
ಒಳ ಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಬೃಹತ್ ಪ್ರತಿಭಟನೆ
ಸಪ್ತಸಾಗರ ವಾರ್ತೆ, ವಿಜಯಪುರ, ಆ. 1 : ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವ ಕರೆ ಮೇರೆಗೆ ಶುಕ್ರವಾರ ವಿಜಯಪುರದಲ್ಲಿಯೂ ವಿವಿಧ ಮಾದಿಗ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ವಿಜಯಪುರದಲ್ಲಿಯೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು. ಒಳಮೀಸಲಾತಿ ಜಾರಿಗೊಳಸಲೇಬೇಕು ಎಂಬ ಘೋಷಣೆಗಳನ್ನು ಕೂಗಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ…