ಆರ್‌ಎಸ್‌ಎಸ್‌ಗೆ ನೋಂದಣಿ ಕಡ್ಡಾಯವಲ್ಲ: ಪ್ರಿಯಾಂಕ ಖರ್ಗೆ ಆರೋಪಗಳಿಗೆ ಬಿಜೆಪಿ ತಿರುಗೇಟು
ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 21:ಸರ್ಕಾರದಿಂದ ಅನುದಾನ ಪಡೆಯಲು ಬಯಸುವ ಸಂಘ-ಸಂಸ್ಥೆಗಳು ಮಾತ್ರ ನೋಂದಣಿ ಮಾಡಿಸಿಕೊಳ್ಳಬೇಕಿದ್ದು, ಯಾವುದೇ ಸಹಾಯ ಪಡೆಯದ ಸಂಸ್ಥೆಗಳಿಗೆ ನೋಂದಣಿ ಕಡ್ಡಾಯ ಎಂಬ ನಿಯಮ ಸಂವಿಧಾನದಲ್ಲಿ ಇಲ್ಲ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಗುರುಲಿಂಗಪ್ಪ ಅಂಗಡಿ ಹೇಳಿದರು.ನಗರದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 1925ರಿಂದ ಕಾರ್ಯ ನಿರ್ವಹಿಸುತ್ತಿರುವ ಆರ್‌ಎಸ್‌ಎಸ್ ಕಾನೂನುಬದ್ಧವಾಗಿ ಕೆಲಸ ಮಾಡುತ್ತಿದ್ದು, ಅದರ ವಿರುದ್ಧ ದಾಖಲಾದ ಹಲವು ಪ್ರಕರಣಗಳಲ್ಲೂ ಕಾನೂನು ಹೋರಾಟದ ಮೂಲಕ ಗೆಲುವು ಸಾಧಿಸಿದೆ ಎಂದು…


