ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

ಸಪ್ತಸಾಗರ ವಾರ್ತೆ, ಬೆಳಗಾವಿ, ಡಿ. 16:ನೀರಿನ ಲಭ್ಯತೆ ಆಧಾರದ ಮೇಲೆ ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ ಯೋಜನೆ ಎರಡನೇ ಹಂತ ಜಾರಿಗೊಳಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ವಿಠಲ ಕಟಕದೊಂಡ ಅವರ ಪ್ರಶ್ನೆಗೆ ಉತ್ತರಿಸಿದರು.ಹೊರ್ತಿ ರೇವಣಸಿದ್ದೇಶ್ವರ ಯೋಜನೆಯ ಎರಡನೇ ಹಂತವನ್ನು ಯಾವಾಗ ಪ್ರಾರಂಭ ಮಾಡುತ್ತೀರಿ ಎಂಬ ವಿಠಲ ಪ್ರಶ್ನೆಗೆ, ಹೊರ್ತಿ ರೇವಣ ಸಿದ್ದೇಶ್ವರ ಏತ ನೀರಾವರಿ‌ ಯೋಜನೆಯ ಎರಡನೇ ಹಂತದ ಅನುಷ್ಠಾನಕ್ಕೆ ನೀರಿನ ಲಭ್ಯತೆ ನೋಡಬೇಕಿದೆ. ನೀರಿಲ್ಲದೇ…

Read More

ಯುಕೆಪಿ ಮೂರನೇ ಹಂತದ ಯೋಜನೆ ಕುರಿತು ಡಿಸಿಎಂ ಡಿಕೆಶಿ ಚರ್ಚೆ

ಸಪ್ತಸಾಗರ ವಾರ್ತೆ, ಬೆಂಗಳೂರು, ಸೆ. 3:ಕೃಷ್ಣಾ ಮೇಲ್ದಂಡೆ ಯೋಜನೆಯ ಹಂತ-3ರ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ, ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ ಅವರು ಮಂತ್ರಿಗಳು ಹಾಗೂ ಅಧಿಕಾರಿಗಳೊಂದಿಗೆ ವಿಧಾನಸೌಧದಲ್ಲಿ ಬುಧವಾರ ಸಭೆ ನಡೆಸಿದರು.ಭೂಸ್ವಾಧೀನ, ಪುನರ್ವಸತಿ, ಪುನರ್‌ನಿರ್ಮಾಣ, ಭೂಪರಿಹಾರ ಹಾಗೂ ವಿವಿಧ ನ್ಯಾಯಾಲಯಗಳಲ್ಲಿ ಹೆಚ್ಚುವರಿ ಭೂ ಪರಿಹಾರ ಕೋರಿ ದಾಖಲಿಸಿರುವ ಪ್ರಕರಣಗಳ ಕುರಿತು ಸಭೆಯಲ್ಲಿ ಸುಧೀರ್ಘವಾಗಿ ಚರ್ಚಿಸಲಾಯಿತು.ಸಚಿವರಾದ ಪ್ರಿಯಾಂಕ್ ಖರ್ಗೆ, ಬೋಸರಾಜ್, ಶಿವಾನಂದ ಪಾಟೀಲ, ಆರ್.ಬಿ. ತಿಮ್ಮಾಪುರ, ದರ್ಶನಪೂರ್, ಡಿ. ಸುಧಾಕರ್ ಮತ್ತಿತರರು ಸಭೆಯಲ್ಲಿ ಭಾಗವಹಿಸಿದ್ದರು.

Read More