್ಯಾಂಕಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧಕ್ಷ ಸ್ಧಾನಕ್ಕೆ ಅರ್ಜುನ ಲಮಾಣಿ (ಶಿಕ್ಷಣ ಇಲಾಖೆ) ಹಾಗೂ ಉಪಾಧ್ಯಕ್ಷ ಸ್ಧಾನಕ್ಕೆ ಪುಷ್ಪಾ ಗಚ್ಚಿನಮಠ (ಶಿಕ್ಷಣ ಇಲಾಖೆ) ಇವರುಗಳು ಮುಂದಿನ ಅವಧಿಯವರೆಗೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಮಂಗಳವಾರ ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಆನಂದಗೌಡ ಬಿರಾದಾರ ಮತ್ತು ಮಲಕಪ್ಪ ಟಕ್ಕಳಕಿ ಇವರು ತಮ್ಮ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹುದ್ದೆಗೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸಿದ್ದರಿಂದ, ತೆರವಾದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಜರುಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಅರ್ಜುನ…

Read More

ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ

ಸಪ್ತಸಾಗರ ವಾರ್ತೆ, ವಿಜಯಪುರ, ನ.18: ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಪದಾಧಿಕಾರಿಗಳ ಆಯ್ಕೆ ಮಾಡಿ ಆದೇಶ ಪ್ರತಿ ನೀಡಲಾಗಿದೆ ಎಂದು ಯುವ ಘಟಕದ ರಾಜ್ಯಾಧ್ಯಕ್ಷ ಸುನೀಲ ನಾಯಕ ತಿಳಿಸಿದ್ದಾರೆ.ಆಲ್ ಇಂಡಿಯಾ ಬಂಜಾರಾ ಸೇವಾ ಸಂಘದ ವಿಜಯಪುರ ಜಿಲ್ಲೆಯ ಯುವ ಘಟಕದ ಜಿಲ್ಲಾಧ್ಯಕ್ಷರಾಗಿ ರವಿ ರಾಠೋಡ ಅವರನ್ನು ಆಯ್ಕೆ ಮಾಡಲಾಗಿದೆ.ಈ ಜವಾಬ್ದಾರಿಯನ್ನು ಬಂಜಾರಾ ಸಮಾಜದ ಏಳಿಗೆಗಾಗಿ ಪ್ರಾಮಾಣಿಕವಾಗಿ ಸೇವೆ ಸಲ್ಲಿಸಿ,ಯುವಕರನ್ನು ಸಂಘಟಿಸಿ ಸಮಾಜದಲ್ಲಿ ಜಾಗೃತಿ ಮೂಡಿಸುವ ಕಾರ್ಯ ತಮ್ಮಿಂದ ಆಗಲಿ ಎಂದು…

Read More

ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವಿರೋಧವಾಗಿ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ನ. 15: ನೂತನ ವಿಜಯಪುರ ಸೌಹಾರ್ದ ಸಹಕಾರಿ ಒಕ್ಕೂಟದ ಅಧ್ಯಕ್ಷರಾಗಿ ಸಂಜಯ ಪಾಟೀಲ (ಕನಮಡಿ) ಹಾಗೂ ಉಪಾಧ್ಯಕ್ಷರಾಗಿ ಚಂದ್ರಶೇಖರ ಕವಟಗಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ವಿ.ಸಿ.ಕುದಾಪುರ ಪ್ರಕಟಿಸಿದರು.ಶನಿವಾರ ನಡೆದ ಸಭೆಯಲ್ಲಿ ವಿಜಯಪುರ ಸೌಹಾರ್ದ ಸಹಕಾರಿ ಸಂಘಗಳ ಒಕ್ಕೂಟದ ನೂತನ ಆಡಳಿತ ಮಂಡಳಿ ಸದಸ್ಯರಾದ ಅರುಣ ವಾರದ,ಸುರೇಶ ಬಿರಾದಾರ, ಸಿದ್ದು ಮಲ್ಲಿಕಾರ್ಜುನಮಠ, ಅರುಣ ಮಠ,ಮೋನೇಶ ಪತ್ತಾರ, ಸತೀಶ ಶಿಂತ್ರೆ,ವಿವೇಕಾನಂದ ಶಿರೋಳ್ಕರ್, ಯಮನಪ್ಪ ಸಾತಿಹಾಳ್ (ವಿಜಯಪುರ ಗ್ರಾಮಾಂತರ),ಬಾಲಚಂದ್ರ ಮುಂಜಾನೆ (ಬಸವನ ಬಾಗೇವಾಡಿ ),…

