ಡಿವಿಪಿ ಹೋರಾಟದ ಫಲಶೃತಿ : ಮಹಿಳಾ ವಿಶ್ವವಿದ್ಯಾಲಯದಲ್ಲಿ ನೂತನ ವಸತಿ ನಿಲಯ ಆರಂಭ

ಸಪ್ತಸಾಗರ ವಾರ್ತೆ, ವಿಜಯಪುರ,ಆ.1 : ಸತತ ಎರಡು ವರ್ಷಗಳ ದಲಿತ ವಿದ್ಯಾರ್ಥಿ ಪರಿಷತ್ ನ ಹೋರಾಟದ ಫಲವಾಗಿ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಮಾಜ ಕಲ್ಯಾಣ ಇಲಾಖೆಯಡಿ ಎಸ್‌ಸಿ, ಎಸ್‌ಟಿ ವಿದ್ಯಾರ್ಥಿನಿಯರಿಗೆ ವಸತಿ ನಿಲಯ ಆರಂಭವಾಗಿದ್ದು ಸಂತೋಷದ ಸಂಗತಿಯಾಗಿದೆ ಎಂದು ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ಹರ್ಷ ವ್ಯಕ್ತಪಡಿಸಿದರು.ಮಹಿಳಾ ವಿಶ್ವವಿದ್ಯಾಲಯದ ಅವರಣದ ನೂತನವಾಗಿ ಆರಂಭವಾದ ಎಸ್‌ಸಿ, ಎಸ್‌ಟಿ ಮಹಿಳಾ ವಸತಿ ನಿಲಯಕ್ಕೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಮಹಿಳಾ ವಸತಿ ನಿಲಯಕ್ಕಾಗಿ…

Read More

ಒಳ ಮೀಸಲಾತಿಗೆ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಬೃಹತ್ ಪ್ರತಿಭಟನೆ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 1 : ಒಳಮೀಸಲಾತಿ ಜಾರಿಗೊಳಿಸಲು ಸರ್ಕಾರ ಶೀಘ್ರವೇ ನಿರ್ಧಾರ ಕೈಗೊಳ್ಳಬೇಕು ಎಂದು ಒತ್ತಾಯಿಸಿ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಮುತ್ತಿಗೆ ಹಾಕುವ ಕರೆ ಮೇರೆಗೆ ಶುಕ್ರವಾರ ವಿಜಯಪುರದಲ್ಲಿಯೂ ವಿವಿಧ ಮಾದಿಗ ಸಮುದಾಯಗಳ ಸಂಘಟನೆಗಳ ಒಕ್ಕೂಟದ ಪದಾಧಿಕಾರಿಗಳು ವಿಜಯಪುರದಲ್ಲಿಯೂ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ತಮ್ಮ ಹಕ್ಕೊತ್ತಾಯ ಮಂಡಿಸಿದರು. ಒಳಮೀಸಲಾತಿ ಜಾರಿಗೊಳಸಲೇಬೇಕು ಎಂಬ ಘೋಷಣೆಗಳನ್ನು ಕೂಗಿದರು.ನಗರದ ಡಾ.ಬಿ.ಆರ್. ಅಂಬೇಡ್ಕರ ವೃತ್ತದಿಂದ ಆರಂಭಗೊಂಡ ಪ್ರತಿಭಟನಾ ರ‍್ಯಾಲಿ ವಿವಿಧ ಪ್ರಮುಖ…

Read More

ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸಲು ಆಗ್ರಹಿಸಿ ಪ್ರತಿಭಟನೆ ಮೆರವಣಿಗೆ

ಸಪ್ತಸಾಗರ ವಾರ್ತೆ, ವಿಜಯಪುರ, ಜು. 31:ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಯಲ್ಲಿ ಸೇರಿಸುವಂತೆ ಆಗ್ರಹಿಸಿ ರೈತ ಭಾರತ ಪಕ್ಷ ಗುರುವಾರ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿತು.ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಮೆರವಣಿಗೆಯಲ್ಲಿ ಹೊರಟ ರೈತ ಭಾರತ ಪಕ್ಷದ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಹಾಯ್ದು ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ವಿಜಯಪುರ ಜಿಲ್ಲೆಯನ್ನು 371 ಜೆ ಗೆ ಸೇರಿಸಲು ಆಗ್ರಹಿಸಿದರು.ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ಹಿಂದುಳಿದ ವಿಜಯಪುರ ಜಿಲ್ಲೆಯನ್ನು 371 ಜೆ ಅಡಿಗೆ ಸೇರಿಸದೆ…

Read More