ಮಳೆ ಅಭಾವ ಪರಿಸ್ಥಿತಿ ಎದುರಿಸಲು ಸಜ್ಜಾಗಿ- ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅಧಿಕಾರಿಗಳಿಗೆ ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 3:ಜಿಲ್ಲೆಯಲ್ಲಿನ ಕುಡಿಯುವ ನೀರಿನ ಲಭ್ಯತೆ, ಹಿಂಗಾರು ಹಾಗೂ ಮುಂಗಾರು ಮಳೆ ಪರಿಸ್ಥಿತಿ, ಮಳೆ ಕೊರತೆಯಾದಲ್ಲಿ ಪರ್ಯಾಯ ಮಾರ್ಗಗಳನ್ನು ಕೈಗೊಳ್ಳುವಂತೆ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಕೈಗಾರಿಕಾ ಅಭಿವೃದ್ಧಿ ಆಯುಕ್ತರು ಹಾಗೂ ನಿರ್ದೇಶಕರೂ ಆಗಿರುವ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಖುಷ್ಬು ಗೋಯಲ್ ಚೌಧರಿ ಅವರು ಹೇಳಿದರು.ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ ಇವರ ಸಹಯೋಗದಲ್ಲಿ ಶುಕ್ರವಾರ ನಗರದ ಜಿಲ್ಲಾ ಪಂಚಾಯತಿಯ ಸಭಾಂಗಣದಲ್ಲಿ ಆಯೋಜಿಸಿದ್ದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಮುಂಗಾರು ಮಳೆ…

Read More

ಮಳೆ ಅಭಾವ ಎದುರಿಸಲು ಅಧಿಕಾರಿಗಳು ಸಜ್ಜಾಗಲಿ: ಸಚಿವ ಡಾ. ಎಂ.ಬಿ. ಪಾಟೀಲ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 23:ಜಿಲ್ಲೆಯಲ್ಲಿ ಈ ವರ್ಷ ಮಳೆ ಪ್ರಮಾಣ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ಎದುರಿಸಲು ಅಧಿಕಾರಿಗಳು ಯುದ್ಧೋಪಾದಿಯಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಡಾ. ಎಂ.ಬಿ. ಪಾಟೀಲ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನರು ಹಾಗೂ ಜಾನುವಾರುಗಳಿಗೆ ಕುಡಿಯುವ ನೀರು,…

Read More

ಮಳೆಗಾಲದಲ್ಲೂ ಬೇಸಿಗೆಯ ದಾಹ: ಮಳೆಯಿಲ್ಲದೆ ಕಂಗಾಲಾದ ರೈತರು, ಬಿಸಿಗಾಳಿಗೆ ತತ್ತರಿಸಿದ ಜನಜೀವನ

ವಿಶೇಷ ವರದಿಸಪ್ತಸಾಗರ ವಾರ್ತೆ, ವಿಜಯಪುರ, ಜೂ. 21:ಸಾಮಾನ್ಯವಾಗಿ ಜೂನ್ ತಿಂಗಳು ಆರಂಭವಾಗುತ್ತಿದ್ದಂತೆಯೇ ಮಳೆಗಾಲದ ವಾತಾವರಣ ನಿರ್ಮಾಣವಾಗಿ ಜನರಿಗೆ ಬೇಸಿಗೆಯ ಬಿಸಿಲಿನಿಂದ ನಿರಾಳತೆ ಸಿಗಬೇಕು. ಆದರೆ ಈ ಬಾರಿ ಜಿಲ್ಲೆಯಾದ್ಯಂತ ಚಿತ್ರಣವೇ ಬೇರೆಯಾಗಿದೆ. ರೋಹಿಣಿ ಮತ್ತು ಮೃಗಶಿರ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ರೈತರು ಆತಂಕಕ್ಕೆ ಒಳಗಾಗಿದ್ದು, ಮತ್ತೊಂದೆಡೆ ಮಳೆಗಾಲದಲ್ಲೂ ಮುಂದುವರಿದಿರುವ ತೀವ್ರ ಉಷ್ಣಾಂಶ ಜನಜೀವನವನ್ನು ಹೈರಾಣಗೊಳಿಸಿದೆ. ಕೈ ಎತ್ತಿ ಆಕಾಶ ನೋಡುವ ರೈತರು ರೋಹಿಣಿ ಮತ್ತು ಮೃಗಶಿರ ಮಳೆ ಕೃಷಿ ಚಟುವಟಿಕೆಗಳಿಗೆ ಅತ್ಯಂತ ಮಹತ್ವದ್ದಾಗಿದ್ದು, ಈ…

