ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ-ಸಂತೋಷ ಬಂಡೆ
ಸಪ್ತಸಾಗರ ವಾರ್ತೆ,ಇಂಡಿ, ಜು. 3: ಮಿತಿಮೀರಿದ ಪ್ಲಾಸ್ಟಿಕ್ ಬಳಕೆಯಿಂದ ಮನುಷ್ಯನ ಆರೋಗ್ಯ ಹದಗೆಡುತ್ತಿದೆ. ಮುಂದಿನ ತಲೆಮಾರಿಗೆ ವಿಷಮುಕ್ತ ಪರಿಸರ ನೀಡಲು ಇಂದೇ ಪ್ಲಾಸ್ಟಿಕ್ ತ್ಯಜಿಸಿ. ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶುಕ್ರವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಅಂತಾರಾಷ್ಟ್ರೀಯ ಪ್ಲಾಸ್ಟಿಕ್ ಮುಕ್ತ ದಿನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಪ್ಲಾಸ್ಟಿಕ್ ಪರಿಸರಕ್ಕೆ ಮಾರಕವಾಗಿದ್ದು, ಭೂಮಿ, ಸಮುದ್ರ, ಜೀವಸಂಕುಲಕ್ಕೆ ಅಪಾಯವಾಗಿದೆ. ಅಂಗಡಿ, ಮಾರುಕಟ್ಟೆಗೆ ಹೋಗುವಾಗ ಮನೆಯಿಂದ ಬಟ್ಟೆ ಕೈಚೀಲ ತೆಗೆದುಕೊಂಡು ಹೋಗಬೇಕು….


