ಹಿರಿಯ ಪತ್ರಕರ್ತರ ಕಲ್ಯಾಣವನ್ನು ಖಚಿತಪಡಿಸಿಕೊಳ್ಳುವಂತೆ ಸಂಸದ ಎನ್.ಕೆ. ಪ್ರೇಮಚಂದ್ರನ್ ಪ್ರಧಾನಿಗೆ ಮನವಿ

ಸಪ್ತಸಾಗರ ವಾರ್ತೆ, ನವದೆಹಲಿ, ಜ. 13: ದೇಶದಲ್ಲಿ ನಿವೃತ್ತ ಪತ್ರಕರ್ತರಿಗೆ ಪರಿಣಾಮಕಾರಿ ಕಲ್ಯಾಣ ಕಾರ್ಯಕ್ರಮಗಳನ್ನು ಖಚಿತಪಡಿಸಿಕೊಳ್ಳಲು ತುರ್ತು ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೇರಳದ ಹಿರಿಯ ಲೋಕಸಭಾ ಸದಸ್ಯ ಎನ್.ಕೆ. ಪ್ರೇಮಚಂದ್ರನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ಕೇಂದ್ರ ಸರ್ಕಾರವನ್ನು ಕೋರಿದ್ದಾರೆ.ಭಾರತದ ಹಿರಿಯ ಪತ್ರಕರ್ತರ ಒಕ್ಕೂಟವು ಸಿದ್ಧಪಡಿಸಿದ ಜ್ಞಾಪಕ ಪತ್ರವನ್ನು ಅವರು ಬುಧವಾರ ಲೋಕಸಭೆಯಲ್ಲಿರುವ ಪ್ರಧಾನಿ ಕಚೇರಿಗೆ ಹಸ್ತಾಂತರಿಸಿದ ತಮ್ಮ ಕವರಿಂಗ್ ಲೆಟರ್‌ನೊಂದಿಗೆ ಪ್ರಧಾನ ಮಂತ್ರಿಗೆ ಕಳುಹಿಸಿದರು. ಎಸ್‌ಜೆಎಫ್‌ಐನ ದೆಹಲಿ-ಎನ್‌ಸಿಆರ್ ಘಟಕದ ಪ್ರಧಾನ ಕಾರ್ಯದರ್ಶಿ ಜಾರ್ಜ್…

Read More

ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರ ಘೋಷಣೆಗೆ ಶಾಸಕ ಯತ್ನಾಳ ಪ್ರಧಾನಿಗೆ ಪತ್ರ

ಸಪ್ತಸಾಗರ ವಾರ್ತೆ, ವಿಜಯಪುರ, ಅ. 8: ಉತ್ತರ ಕರ್ನಾಟಕದ ಪ್ರವಾಹ ಪೀಡಿತ ಪ್ರದೇಶಗಳಿಗೆ ತುರ್ತು ಪರಿಹಾರಕ್ಕಾಗಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಬುಧವಾರ ಪತ್ರ ಬರೆದು ಮನವಿ ಮಾಡಿದ್ದಾರೆ.ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಉಂಟಾಗಿರುವ ಪ್ರವಾಹದಿಂದ ದೊಡ್ಡ ಪ್ರಮಾಣದಲ್ಲಿ ಹಾನಿ ಮತ್ತು ಸ್ಥಳಾಂತರಕ್ಕೆ ಕಾರಣವಾಗಿದೆ. ಭೀಮಾ ನದಿಯ ದಡದಲ್ಲಿ ಉಂಟಾದ ಭಾರಿ ಪ್ರವಾಹವು 10 ಲಕ್ಷ ಹೆಕ್ಟೇರ್ ಗೂ ಹೆಚ್ಚು ಪ್ರದೇಶದಲ್ಲಿ ಬೆಳೆ ನಷ್ಟಕ್ಕೆ ಕಾರಣವಾಗಿದ್ದು, ರೈತರು ತಾವು ಬೆಳೆದ ಬೆಳೆಗಳು…

Read More

ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಸಮರ್ಪಕ ಅನುಷ್ಠಾನಕ್ಕೆ ಡಿಸಿ ಆನಂದ ಸೂಚನೆ

