18 ಕೇಂದ್ರಗಳಲ್ಲಿ ಭೂ ಮಾಪಕರ ನೇಮಕಾತಿ ಪರೀಕ್ಷೆ

ಗೊಂದಲಕ್ಕೆ ಅವಕಾಶವಿಲ್ಲದಂತೆ ಪರೀಕ್ಷೆ ನಡೆಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ ಸಪ್ತಸಾಗರ ವಾರ್ತೆ,ವಿಜಯಪುರ, ಅ.2 :ಜಿಲ್ಲೆಯ 18 ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಭೂ ಮಾಪಕರ ಹುದ್ದೆಗಳ ನೇಮಕಾತಿಗಾಗಿ ಲಿಖಿತ ಪರೀಕ್ಷೆ ನಡೆಯಿತು.ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಪ್ರಕ್ರಿಯೆ ಹಾಗೂ ಕೇಂದ್ರಗಳಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಬಳಿಕ ಸಿಕ್ಯಾಬ್ ಬಾಲಕಿಯರ ಪದವಿ ಪೂರ್ವ ಕಾಲೇಜು, ಪಿಡಿಜೆ ಕಾಲೇಜು ಸೇರಿದಂತೆ ವಿವಿಧ ಕೇಂದ್ರಗಳಿಗೆ ಭೇಟಿ…

Read More

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆಗೆ ಆಗ್ರಹ

ಗಣಿತ, ಹಿಂದಿ, ಉರ್ದು ಸೇರಿದಂತೆ ವಿಷಯ ಶಿಕ್ಷಕರ ನೇಮಕಕ್ಕೆ ಒತ್ತಾಯ ಸಪ್ತಸಾಗರ ವಾರ್ತೆ, ಬೆಂಗಳೂರು, ಆ. 19:ರಾಜ್ಯ ಸರ್ಕಾರದ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕು ಹಾಗೂ ಪ್ರೌಢಶಾಲಾ ಶಿಕ್ಷಕರ ನೇಮಕಾತಿಯಲ್ಲಿ ಗಣಿತ, ಹಿಂದಿ, ಉರ್ದು ಸೇರಿದಂತೆ ವಿವಿಧ ವಿಷಯಗಳ ಶಿಕ್ಷಕರನ್ನು ಸೇರ್ಪಡೆಗೊಳಿಸಬೇಕು ಎಂದು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಯೂತ್ ಆರ್ಗನೈಸೇಷನ್ (ಎಐಡಿವೈಒ) ಹಾಗೂ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನಾಕಾರರು ಮುಖ್ಯಮಂತ್ರಿ ಹಾಗೂ…

Read More

ಕೆಪಿಎಸ್‌ಸಿ ನೇಮಕಾತಿಗೆ ಹೊಸ ವ್ಯವಸ್ಥೆ: 3ರಿಂದ 5 ತಿಂಗಳಲ್ಲಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳಿಸಲು ಗುರಿ

ಸಪ್ತಸಾಗರ ವಾರ್ತೆ,ಬೆಂಗಳೂರು, ಆ.14 : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸಲು ಹೊಸ ವ್ಯವಸ್ಥೆ ಜಾರಿಗೆ ತರಲು ನಿರ್ಧರಿಸಲಾಗಿದೆ.ಆಯೋಗದ ಸಭೆಯಲ್ಲಿ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು. ಈ ವೇಳೆ ಮುಂದಿನ ದಿನಗಳಲ್ಲಿ ಕೇಂದ್ರ ಲೋಕಸೇವಾ ಆಯೋಗದ (ಯುಪಿಎಸ್‌ಸಿ) ಮಾದರಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸುವ ಕುರಿತು ಚರ್ಚೆ ನಡೆಯಿತು.ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೆಚ್ಚಿಸುವುದು…

Read More

ಶಿಕ್ಷಕರ ನೇಮಕಾತಿ ಗೊಂದಲ ನಿವಾರಣೆಗೆ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಆ. 14: ಗ್ರಾಮೀಣ ಹಾಗೂ ಹಿಂದುಳಿದ ಪ್ರದೇಶಗಳ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರ ನೇಮಕಾತಿ ಮಾಡಬೇಕು ಹಾಗೂ ನೇಮಕಾತಿ ಅಧಿಸೂಚನೆಯಲ್ಲಿರುವ ಗೊಂದಲಗಳನ್ನು ಕೂಡಲೇ ನಿವಾರಿಸಬೇಕು ಎಂದು ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.ಹೋರಾಟದ ನೇತೃತ್ವ ವಹಿಸಿ ಮಾತನಾಡಿದ ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯಾಧ್ಯಕ್ಷ ಶ್ರೀನಾಥ ಪುಜಾರಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಹಾಗೂ ಶಾಲೆಗಳ ಅಗತ್ಯಕ್ಕೆ ಅನುಗುಣವಾಗಿ ಹೆಚ್ಚುವರಿ ಇಂಗ್ಲಿಷ್ ಶಿಕ್ಷಕರ ಹುದ್ದೆಗಳನ್ನು ಸೃಷ್ಟಿಸಿ, ಖಾಲಿ…

Read More

ಸೆ.10ರಿಂದ ವಿಜಯಪುರದಲ್ಲಿ ಅಗ್ನಿವೀರ ನೇಮಕಾತಿ ರ‍್ಯಾಲಿ : ಸುಗಮ ಹಾಗೂ ಪಾರದರ್ಶಕ ನಿರ್ವಹಣೆಗೆ ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚನೆ

