ಟೆಕ್ನಾಲಜಿ ಕ್ಲಿನಿಕ್ಸ್ : ಎರಡು ದಿನಗಳ ಅರಿವು ಕಾರ್ಯಕ್ರಮ
ಸಪ್ತಸಾಗರ ವಾರ್ತೆ, ವಿಜಯಪುರ,ನ.12:ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ,ಬೆಂಗಳೂರಿನ ಕೆ.ಸಿ.ಟಿ.ಯು ಹಾಗೂ ಬೆಂಗಳೂರಿನ ವಿ ಕೇರ್ ಸೊಸೈಟಿ ಇವರ ಸಹಯೋಗದಲ್ಲಿ ಎಂ.ಎಸ್. ಎಂ.ಇ. ಇವರ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿಯಲ್ಲಿ ನವೆಂಬರ್ 13 ಹಾಗೂ 14ರಂದು ಎರಡು ದಿನಗಳ “ಟೆಕ್ನಾಲಜಿ ಕ್ಲಿನಿಕ್ಸ್” – ಅರಿವು ಮೂಡಿಸುವ ಕಾರ್ಯಕ್ರಮವನ್ನು ಅಥಣಿ ರಸ್ತೆಯಲ್ಲಿರುವ ಹೊಟೇಲ್ “ಪ್ರವಾಸ” ದಲ್ಲಿ ಹಮ್ಮಿಕೊಳ್ಳಲಾಗಿದೆ.ಅಂದು ಬೆಳಿಗ್ಗೆ 10-30ಕ್ಕೆ ಕಾರ್ಯಕ್ರಮವನ್ನು ಕರ್ನಾಟಕ ದ್ರಾಕ್ಷಿ ಬೆಳೆಗಾರರ ಅಧ್ಯಕ್ಷ ಡಾ. ಕೆ.ಎಚ್.ಮುಂಬಾರೆಡ್ಡಿ ಉದ್ಘಾಟಿಸಲಿದ್ದಾರೆ. ಬೆಂಗಳೂರಿನ…


