ವಿಪತ್ತು ಬಂದಾಗ ಗಾಬರಿಯಾಗಬೇಡಿ, ಸಿದ್ದತೆಯೇ ನಮ್ಮ ರಕ್ಷಣೆ: ಮೋಹಮದ್ ಅಜ್ಮಲ್ ಶಕೀಬ್

ಸಪ್ತಸಾಗರ ವಾರ್ತೆ, ವಿಜಯಪುರ, ಡಿ. 26:ವಿಪತ್ತು ಪ್ರಕೃತಿ ಅಥವಾ ಮಾನವ ಸೃಷ್ಟಿಯಾದ ಅನಾಹುತಗಳಿಂದ ಉಂಟಾಗುವ ಗಂಭೀರ ಸಮಸ್ಯೆಗಳಾಗಿದ್ದು, ಸರಿಯಾದ ಸಿದ್ಧತೆ ಮತ್ತು ಜಾಗೃತಿಯ ಮೂಲಕ ಅವುಗಳಿಂದಾಗುವ ಹಾನಿಯನ್ನು ಕಡಿಮೆ ಮಾಡಬಹುದು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಘಟಕದ ವಿಪತ್ತು ನಿರ್ವಹಣೆ ಉಪ ಸಮಿತಿಯ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ನಿರ್ದೇಶಕ ಮೊಹಮ್ಮದ್ ಅಜ್ಮಲ್ ಶಕೀಬ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಯುವ ರೆಡ್ ಕ್ರಾಸ್ ಘಟಕ ಹಾಗೂ ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಎ.ಎಸ್.ಪಾಟೀಲ ವಾಣಿಜ್ಯ…

Read More

ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ನಾಗರಿಕರ ಹೊಣೆ: ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶ ಹರೀಶ್

ಸಪ್ತಸಾಗರ ವಾರ್ತೆ, ವಿಜಯಪುರ,ಡಿ.10:ಸರ್ವರ ಮಾನವ ಹಕ್ಕುಗಳ ರಕ್ಷಣೆ ಹಾಗೂ ಪಾಲನೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದ್ದು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಪರಿಪಾಲಿಸುವುದು ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಹರೀಶ್ ಎ ಅವರು ಹೇಳಿದರು.ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಕೀಲರ ಸಂಘ ಹಾಗೂ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಅವರ ಸಹಯೋಗದಲ್ಲಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ…

Read More

ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕರ್ತವ್ಯ: ಹಾಸಿಂಪೀರ ವಾಲಿಕಾರ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 11 : ಮಾನವ ಹಕ್ಕುಗಳ ಸಂರಕ್ಷಣೆ ನಮ್ಮೆಲ್ಲರ ಕತ೯ವ್ಯ. ಮಾನವ ಹಕ್ಕುಗಳನ್ನು ಸರ್ಕಾರ ಹಾಗೂ ಸಮುದಾಯದ ಜೊತೆಯಾಗಿ ಪಾಲನೆ ಪರಿಣಾಮಕಾರಿಯಾಗಬೇಕು ಎಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿಯ ರಾಜ್ಯಾಧ್ಯಕ್ಷ ಹಾಗೂ ಕಸಾಪ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಗುರುವಾರ ನಗರದ ಎಸ್.ಬಿ. ಜೆ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯ ಹಾಗೂ ಬೆಳಗಾವಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಹಾಗೂ ಮಾನವ ಹಕ್ಕುಗಳ ಘಟಕದ ಸಹಯೋಗದಲ್ಲಿ ನಡೆದ ಮಾನವ ಹಕ್ಕುಗಳ ಅರಿವು ಕುರಿತು ಚಿಂತನ…

Read More

ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಹಾಗೂ ಸದಸ್ಯರ ಜಿಲ್ಲಾ ಪ್ರವಾಸ

ಸಪ್ತಸಾಗರ ವಾರ್ತೆ,ವಿಜಯಪುರ,ಜು. 24:ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹಾಗೂ ಸದಸ್ಯರು ಜುಲೈ 25ರಂದು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆಆಯೋಗದ ಸದಸ್ಯರುಗಳಾದ ಶೇಖರಗೌಡ ರಾಮತ್ನಾಳ, ಶಶಿಧರ ಕೋಸಂಬೆ, ಡಾ. ಕೆ.ಟಿ. ತಿಪ್ಪೇಸ್ವಾಮಿ, ಮಂಜು, ವೆಂಕಟೇಶ ಹಾಗೂ ಅಪರ್ಣಾ ಎಂ. ಕೊಳ್ಳಾ ಅಧ್ಯಕ್ಷರ ಜೊತೆಗೂಡಿ ಜಿಲ್ಲೆಯ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಜುಲೈ 25ರಂದು ಬೆಳಿಗ್ಗೆ 9ಗಂಟೆಯಿಂದ 1.30ರವರೆಗೆ ಮಕ್ಕಳ ಸಂಸ್ಥೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸುವ ಅವರು ಮಧ್ಯಾಹ್ನ 2.30ರಿಂದ ಸಂಜೆ 5.30ರವರೆಗೆ…

Read More