75 ನೇ ದಿನಕ್ಕೆ ಕಾಲಿಟ್ಟ ಸರಕಾರಿ ವೈದ್ಯಕೀಯ ಕಾಲೇಜು ಹೋರಾಟ: ಬೃಹತ್ ಪ್ರತಿಭಟನಾ ಮೆರವಣಿಗೆ
ಸಪ್ತ ಸಾಗರ ವಾರ್ತೆ, ವಿಜಯಪುರ, ಡಿ. 1: ವಿಜಯಪುರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ ಸೋಮವಾರ ಬೃಹತ್ ಪ್ರತಿಭಟನೆ ಮೆರವಣಿಗೆ ನಡೆಯಿತು.ನಗರದ ಶಿವಾಜಿ ವೃತ್ತದಿಂದ ಪ್ರತಿಭಟನೆ ಮೆರವಣಿಗೆ ಆರಂಭಗೊಂಡು ಸಿದ್ದೇಶ್ವರ ದೇವಸ್ಥಾನ, ಗಾಂಧಿವೃತ್ತದ ಮಾರ್ಗವಾಗಿ ಅಂಬೇಡ್ಕರ್ ವೃತ್ತದವರೆಗೆ ತೆರಳಿ ಸಮಾವೇಶವಾಗಿ ಸಭೆಯಾಗಿ ಮಾರ್ಪಟ್ಟಿತು.ಮೆರವಣಿಗೆಯಲ್ಲಿ ವಿವಿಧ ಕಾಲೇಜಿನ ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ನೀಡದ ರಾಜ್ಯ ಸರ್ಕಾರದ ನೀತಿಯನ್ನು ವಿರೋಧಿಸಿ ಘೋಷಣೆ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು. ನಂತರ ಅಂಬೇಡ್ಕರ್ ವೃತ್ತದಲ್ಲಿ ಬಹಿರಂಗ…


