ವಂದೇ ಮಾತರಂ ಮಸೂದೆಗೆ ಕಾಂಗ್ರೆಸ್ ವಿರೋಧ: ‘ಡೋಂಗಿ ರಾಷ್ಟ್ರೀಯವಾದ’ ಬಯಲಾಗಿದೆ – ರಮೇಶ ಜಿಗಜಿಣಗಿ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 25:‘ವಂದೇ ಮಾತರಂ’ ಗೀತೆಗೆ ಅವಮಾನ ಮಾಡಿದವರಿಗೆ ಶಿಕ್ಷೆ ವಿಧಿಸುವ ಉದ್ದೇಶದಿಂದ ಮಂಡಿಸಲಾದ ‘ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆಗಟ್ಟುವಿಕೆ (ತಿದ್ದುಪಡಿ) ಮಸೂದೆ–2026’ಗೆ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸಿರುವುದು ಅದರ “ಡೋಂಗಿ ರಾಷ್ಟ್ರೀಯವಾದ”ವನ್ನು ಬಯಲಿಗೆಳೆದಿದೆ ಎಂದು ಸಂಸದ ರಮೇಶ ಜಿಗಜಿಣಗಿ ಆರೋಪಿಸಿದ್ದಾರೆ.ಶನಿವಾರ ಬಿಡುಗಡೆ ಮಾಡಿದ ಪ್ರಕಟಣೆಯಲ್ಲಿ ಅವರು, ಸ್ವಾತಂತ್ರ್ಯ ಹೋರಾಟಗಾರರಿಗೆ ಸ್ಫೂರ್ತಿಯಾಗಿದ್ದ ಹಾಗೂ ಕ್ರಾಂತಿಕಾರಿಗಳ ಧ್ಯೇಯಗೀತೆಯಾಗಿದ್ದ ಬಂಕಿಮಚಂದ್ರ ಚಟರ್ಜಿ ವಿರಚಿತ ‘ವಂದೇ ಮಾತರಂ’ಗೆ ಗೌರವ ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಮಸೂದೆ ಮಂಡಿಸಿದೆ ಎಂದು ಹೇಳಿದರು.ರಾಜ್ಯಸಭೆಯಲ್ಲಿ ಮಸೂದೆ…

Read More

ಸಂಸದ ರಮೇಶ ಜಿಗಜಿಣಗಿ ವಿರುದ್ಧ ಸುಳ್ಳು ಆರೋಪ ಬೇಡ: ವಿವೇಕಾನಂದ ಡಬ್ಬಿ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 29:ಸಾತ್ವಿಕ ರಾಜಕಾರಣಕ್ಕೆ ಹೆಸರಾಗಿರುವ ಸಂಸದ ರಮೇಶ ಜಿಗಜಿಣಗಿ ಅವರ ವಿರುದ್ಧ ಆಧಾರರಹಿತ ಆರೋಪಗಳನ್ನು ಮಾಡಿ ತೇಜೋವಧೆ ಮಾಡುವ ಪ್ರಯತ್ನವನ್ನು ವಿರೋಧಿಸಬೇಕು ಎಂದು ಬಿಜೆಪಿ ಓಬಿಸಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಡಬ್ಬಿ ಹೇಳಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಮೇಶ ಜಿಗಜಿಣಗಿ ಅವರು ಜಿಲ್ಲೆಯ ಅಭಿವೃದ್ಧಿಗೆ ಲಕ್ಷ ಕೋಟಿ ರೂ.ಗೂ ಅಧಿಕ ಅನುದಾನ ತಂದು ರೈಲ್ವೆ ಓವರ್‌ಬ್ರಿಡ್ಜ್, ವಿಮಾನ ನಿಲ್ದಾಣ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಹಾಗೂ ವಿಜಯಪುರ–ಸೊಲ್ಲಾಪುರ ರಾಷ್ಟ್ರೀಯ ಹೆದ್ದಾರಿ…

