ರೌಡಿಶೀಟರ್ ಗಳ ಮನೆ ಪರಿಶೀಲನೆ ನಡೆಸಿದ ಪೊಲೀಸರು
ಸಪ್ತಸಾಗರ ವಾರ್ತೆ, ವಿಜಯಪುರ, ಜೂ. 10:ಪೊಲೀಸ ಇಲಾಖೆಯು ದಿನನಿತ್ಯದ ಕಾನೂನು ಸುವ್ಯವಸ್ಥೆ ಕಾಪಾಡಲು, ನಾಗರಿಕರ ಹಕ್ಕುಗಳನ್ನು ರಕ್ಷಿಸಲು ಮತ್ತು ಶಾಂತಿಯುತ ವಾತಾವರಣ ನಿರ್ಮಿಸುವ ಉದ್ದೇಶದಿಂದ ಠಾಣೆಗಳ ವ್ಯಾಪ್ತಿಯಲ್ಲಿ ಕಂಡು ಬರುವ ರೌಡಿ ಚಟುವಟಿಕೆಗಳ ಮೇಲೆ ನಿರಂತರ ನಿಗಾ ವಹಿಸಿ, ಕ್ರಮಗಳನ್ನು ಕೈಕೊಳ್ಳಲಾಗುತ್ತಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಸರ್ಕಾರವು ರೌಡಿ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ಕ್ರಮದ ಭಾಗವಾಗಿ ಠಾಣೆ/ ವೃತ್ತ ಮಟ್ಟದಲ್ಲಿ ‘ರೌಡಿ ನಿಗ್ರಹ ದಳ’ (Anti Rowdy Squad) ರಚಿಸಿ, ಕ್ರಮ ವಹಿಸಲು…


