
ವಿಜಯಪುರದಲ್ಲಿ ರಸ್ತೆ ದುರಸ್ತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ
ಸಪ್ತಸಾಗರ ವಾರ್ತೆ ವಿಜಯಪುರ, ಸೆ. 24: ವಿಜಯಪುರ ನಗರದಲ್ಲಿ ರಸ್ತೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದ್ದು, ರಾಜ್ಯ ಸರ್ಕಾರ ರಸ್ತೆ ಅಭಿವೃದ್ಧಿ ವಿಷಯದಲ್ಲಿ ಬೇಜವಾಬ್ದಾರಿತನಪ್ರದರ್ಶಿಸುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಅಥಣಿ ರಸ್ತೆ ತಡೆ ನಡೆಸಿ ಗುಂಡಿಗಳಲ್ಲಿ ಸಸಿಗಳನ್ನು ನೆಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.ಪ್ರವಾಸಿ ಮಂದಿರದ ಮುಂಭಾಗದಲ್ಲಿ ಅಥಣಿ ರಸ್ತೆಗೆ ಜಮಾಯಿಸಿದ ಬಿಜೆಪಿ ಕಾರ್ಯಕರ್ತರು ರಸ್ತೆ ತಡೆ ನಡೆಸಿ ರಸ್ತೆಯಲ್ಲಿರುವ ಗುಂಡಿಗಳನ್ನು ಮುಚ್ಚುವಂತೆ ಆಗ್ರಹಿಸಿದರು.ಕಾಂಗ್ರೆಸ್ ಸರ್ಕಾರ – ಜೀವಕ್ಕೆ ಸಂಚಾರ’, ಗುಂಡಿ ಮುಚ್ಚದೇ ರಾಜ್ಯದ ಜನತೆ…