
ಸಿಂದಗಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಒಂದೇ ದಿನ ನಾಲ್ಕು ಬಾರಿ ಭೂಕಂಪನ: ಜನರಲ್ಲಿ ಆತಂಕ
ಸಪ್ತಸಾಗರ ವಾರ್ತೆ, ವಿಜಯಪುರ, ಸೆ. 19:ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಜನರಿಗೆ ಒಂದೇ ದಿನ ನಾಲ್ಕು ಬಾರಿ ಭೂಕಂಪನ ಸಂಭವಿಸಿದ ಅನುಭವವಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಜಿಲ್ಲೆಯ ಸಿಂದಗಿ ಪಟ್ಟಣದ ಸುತ್ತಮುತ್ತ ಒಂದೇ ದಿನ ನಾಲ್ಕು ಬಾರಿ ಭೂಮಿ ಕಂಪನದ ಅನುಭವವಾಗಿದೆ ಎಂದು ಜನರು ತಿಳಿಸಿದ್ದಾರೆ.ನಿನ್ನೆ ಮಧ್ಯಾಹ್ನ 3 ಗಂಟೆ, ರಾತ್ರಿ 10 ಗಂಟೆ 11ನಿಮಿಷ, ಮತ್ತೆ ರಾತ್ರಿ 10.25, ಮತ್ತೊಮ್ಮೆ 10.47 ಒಟ್ಟು 4 ಬಾರಿ ಭೂಮಿ ಕಂಪನಿಸಿದ ಅನುಭವವಾಗಿದೆ ಎಂದು ಜನರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.ಜೋರಾದ…