ಕಸ ವಿಲೇವಾರಿಗೆ ವಿರೋಧ ಮಾಡುವವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಸುವುದಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ
ಸಪ್ತಸಾಗರ ವಾರ್ತೆ, ಬೆಂಗಳೂರು, ಫೆ.19:“ಬಿಜೆಪಿ ನಾಯಕರುಗಳು ಕಸ ವಿಲೇವಾರಿಗೆ ಬಿಡುವುದು ಬೇಡ. ಅವರೇ ಕಸವನ್ನು ಇಟ್ಟುಕೊಳ್ಳಲಿ. ಯಾರು ಬಿಡುವುದಿಲ್ಲವೋ ಅವರ ಕ್ಷೇತ್ರದಲ್ಲಿ ಕಸವನ್ನೇ ತೆಗೆಯುವುದಿಲ್ಲ, ತೆಗೆಸುವುದಿಲ್ಲ. ಆಗ ಜನರೇ ಅವರಿಗೆ ಉಗಿಯುತ್ತಾರೆ. ಮೈಕ್ ಹಾಕಿ ಪ್ರಚಾರ ಮಾಡಿಸುತ್ತೇನೆ. ಕಾಲನ್ನು ಕಟ್ಟಿಕೊಳ್ಳಲು ಆಗುತ್ತದೆಯೇ?” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಆಕ್ರೋಶ ವ್ಯಕ್ತಪಡಿಸಿದರು.ಅಸ್ಸಾಂ ರಾಜ್ಯಕ್ಕೆ ತೆರಳುವುದಕ್ಕೆ ಮುಂಚಿತವಾಗಿ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಗುರುವಾರದಂದು ಪ್ರತಿಕ್ರಿಯೆ ನೀಡಿದರು.ಏನಾದರೂ ಕಸ ವಿಲೇವಾರಿಗೆ ಬಿಡುವುದಿಲ್ಲ ಎನ್ನುವ ಬಿಜೆಪಿ ನಾಯಕರ ಹೇಳಿಕೆ…


