
ಅವೈಜ್ಞಾನಿಕ ಮೀಸಲಾತಿ ಕೈಬಿಡಿ, ಎಲ್ಲರಿಗೂ ಸಮಾನ ಮೀಸಲಾತಿ ನೀಡಿ
ಸಪ್ತಸಾಗರ ವಾರ್ತೆ ವಿಜಯಪುರ, ಆ. 30 :ಒಳಮೀಸಲಾತಿ ವರ್ಗೀಕರಣ ಅವೈಜ್ಞಾನಿಕವಾಗಿದೆ. ಅವೈಜ್ಞಾನಿಕ ಒಳಮೀಸಲಾತಿ ರದ್ದುಗೊಳಿಸಿ, ಕಲ್ಪಿಸುವುದಾದರೆ ಎಲ್ಲರಿಗೂ ಸಮಾನವಾಗಿ ಮೀಸಲಾತಿ ನೀಡಿ ಎಂದು ಬಂಜಾರಾ, ಕೊರಚ, ಕೊರಮ, ಭೋವಿ ಸಮುದಾಯದ ಮುಖಂಡರು ಸರ್ಕಾರಕ್ಕೆ ಒತ್ತಾಯಿಸಿದರು.ವಿವಿಧ ಸಮಾಜ ಮುಖಂಡರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರಕ್ಕೆ ಒತ್ತಾಯಿಸಿದರು.ಈ ಎಲ್ಲ ಸಂದೇಶವನ್ನು ಸರ್ಕಾರಕ್ಕೆ ತಲುಪಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ೧೦ ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಲು ನಿರ್ಧರಿಸಲಾಗಿದೆ ಎಂಬ ಮಾಹಿತಿಯನ್ನು ತಿಳಿಸಿದರು.ಮಾಜಿ ಶಾಸಕ ಮನೋಹರ ಐನಾಪೂರ, ಸ್ಪೃಶ್ಯ, ಅಸ್ಪೃಶ್ಯ ಎಂಬ…