ಫೆ.2ರಂದು ನಗರದ ದರಬಾರ ಶಾಲೆಯಲ್ಲಿ ಉದ್ಯೋಗ ಮೇಳ: ನೋಂದಣಿಗೆ ಕ್ರಮವಹಿಸಿ- ಕಾಂತಾ ನಾಯಕ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ, ಜ.27:ಜಿಲ್ಲೆಯ ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಒದಗಿಸುವ ಉದ್ದೇಶದಿಂದ ಫೆ.2ರಂದು ಬೆಳಿಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ನಗರದ ದರ್ಬಾರ ಶಾಲಾ ಆವರಣದಲ್ಲಿ ಉದ್ಯೋಗ ಮೇಳ ಆಯೋಜಿಲಾಗಿದೆ. ಈ ಉದ್ಯೋಗ ಮೇಳದಲ್ಲಿ ಜಿಲ್ಲೆಯ ನಿರುದ್ಯೋಗಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ https://udyogamela.kdckarnataka.comಮೂಲಕ ಕ್ಲಿಕ್‌ಮಾಡಿ ವಿವರ ಭರ್ತಿ ಮಾಡಿ, ನೋಂದಾಯಿಸಿಕೊಂಡು, ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವ ನಿಟ್ಟಿನಲ್ಲಿ ಅಗತ್ಯ ಮಾಹಿತಿ ಒದಗಿಸುವಂತೆ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷೆ ಕಾಂತಾ ನಾಯ್ಕ ಅವರು ಸೂಚನೆ ನೀಡಿದರು.ನಗರದ ಜಿಲ್ಲಾಧಿಕಾರಿ…

Read More

ತಾಲೂಕು-ಜಿಲ್ಲಾಮಟ್ಟದ ವಿಶೇಷ ಚೇತನರ ಕ್ರೀಡಾಕೂಟ:ನೋಂದಣಿಗೆ ಸೂಚನೆ

ಸಪ್ತಸಾಗರ ವಾರ್ತೆ, ವಿಜಯಪುರ,ನ.18:ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2025-26ನೇ ಸಾಲಿನ ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ಐದು ತಾಲೂಕುಗಳಲ್ಲಿ ಜಿಲ್ಲಾ ಮಟ್ಟದ ವಿಶೇಷ ಚೇತನರ ಕ್ರೀಡಾಕೂಟ ಆಯೋಜಿಸಲಾಗಿದೆ.ತಾಲೂಕು ಮಟ್ಟದ ವಿಶೇಷ ಚೇತನರ ಕ್ರೀಡಾಕೂಟವನ್ನು ನವೆಂಬರ್ 25ರಂದು ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಎಂ.ವೈ.ಚಿಂಚಲಿ-ಮೊಬೈಲ ಸಂಖ್ಯೆ: 9449939580, ರವಿ ರಾಠೋಡ-ಮೊಬೈಲ ಸಂಖ್ಯೆ: 903555337, ಇಂಡಿ ತಾಲೂಕು ಕ್ರೀಡಾಂಗಣದಲ್ಲಿ ಎಚ್.ಕೆ.ಮಳಗೊಂಡ-ಮೊಬೈಲ ಸಂಖ್ಯೆ: 9632315492, ಪರಶುರಾಮ ಭೋಸಲೆ-ಮೊಬೈಲ ಸಂಖ್ಯೆ: 9972441464, ಸಿಂದಗಿ ತಾಲೂಕು…

