ಅಕಾಲಿಕ ಮಳೆ:ಬೆಳೆ ಹಾನಿ ಸಮೀಕ್ಷೆಗೆ ಎಂಬಿಪಿ ಸೂಚನೆ
ಸಪ್ತಸಾಗರ ವಾರ್ತೆ,ವಿಜಯಪುರ, ಎ. 3: ಜಿಲ್ಲೆಯಲ್ಲಿ ನಿನ್ನೆ ಗುರುವಾರ ಸುರಿದ ಅಕಾಲಿಕ ಮಳೆಯಿಂದಾಗಿ ಉಂಟಾಗಿರುವ ದ್ರಾಕ್ಷಿ ಬೆಳೆ ಹಾನಿಯ ಕುರಿತು ಕೂಡಲೇ ಸಮೀಕ್ಷೆ ನಡೆಸಿ ವರದಿ ಸಲ್ಲಿಸುವಂತೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಮಾರ್ಚ್ ತಿಂಗಳಲ್ಲಿ ಆಲಿಕಲ್ಲು ಮತ್ತು ಬಿರುಗಾಳಿ ಸಹಿತ ಮಳೆ ಸುರಿದ ಪರಿಣಾಮ ದ್ರಾಕ್ಷಿ ಸೇರಿದಂತೆ ನಾನಾ ಬೆಳೆಗಳು ಹಾನಿಯಾಗಿದ್ದವು. ಈ ಕುರಿತು ಸಮಗ್ರ ಸಮೀಕ್ಷೆ ನಡೆಸುವಂತೆ ಮಾರ್ಚ್ 21 ರಂದು ಜಿಲ್ಲಾಧಿಕಾರಿ,…


