ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ನಿರೀಕ್ಷೆ ಮೀರಿ ಜನಬೆಂಬಲ: ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ

ಸಪ್ತಸಾಗರ ವಾರ್ತೆ,ದಾವಣಗೆರೆ, ಏ. 2 : ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಗುರುವಾರ ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದೆ. ಬಿಜೆಪಿಯವರು ನಾಲ್ಕು ವರ್ಷದಲ್ಲಿ ಯಾವ ಅಭಿವೃದ್ಧಿಯನ್ನು ಮಾಡದೇ, ರಾಜ್ಯವನ್ನು ಲೂಟಿ ಮಾಡಿದ್ದಾರೆ ಎಂಬ ಸತ್ಯವನ್ನು ಜನರು ಅರಿತಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳು…

Read More

ಪೆಟ್ರೋಲ್,ಡಿಸೇಲ್ ಕೊರತೆ ಸುಳ್ಳು ಸುದ್ದಿ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ – ಸಂದೀಪ್ ಪಾಟೀಲ‌ ಝಳಕಿ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 25:ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿಗಳ ಪರಿಣಾಮವಾಗಿ ಪೆಟ್ರೋಲ್ ಬಂಕ್‌ಗಳ ಮುಂದೆ ಜನರು ಪೆಟ್ರೋಲ್ ಪಡೆಯಲು ಮುಗಿಬಿದ್ದು ಆತಂಕದ ವಾತಾವರಣ ನಿರ್ಮಾಣವಾಗಿದೆ ಎಂದು ಬಿಜೆಪಿ ನಗರ ಮಂಡಲ ಅಧ್ಯಕ್ಷ ಸಂದೀಪ ಪಾಟೀಲ ಝಳಕಿ ಹೇಳಿದ್ದಾರೆ.ಭಾರತಕ್ಕೆ ಅಗತ್ಯವಿರುವ ಕಚ್ಚಾ ತೈಲ, ಅನಿಲ ಮತ್ತು ರಸಗೊಬ್ಬರಗಳು ಯುದ್ಧದ ಸವಾಲುಗಳ ನಡುವೆಯೂ, ಪೆಟ್ರೋಲ್, ಡೀಸೆಲ್ ಮತ್ತು ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ನಮ್ಮ ಸರ್ಕಾರ ನಿರಂತರ ಶ್ರಮಿಸುತ್ತಿದೆ. ಸಾರ್ವಜನಿಕರು ಭಯ ಪಡುವ ಅಗತ್ಯವಿಲ್ಲ ಎಂದು ಸ್ವತಃ ಪ್ರಧಾನಿ ಶ್ರೀ…

Read More

ಧೂಮಪಾನ ನಿಷೇಧಕ್ಕೆ ಜನರ ಸ್ವಯಂ ಜಾಗೃತಿ ಅತ್ಯಗತ್ಯ- ಸಂತೋಷ ಬಂಡೆ

ಸಪ್ತಸಾಗರ ವಾರ್ತೆ,ಇಂಡಿ, ಮಾ. 11: ಧೂಮಪಾನವು ಗಂಭೀರ ವ್ಯಸನವಾಗಿದ್ದು, ಇದು ವ್ಯಕ್ತಿಯ ಆರೋಗ್ಯ, ಸುತ್ತಲಿನ ಪರಿಸರದ ಮೇಲೆ ಹಾನಿಕಾರಕ ಪರಿಣಾಮ ಬೀರುತ್ತದೆ. ಧೂಮಪಾನ ಎಂದರೆ ದೇಹತ್ಯಾಗ ಎಂದರಿತುಕೊಂಡು ಆರೋಗ್ಯಕರ ಜೀವನಕ್ಕಾಗಿ ಎಲ್ಲರೂ ಧೂಮಪಾನದಿಂದ ದೂರವಿರುವುದು ಅತ್ಯಗತ್ಯ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಬುಧವಾರ ತಾಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಧೂಮಪಾನ ನಿಷೇಧ ದಿನದ ನಿಮಿತ್ತ ಹಮ್ಮಿಕೊಂಡ ಧೂಮಪಾನದ ದುಷ್ಪರಿಣಾಮ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಧೂಮಪಾನವು ನಿಧಾನಗತಿಯ ವಿಷವಾಗಿದೆ. ಅದು ಶ್ವಾಸಕೋಶದ ಕ್ಯಾನ್ಸರ್, ಹೃದಯರಕ್ತನಾಳದ ಕಾಯಿಲೆ,…