Read More

ಕಳೆದ 10 ವರ್ಷದ ನನ್ನ ಸಾಧನೆ: ಜಿಗಜಿಣಗಿ ವಿವರಣೆ

ಸಪ್ತಸಾಗರ ವಾರ್ತೆ,ವಿಜಯಪುರ, ಜೂ. 12:ಕಳೆದ 10 ವರ್ಷಗಳಲ್ಲಿ ವಿಜಯಪುರ ಲೋಕಸಭಾ ಕ್ಷೇತ್ರದಲ್ಲಿ ರಾಷ್ಟ್ರೀಯ ಹೆದ್ದಾರಿ, ರೈಲ್ವೆ ಮೇಲ್ಸೇತುವೆ ಸೇರಿ ವಿವಿಧ 3516.67 ಕೋಟಿ ರೂ.ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಮೂಲಕ ಸರ್ವತೋಮುಖ ಅಭಿವೃದ್ಧಿಗೆ ನಾಂದಿ ಹಾಡಲಾಗಿದೆ ಎಂದು ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.ವಿಜಯಪುರದ ರಾಷ್ಟ್ರೀಯ ಹೆದ್ದಾರಿ ವಿಭಾಗದ ವ್ಯಾಪ್ತಿಯಡಿ 4 ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಅಂದಾಜು 1668.88 ಕೋಟಿ ರೂ.ಅನುದಾನದಡಿ ಒಟ್ಟು 208.04 ಕಿಮೀ ಉದ್ದದಷ್ಟು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಇದರಲ್ಲಿ ಎರಡು ರೈಲ್ವೆ ಸೇತುವೆ ಸಹ ಒಳಗೊಂಡಿದೆ…

Read More

ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ಹರ ಘರ ತಿರಂಗಾ ಯಾತ್ರೆ

ಸಪ್ತ ಸಾಗರ ವಾರ್ತೆ, ವಿಜಯಪುರ, ಆ. 10:ಸ್ವಾತಂತ್ರ್ಯೋತ್ಸವದ ಪೂರ್ವಭಾವಿಯಾಗಿ ಹರ ಘರ ತಿರಂಗಾ ಯಾತ್ರೆ ಸಂಸದ ರಮೇಶ ಜಿಗಜಿಣಗಿ ನೇತೃತ್ವದಲ್ಲಿ ವಿಜಯಪುರ ಜಿಲ್ಲೆ ಬಿಜೆಪಿ ವತಿಯಿಂದ ನಗರದಲ್ಲಿ ಭಾನುವಾರ ಆಯೋಜಿಸಲಾಗಿತ್ತು.ರಾಷ್ಟ್ರಭಕ್ತಿಯನ್ನು ಬಿಂಬಿಸುವ ಕಾರ್ಯಕ್ರಮವಾಗಿ ಬೈಕ್ ರ‍್ಯಾಲಿ ನಡೆಯಿತು. ಬೈಕ್ ಗೆ ತ್ರಿವರ್ಣ ಧ್ವಜ ಇರಿಸಿ ರ‍್ಯಾಲಿಯಲ್ಲಿ ಸಾರ್ವಜನಿಕರು ಭಾಗವಹಿಸಿದ್ದರು.ಬೋಲೊ ಭಾರತ ಮಾ ಕೀ ಜೈ, ವಂದೇ ಮಾತರಂ ಘೋಷಣೆ ಹಾಕುತ್ತಾ ಬೈಕ್ ರ‍್ಯಾಲಿ ಸಾಗಿತು.ವಿಜಯಪುರ ನಗರದ ಸೆಟಲೈಟ್ ಬಸ್‌ ಸ್ಟ್ಯಾಂಡ್ (ಗೋದಾವರಿ ಹೊಟೆಲ್) ನಿಂದ ಶಿವಾಜಿ ಸರ್ಕಲ್,…

Read More

ಸಂಸದ ರಮೇಶ ಜಿಗಜಿಣಗಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲಕುಮಾರ್ ಶಿಂಧೆ ಜೊತೆಗೆ ಸೌಹಾರ್ದ ಭೇಟಿ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 7: ಕೇಂದ್ರದ ಮಾಜಿ ಸಚಿವ, ಮಹಾರಾಷ್ಟ್ರ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ ಶಿಂಧೆ ಅವರನ್ನು ನವದೆಹಲಿ ನಿವಾಸದಲ್ಲಿ ಸಂಸದ ರಮೇಶ ಜಿಗಜಿಣಗಿ ಭೇಟಿ ಮಾಡಿ ಉಭಯಕುಶಲೋಪರಿ ವಿಚಾರಿಸಿದರು.ಸಂಸದ ಜಿಗಜಿಣಗಿ ಅವರು ಶಿಂಧೆ ಅವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ನಡೆಸಿ ಸೌಹಾರ್ದಯುತ ಮಾತುಕತೆ ನಡೆಸಿದರು.

Read More