ಸಪ್ತಸಾಗರ ವಾರ್ತೆ,ವಿಜಯಪುರ, ಆ.12:ನಗರದ ಡಾ. ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಸೆಪ್ಟೆಂಬರ್ 10ರಿಂದ 23ರವರೆಗೆ ಭಾರತೀಯ ಸೇನೆಯ ಅಗ್ನಿವೀರ ನೇಮಕಾತಿ ರ‍್ಯಾಲಿ ನಡೆಯಲಿದ್ದು, ರ‍್ಯಾಲಿಯನ್ನು ಶಿಸ್ತುಬದ್ಧ, ಸುಗಮ ಹಾಗೂ ಪಾರದರ್ಶಕವಾಗಿ ನಡೆಸಲು ಎಲ್ಲ ಇಲಾಖೆಗಳು ಸಮನ್ವಯದಿಂದ ಪೂರ್ಣ ಪ್ರಮಾಣದ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಆನಂದ ಕೆ. ಸೂಚಿಸಿದರು.ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳೂರಿನ ಸೇನಾ ನೇಮಕಾತಿ ಕಚೇರಿ ಅಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ರ‍್ಯಾಲಿಯು ಪ್ರತಿದಿನ…

Read More

ಕಾನ್ಸ್ ಟೇಬಲ್ ನೇಮಕಾತಿ ಪರೀಕ್ಷೆಗೆ ಜಿಲ್ಲಾಡಳಿತ ಸಜ್ಜು

ಸಪ್ತಸಾಗರ ವಾರ್ತೆ,ವಿಜಯಪುರ, ಆ.1:ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿಯಿರುವ ವೃಂದ ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆ (ಆ. 2) ಭಾನುವಾರ ಜಿಲ್ಲೆಯ 61 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಒಟ್ಟು 24434 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಪಾರದರ್ಶಕ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.ವಿಜಯಪುರ ನಗರ-55, ತಿಕೋಟಾ ನಗರ-03 ಸೇರಿ ಒಟ್ಟು 58 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದರೆ, ವಿಜಯಪುರ ಗ್ರಾಮೀಣ ಭಾಗದ ಕವಲಗಿಯಲ್ಲಿ 2 ಹಾಗೂ ತಿಡಗುಂದಿಯಲ್ಲಿ 1 ಸೇರಿದಂತೆ ಒಟ್ಟು…

Read More

ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಲಿ – ರಾಘವ ಅಣ್ಣಿಗೇರಿ ಆಗ್ರಹ

ಸಪ್ತಸಾಗರ ವಾರ್ತೆ,ವಿಜಯಪುರ, ಜು. 23:ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಮೂಲಕ ನಡೆದ ಪಶುವೈದ್ಯಾಧಿಕಾರಿಗಳ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿರುವ ಆರೋಪಗಳು ರಾಜ್ಯದ ಯುವಕರ ವಿಶ್ವಾಸಕ್ಕೆ ದೊಡ್ಡ ಹೊಡೆತ ನೀಡಿವೆ. ಈ ಹಗರಣದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರಾಜೀನಾಮೆ ನೀಡಬೇಕು ಎಂದು ಸ್ವಾಮಿ ವಿವೇಕಾನಂದ ಸೇನೆಯ ರಾಜ್ಯಾಧ್ಯಕ್ಷ ರಾಘವ್ ಅಣ್ಣಿಗೇರಿ ಆಗ್ರಹಿಸಿದರು.ಪತ್ರಿಕಾ ಹೇಳಿಕೆ ನೀಡಿರುವ ಅವರು, ಒಟ್ಟು 400 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ 2026ರ ಜನವರಿ 8ರಂದು ನಡೆದ ಪರೀಕ್ಷೆಯಲ್ಲಿ ಶೇ.60ರಷ್ಟು ಅಕ್ರಮ ನಡೆದಿದೆ…

Read More

ಸರಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

ಸಪ್ತಸಾಗರ ವಾರ್ತೆ,ವಿಜಯಪುರ, ಮಾ. 17:ಕರ್ನಾಟಕ ರಾಜ್ಯದಲ್ಲಿ ಸರಕಾರಿ ಹುದ್ದೆಗಳ ನೇಮಕಾತಿ ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಮಸ್ಯೆಗಳನ್ನು ಸರಿಪಡಿಸುವಂತೆ ಆಗ್ರಹಿಸಿ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು.ಮನವಿ ಸ್ವೀಕರಿಸಲು ಡಿ.ಸಿ. ತಡ ಮಾಡಿದ್ದಕ್ಕೆ ಜಿಲ್ಲಾಧಿಕಾರಿಗಳ ಕಚೇರಿಗೆ ನುಗ್ಗಲು ವಿದ್ಯಾರ್ಥಿಗಳು ವಿಫಲ ಯತ್ನ ಮಾಡಿದರು.ನಂತರ ಆಗಮಿಸಿದ ಜಿಲ್ಲಾಧಿಕಾರಿಗಳು ಮನವಿ ಸ್ವೀಕರಿಸಿದರು.ಈ ಸಂದರ್ಭದಲ್ಲಿ ಎಬಿವಿಪಿಯ ಕೇಂದ್ರೀಯ ಕಾರ್ಯ ಸಮಿತಿ ಸದಸ್ಯರಾದ ಸಚಿನ ಕುಳಗೇರಿ ಮಾತನಾಡಿ, ರಾಜ್ಯದಲ್ಲಿ ಕಳೆದ 5-6 ವರ್ಷಗಳಿಂದ ವಿದ್ಯಾರ್ಥಿಗಳ ಪರಿಸ್ಥಿತಿ ಶೋಚನೀಯವಾಗಿದೆ. ವಿದ್ಯಾರ್ಥಿಗಳ ಸಮಸ್ಯೆಗಳಿಗೆ ಸ್ಪಂದಿಸಿ ವಿದ್ಯಾರ್ಥಿಗಳ…

Read More