Read More

ಕಾಂಗ್ರೆಸ್ ಕೊಡುಗೆ ಜನಸಾಮಾನ್ಯರಿಗೆ ತಿಳಿಸಿ: ಲೋಣಿ

ಸಪ್ತಸಾಗರ ವಾರ್ತೆ ವಿಜಯಪುರ, ಡಿ. 28:ಸಂವಿಧಾನದ ಆಶಯಗಳನ್ನು ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಹೇಳಿದ್ದಾರೆ.ಭಾನುವಾರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಲೋಣಿ ಅವರು ಮಾತನಾಡಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಾಮಾಜಿಕ ನ್ಯಾಯವನ್ನು ನೀಡಿದ್ದಾರೆ. ಅದನ್ನು ಯಥವತ್ತಾಗಿ ಕಾರ್ಯರೂಪಕ್ಕೆ ತರುವಲ್ಲಿ ಕಾಂಗ್ರೆಸ್ ಪಕ್ಷ ಯಶಸ್ವಿಯಾಗಿದೆ. ಕಾಂಗ್ರೆಸ್ ಪಕ್ಷವು ಸುಮಾರು ೧೪೦ ವರ್ಷಗಳ ಇತಿಹಾಸವಿದ್ದು ಈ ದೇಶಕ್ಕಾಗಿ ಕಾಂಗ್ರೆಸ್ ಪಕ್ಷದ ನಾಯಕರು ಜೀವ ಬಲಿದಾನವನ್ನು ಮಾಡಿ ದೇಶವನ್ನು…

Read More

ದೇಶದ 140 ಕೋಟಿ ಜನರ ಮತದಾನದ ಹಕ್ಕಿಗಾಗಿ ಹೋರಾಟ:ಡಿಕೆಶಿ

ಸಪ್ತಸಾಗರ ವಾರ್ತೆ, ನವದೆಹಲಿ, ಡಿ.14:“ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.ದೆಹಲಿಯ ಕರ್ನಾಟಕ ಭವನದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು.ವೋಟ್ ಚೋರಿ ಪ್ರತಿಭಟನೆ ಬಗ್ಗೆ ಕೇಳಿದಾಗ, “ರಾಹುಲ್ ಗಾಂಧಿ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರ ನಾಯಕತ್ವದಲ್ಲಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಾವು ಮತಕಳ್ಳತನ ವಿರುದ್ಧದ ಹೋರಾಟ ಆರಂಭಿಸಿದ್ದೆವು. ಈಗ ರಾಮಲೀಲಾ…

Read More

ಓದು ಅಭಿಯಾನದಿಂದ ಈದ್ ಮಿಲಾದ ಹಬ್ಬದ ವಿಷಯ ಕೈಬಿಡಿ: ಶಾಸಕ ಯತ್ನಾಳ

ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 2:ಪ್ರಾಥಮಿಕ ಶಾಲಾ ಮಕ್ಕಳಿಗೆ 21 ದಿನಗಳ ಓದುವ ಅಭಿಯಾನದಲ್ಲಿ ಈದ್ ಮಿಲಾದ್ ಹಬ್ಬ ಪ್ರಸ್ತಾಪ ಕೈ ಬಿಡುವಂತೆ ಸರ್ಕಾರಕ್ಕೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡಿದ ಅವರು, ಒಂದೇ ಕೋಮಿನ ಹಬ್ಬದ ಬಗ್ಗೆ ಓದಿ ಎಂದು ಮಕ್ಕಳಿಗೆ ಹೇಳುವುದು ತಪ್ಪು ಎಂದು ಹೇಳಿದರು.ಸರ್ಕಾರ ತಕ್ಷಣವೇ ಓದು ಅಭಿಯಾನದಿಂದ ಈದ್ ಮಿಲಾದ್ ಹಬ್ಬದ ವಿಷಯ ತೆಗೆದು ಹಾಕುವಂತೆ ಒತ್ತಾಯ ಮಾಡಿದರು.ಹಿಂದೂ ಹಬ್ಬಗಳಾದ ದೀಪಾವಳಿ, ದಸರೆ,ಕ್ರಿಶ್ಚಿಯನ್, ಬೌದ್ಧ, ಜೈನ…

Read More