Read More

ವೃಕ್ಷೋಥಾನ್ ರನ್-ನೋಂದಣಿಗೆ ನವೆಂಬರ್ 19 ಕೊನೆಯ ದಿನ

ಸಪ್ತಸಾಗರ ವಾರ್ತೆ, ವಿಜಯಪುರ, ನ. 13: ವೃಕ್ಷೋಥಾನ್ ಹೆರಿಟೇಜ್ ರನ್ ಆರನೇ ಆವೃತ್ತಿ ಬರುವ ಡಿಸೆಂಬರ್ 7 ರಂದು ಜರುಗಲಿದ್ದು, ನೋಂದಣಿ ಮಾಡಿಕೊಳ್ಳಲು ನವೆಂಬರ್ 19 ಕೊನೆಯ ದಿನವಾಗಿದೆ. ಆಸಕ್ತರು ಈ ಕೂಡಲೇ ನೋಂದಣಿ ಮಾಡಿಸಿಕೊಳ್ಳಬೇಕು ಎಂದು ಸಂಘಟಕ, ವಿಜಯಪುರ ಸೈಕ್ಲಿಂಗ್ ಗ್ರುಪ್ ಅಧ್ಯಕ್ಷ ಡಾ.ಮಹಾಂತೇಶ ಬಿರಾದಾರ ಹೇಳಿದರು.ವಿಜಯಪುರದಲ್ಲಿ ಬುಧವಾರ ಸಂಜೆ ನಡೆದ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ 11 ಸಾವಿರಕ್ಕೂ ಹೆಚ್ಚು ಓಟಗಾರರು ನೋಂದಣಿ ಮಾಡಿಸಿಕೊಂಡಿದ್ದು, ನೋಂದಣಿಗೆ ಕೊನೆಯ 5 ದಿನಗಳು ಮಾತ್ರ ಉಳಿದಿದ್ದು,…

Read More

ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಚುರುಕು

ಸಪ್ತಸಾಗರ ವಾರ್ತೆ, ವಿಜಯಪುರ, ನ. 12: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025 ರ ನೋಂದಣಿ ಕಾರ್ಯ ಭರದಿಂದ ಸಾಗಿದ್ದು, ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೊಳ್ಳಲು ನೋಂದಣಿ ಮಾಡಿಸಿದ್ದಾರೆ.ಸರಕಾರಿ ಇಲಾಖೆಯ ಅಧಿಕಾರಿಗಳು, ಉಪನ್ಯಾಸಕರು, ವೈದ್ಯರು ಸೇರಿದಂತೆ ನಾನಾ ಕ್ಷೇತ್ರಗಳ ಕ್ರೀಡಾಸಕ್ತರು ತಮ್ಮ ಕುಟುಂಬ ಸಮೇತ ನೋಂದಣಿ ಮಾಡಿಸುವ ಮೂಲಕ ಈ ಬಾರಿಯ ಓಟಕ್ಕೆ ಮೆರಗು ತರುತ್ತಿದ್ದಾರೆ.ಯಾದಗಿರಿ ಅಬಕಾರಿ ಇಲಾಖೆಯ ನಿರೀಕ್ಷಕ ಶ್ರೀಶೈಲ ಒಡೆಯರ 10…

Read More

ಉಚಿತ ಮೀನು ಮರಿ ವಿತರಣೆ : ಹೆಸರು ನೋಂದಣಿಗೆ ಅವಕಾಶ

ಸಪ್ತಸಾಗರ ವಾರ್ತೆ, ವಿಜಯಪುರ, ಆ. 12:ಮೀನುಗಾರಿಕೆ ಇಲಾಖೆ ವತಿಯಿಂದ 2025-26ನೇ ಸಾಲಿನ ಜಿಲ್ಲಾ ವಲಯ ಒಳನಾಡು ಮೀನುಗಾರಿಕೆ ಅಭಿವೃದ್ಧಿಗೆ ಸಹಾಯ ಸೌಲಭ್ಯ ಯೋಜನೆಯಡಿ ಬಾವಿ ಹಾಗೂ ಕೃಷಿ ಹೊಂಡ ಹೊಂದಿರುವ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ.ವಿಜಯಪುರ, ಬಬಲೇಶ್ವರ, ತಿಕೋಟಾ, ಸಿಂದಗಿ, ಚಡಚಣ, ಇಂಡಿ, ದೇವರಹಿಪ್ಪರಗಿ, ಆಲಮೇಲ ತಾಲೂಕಿನ ರೈತರು ಆಗಸ್ಟ್ 20ರೊಳಗಾಗಿ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿಗೆ ಭೇಟಿ ನೀಡಿ ಹೆಸರು ನೋಂದಾಯಿಸಿಕೊಳ್ಳಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲೆಯ ಮೀನುಗಾರಿಕೆ ಸಹಾಯಕ ನಿರ್ದೇಶಕರ ಮೊಬೈಲ್ ಸಂಖ್ಯೆ: 9845927110 ಸಂಪರ್ಕಿಸಬಹುದಾಗಿದೆ ಎಂದು…

Read More