Read More

ಸಹಕಾರಿ ಯುನಿಯನ್ ಅಧ್ಯಕ್ಷರಾಗಿ ಮುಲ್ಲಾ, ಉಪಾಧ್ಯಕ್ಷರಾಗಿ ಅಮರಗೊಂಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ. 14 :ಹಿರಿಯ ಸಹಕಾರಿಗಳಾದ ಸಚಿವ ಶಿವಾನಂದ ಪಾಟೀಲ ಅವರ ಪ್ರಯತ್ನದಿಂದಾಗಿ ಶ್ರೀ ಸಿದ್ಧೇಶ್ವರ ಸಹಕಾರಿ ಬ್ಯಾಂಕ್ ಆಡಳಿತ ಮಂಡಳಿ ಚುನಾವಣೆಯಲ್ಲಿ ಎದುರಾಳಿಗಳನ್ನು ಹಳೆಯ ಪೆನಲ್ ಕ್ಲೀನಸ್ವೀಪ್ ಮಾಡಿದ ಬೆನ್ನಲ್ಲೇ ಸಚಿವರ ಪ್ರಯತ್ನದಿಂದಾಗಿ ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ ನಡೆದಿದೆ.ವಿಜಯಪುರ ಜಿಲ್ಲಾ ಸಹಕಾರಿ ಯುನಿಯನ್ ನಿ. ಅಧ್ಯಕ್ಷರಾಗಿ ಎಂ.ಸಿ. ಮುಲ್ಲಾ, ಉಪಾಧ್ಯಕ್ಷರಾಗಿ ನಾಗಪ್ಪ ಅಮರಗೊಂಡ ಅವಿರೋಧ ಆಯ್ಕೆಯಾಗಿದ್ದಾರೆ.ಈಚೆಗೆ ನಡೆದ ಚುನಾವಣೆಯಲ್ಲಿ 2025-30 ರ ಅವಧಿಗೆ ಆಡಳಿತ ಮಂಡಳಿಯ…

Read More

ಹಾಪ್ ಕಾಮ್ಸ್ ಜಿಲ್ಲಾ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ, ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧ ಆಯ್ಕೆ

ಸಪ್ತಸಾಗರ ವಾರ್ತೆ ವಿಜಯಪುರ, ಅ.5.ಜಿಲ್ಲಾ ತೋಟಗಾರಿಕೆ ಸಂಸ್ಕರಣ ಸಂಘದ ಆಡಳಿತ ಮಂಡಳಿ ನೂತನ ಅಧ್ಯಕ್ಷರಾಗಿ ಸಿದ್ದಪ್ಪ ಕಬಾಡಗಿ ಹಾಗೂ ಉಪಾಧ್ಯಕ್ಷರಾಗಿ ನಂದಕಿಶೋರ ರಾಠೋಡ ಅವಿರೋಧವಾಗಿ ಆಯ್ಕೆಗೊಂಡಿದ್ದಾರೆ. ಸಂಘದ ಕಚೇರಿಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆಯಿತು. ಮುಂದಿನ ಐದು ವರ್ಷದವರೆಗೆ ಅವರು ಅಧಿಕಾರಾವಧಿ ಹೊಂದಿದ್ದು, ಅಲ್ಲದೆ, ಆಡಳಿತ ಮಂಡಳಿಯ ಸದಸ್ಯರಾಗಿ ಗುರುಪಾದಪ್ಪಗೌಡ ಪಾಟೀಲ, ಎಸ್.ಪಿ. ಬಿರಾದಾರ, ಸಂಜೀವ ಮಠ, ವಿರುಪಾಕ್ಷಿ ಕಕಮರಿ, ಹಿದಾಯಿತಲ್ಲಾ ಖಾಜಿ, ಎಸ್‌ .ವಿ. ಪಾಟೀಲ, ಸಂಜಯ ನಾಯಕ, ಮಡಿವಾಳಪ್ಪ ವಾಲಿಕಾರ, ಗುರುಬಾಯಿ…

Read More

ಖಾದಿ ಸ್ವಾಭಿಮಾನ-ಸ್ವಾವಲಂಬನೆ ಸಂಕೇತ- ಮಂಡಳಿ ಅಧ್ಯಕ್ಷ ಬಸನಗೌಡ ತುರವಿಹಾಳ

ಸಪ್ತಸಾಗರ ವಾರ್ತೆ ವಿಜಯಪುರ, ಸೆ.8:ಖಾದಿ ಬಟ್ಟೆ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ಖಾದಿ ದೇಶಾಭಿಮಾನದ ಪ್ರತೀಕವಾಗಿದೆ. ಖಾದಿ ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಉದ್ಯೋಗಾವಕಾಶ ಹೆಚ್ಚಿಸಿದೆ ಎಂದು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾದ ಮಸ್ಕಿ ಶಾಸಕರಾದ ಬಸನಗೌಡ ತುರವಿಹಾಳ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಇಂಡಿ ರಸ್ತೆಯ ಚಾಂದಿನಿ ಫಂಕ್ಷನ್ ಹಾಲ್‍ನಲ್ಲಿ…

Read More