Read More

ಧಾರಾಕಾರ ಮಳೆ: ಮನೆ ಕುಸಿದು ಮೂವರಿಗೆ ಗಾಯ

ಸಪ್ತಸಾಗರ ವಾರ್ತೆ ವಿಜಯಪುರ, ಆ. 28:ಜಿಲ್ಲೆಯಲ್ಲಿ ಗುರುವಾರ ರಾತ್ರಿ ಧಾರಾಕಾರವಾಗಿ ಸುರಿದ ಮಳೆಯಿಂದಾಗಿಮುದ್ದೇಬಿಹಾಳ ತಾಲೂಕಿನ ಹಿರೇಮುರಾಳ ಗ್ರಾಮದಲ್ಲಿ ಮನೆ ಕುಸಿದು ಮೂವರು ಗಾಯಗೊಂಡಿರುವ ಘಟನೆ ನಡೆದಿದೆ.ಮಲ್ಲವ್ವ ರುದ್ರಪ್ಪ ಗುಂಡುಪಲ್ಲೆ, ರುದ್ರಪ್ಪ ತಮ್ಮಣ್ಣ ಗುಂಡುಪಲ್ಲೆ ಹಾಗೂ ಶಾರದಾ ರುದ್ರಪ್ಪ ಗುಂಡುಪಲ್ಲೆ ಗಾಯಗೊಂಡಿದ್ದು, ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.ನಿನ್ನೆ ರಾತ್ರಿ ಸುರಿದ ಮಳೆಯಿಂದ ಹಿರೇಮುರಾಳ ಗ್ರಾಮದಲ್ಲಿ ಸುಮಾರು ರಾತ್ರಿ 12-30 ಗಂಟೆ ಸುಮಾರಿಗೆ ಮನೆಯಲ್ಲಿ ಮಲಗಿದ್ದ ಜನರ ಮೇಲೆ ಮನೆ ಕುಸಿದಿದೆ. ಮೂವರಿಗೆ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಪಾಯದಿಂದ ಪಾರಾಗಿದ್ದಾರೆ.

Read More

ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆ:ಪರಿಹಾರ ಕಾರ್ಯ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಚಿವ ಎಂ.ಬಿ.ಪಾಟೀಲ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ಆ. 6: ಜಿಲ್ಲೆಯಲ್ಲಿ ಮಳೆಯಿಂದ ಹಾನಿಯಾದ, ಹಾನಿಗೊಳಗಾಗುವ ಗ್ರಾಮ, ಪ್ರದೇಶಗಳಿಗೆ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರೀಶಿಲನೆ ನಡೆಸಿ ಕೂಡಲೇ ನಿಯಮಾನುಸಾರ ಪರಿಹಾರ ವಿತರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಸಚಿವರೂ ಆದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ ಅವರು ಸೂಚನೆ ನೀಡಿದ್ದಾರೆ.ಜಿಲ್ಲೆಯಲ್ಲಿ ಕಳೆದ ರಾತ್ರಿ ವಾಡಿಕೆಗಿಂತ ಹೆಚ್ಚಾಗಿ ಅಂದರೆ 47ಎಂಎಂ ಮಳೆಯಾಗಿದ್ದು, ಅಲ್ಲದೇ, ಮುಂದಿನ 24 ಗಂಟೆಗಳಲ್ಲಿ ಮಳೆಯಾಗುವ ಸಂಭವವಿರುತ್ತದೆ. ಈ…

Read More