ಸಪ್ತ ಸಾಗರ ವಾರ್ತೆ ವಿಜಯಪುರ, ಆ. 22: ಆರೋಗ್ಯ ಸೌಕರ್ಯ ಮತ್ತು ವಿವಿಧ ಆರೋಗ್ಯ ಸೌಲಭ್ಯ ಒದಗಿಸಿ ಜಿಲ್ಲೆಯಲ್ಲಿ ಗರ್ಭಿಣಿ ಮಹಿಳೆಯರಿಗೆ ಆರೋಗ್ಯ ಸುರಕ್ಷತೆಗೆ ಅಗತ್ಯ ಆರೋಗ್ಯ ತಿಳುವಳಿಕೆ ಮೂಡಿಸಿ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ಪ್ರಧಾನಮಂತ್ರಿ ಸುರಕ್ಷಿತ ಮಾತೃತ್ವ ಅಭಿಯಾನ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸುವಂತೆ ಜಿಲ್ಲಾಧಿಕಾರಿ ಡಾ. ಆನಂದ.ಕೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಸಂಜೆ ನಡೆದ ಜಿಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಗರ್ಭಿಣಿ…

Read More

ಬೆಳಗಾವಿ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಶೆಟ್ಟರ್ ಆಹ್ವಾನ

ಸಪ್ತಸಾಗರ ವಾರ್ತೆ, ನವದೆಹಲಿ, ಆ. 4:ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಸಂಸದ ಜಗದೀಶ ಶೆಟ್ಟರ ಸೋಮವಾರ ನವದೆಹಲಿಯಲ್ಲಿ ಭೇಟಿ ಮಾಡಿ ಬೆಳಗಾವಿಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದರು.ಬೆಳಗಾವಿ ಬಾರ್ ಅಸೋಸಿಯೇಷನ್ ತನ್ನ ಅಸ್ತಿತ್ವದ 150 ವರ್ಷ ಪೂರ್ಣಗೊಳಿಸಿದ ಹಿನ್ನಲೆಯಲ್ಲಿ 150 ನೇ ವಾರ್ಷಿಕೋತ್ಸವ ಸಮಾರಂಭವನ್ನು ಆಚರಿಸಿಕೊಳ್ಳುತ್ತಿದ್ದು, ಈ ಸಮಾರಂಭಕ್ಕೆ ಬೆಳಗಾವಿ ಬಾರ್ ಅಸೋಸಿಯೇಷನ್ ಅಧ್ಯಕ್ಷರ ಮನವಿಯಂತೆ ಮುಖ್ಯ ಅತಿಥಿಗಳಾಗಿ ಆಗಮಿಸುವ ಕುರಿತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಬೆಳಗಾವಿ ಲೋಕಸಭಾ ಸದಸ್ಯ ಹಾಗೂ ಕರ್ನಾಟಕದ…

Read More

ಖರ್ಗೆ ಪ್ರಧಾನಿಗೆ ಕ್ಷಮೆ ಯಾಚಿಸಬೇಕು: ಸಂಸದ ಜಿಗಜಿಣಗಿ ಒತ್ತಾಯ

ಸಪ್ತಸಾಗರ ವಾರ್ತೆ, ಜು. 21:ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕವಚನ ಪದ ಬಳಕೆ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೆ ಖರ್ಗೆಯವರು ಪ್ರಧಾನಿ ಕ್ಷಮೆ ಕೇಳಬೇಕೆಂದು ಸಂಸದ ರಮೇಶ ಜಿಗಜಿಣಗಿ ಅವರು ಒತ್ತಾಯಿಸಿದ್ದಾರೆ.ಇಡೀ ವಿಶ್ವದ ನಾಯಕರೇ ಅತ್ಯಂತ ಗೌರವ ತೋರುವ ಶ್ರೇಷ್ಠ ವ್ಯಕ್ತಿತ್ವ ಹೊಂದಿರುವ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಏಕ ವಚನ ಪದ ಪ್ರಯೋಗಿಸಿ ಟೀಕೆ ಮಾಡುತ್ತಿರುವುದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ‌ಖರ್ಗೆ ಅವರಿಗೆ ಶೋಭೆ ತರುವುದಿಲ್ಲ ಎಂದು ಸಂಸದ ರಮೇಶ ಜಿಗಜಿಣಗಿ ಪತ್ರಿಕಾ ಹೇಳಿಕೆಯಲ್ಲಿ…

Read More